ವರದಿ :ಸ್ಟೀಫನ್ ಜೇಮ್ಸ್.
ನಮ್ಮ ತಂದೆಯವರು ಸಾಮಾಜಿಕ ನ್ಯಾಯದಲ್ಲಿ ನಂಬಿಕೆ ಇಟ್ಟುಕೊಂಡವರು. ಅದೇ ಸಿದ್ದಾಂತದಲ್ಲಿ ಸತೀಶ್ ಜಾರಕಿಹೊಳಿಯವರು ನಂಬಿಕೆ ಇಟ್ಟುಕೊಂಡು ಹೋಗ್ತಿದ್ದಾರೆ. ಮುಂದಿನ ದಿನಗಳಲ್ಲಿ ಅವರೇ ಲೀಡ್ ಮಾಡಬೇಕು ಎಂದು ವಿಧಾನ ಪರಿಷತ್ತಿನ ಸದಸ್ಯ ಯತೀಂದ್ರ ಸಿದ್ದರಾಮಯ್ಯ ಹೇಳಿದರು.
ಗುರುವಾರ ಬೆಳಗಾವಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದರು. ಮುಂಬರುವ 2028ರ ಚುನಾವಣೆಯಲ್ಲಿ ತಂದೆಯವರು ನಿಲ್ಲಲ್ಲ ಅಂದಿದ್ದಾರೆ. ಅದು ಆದ ಮೇಲೆ ಜಾತ್ಯಾತೀತ ಕಾಂಗ್ರೆಸ್ ಸಿದ್ದಾಂತ ಇಟ್ಟುಕೊಂಡು ಎಷ್ಟೋ ಜನ ರಾಜಕಾರಣಿಗಳಿದ್ದಾರೆ. ಅವರೆಲ್ಲರನ್ನ ಸತೀಶ್ ಜಾರಕಿಹೊಳಿ ಮುನ್ನಡೆಸಲಿ. 2028ರ ನಂತರ ಆ ರೀತಿ ಲೀಡ್ ಮಾಡೋರು ಬೇಕು ಎಂದರು.
ಸೈದಾಂತಿಕ ರಾಜಕಾರಣ ಮಾಡುವುದರಲ್ಲಿ ಸತೀಶ್ ಜಾರಕಿಹೊಳಿ ಕೂಡ ಒಬ್ಬರು. ಆ ರೀತಿ ಸಿದ್ದಾಂತ ಇಟ್ಟುಕೊಂಡವರಿಗೆ ಸತೀಶ್ ಜಾರಕಿಹೊಳಿ ಮಾರ್ಗದರ್ಶನ ಮಾಡಲಿ. ಕೊನೆ ದಿನ ಅಂದ್ರೇ ನಾಳೆಯೇ ಕೊನೆಯ ದಿನ ಅಲ್ಲಾ. 2028 ಗಮನದಲ್ಲಿಟ್ಟುಕೊಂಡು ಹೇಳಿದ್ದೇನೆ ಎಂದರು.
ಮುಂದಿನ ರಾಜಕೀಯ ಉತ್ತರಾಧಿಕಾರಿ ಸತೀಶ್ ಜಾರಕಿಹೊಳಿ ಎಂಬ ಹೇಳಿಕೆಗೆ ಉತ್ತರಿಸಿದ ಅವರು, ರಾಜಕೀಯ ಉತ್ತರಾಧಿಕಾರಿ ಬಗ್ಗೆ ಮಾತನಾಡಿಲ್ಲ. ಆದರೆ ಆ ರೀತಿ ಸೈದಾಂತಿಕವಾಗಿ ರಾಜಕಾರಣ ಮಾಡುವವರನ್ನ ಲೀಡ್ ಮಾಡಲಿ ಅನ್ನೋ ಉದ್ದೇಶ ಇಟ್ಟುಕೊಂಡು ಹೇಳಿದ್ದೇನೆ ಎಂದರು.
ನವೆಂಬರ್ ಕ್ರಾಂತಿ ಬರೀ ಊಹಾಪೋಹ ಮಾತನಾಡುತ್ತಿದ್ದಾರೆ. ಯಾವುದೇ ನಾಯಕತ್ವದ ಬದಲಾವಣೆ ಪ್ರಶ್ನೆ ಇಲ್ಲ.ಈ ರೀತಿ ಚರ್ಚೆ ಪಕ್ಷದಲ್ಲಿ ನಡೆದಿಲ್ಲ ಎಂದರು.
ಸತೀಶ್ ಜಾರಕಿಹೊಳಿ ಮುಂದಿನ ಸಿಎಂ ಎಂಬ ಹೇಳಿಕೆ ಪ್ರತಿಕ್ರಿಯೆ ನೀಡಿದ ಅವರು, ಆ ರೀತಿ ಸಿಎಂ ಆಗುವ ಅರ್ಹತೆ ಇದ್ದವರು ಅನೇಕ ನಾಯಕರು ಇದಾರೆ. ಎಲ್ಲಾ ಶಾಸಕರು ಹೈಕಮಾಂಡ್ ತೀರ್ಮಾನ ಮಾಡುತ್ತೆ. ಸದ್ಯಕ್ಕೆ ಸಿಎಂ ಬದಲಾವಣೆ ಚರ್ಚೆ ಇಲ್ಲಾ ಎಂದರು.
ಸಿದ್ದರಾಮಯ್ಯ ಹೊರತುಪಡಿಸಿದರ ಅವರ ಸ್ಥಾನ ತುಂಬವ ಶಕ್ತಿ ಸತೀಶ್ ಜಾರಕಿಹೊಳಿಗೆ ಖಂಡಿತ ಇದೆ.ತಂದೆಯವರು ರಾಜಕೀಯ ನಿವೃತ್ತಿಯಾದ ಬಳಿಕ ಆ ಸ್ಥಾನ ತುಂಬುವ ಶಕ್ತಿ ಕೆಲವೇ ನಾಯಕರಲ್ಲಿ ಸತೀಶ್ ಜಾರಕಿಹೊಳಿಗೆ ಇದೆ ಎಂದರು.



                                    