Friday, March 27, 2026
Google search engine

Homeರಾಜಕೀಯಸತೀಶ್ ಜಾರಕಿಹೊಳಿ ಕುಮಾರಸ್ವಾಮಿ ಭೇಟಿ : ಸಿಎಂ ಆಸೆಗಾಗಿ ಜೆಡಿಎಸ್ ಬೆಂಬಲ? ಜಿಟಿಡಿ ಬಾಂಬ್

ಸತೀಶ್ ಜಾರಕಿಹೊಳಿ ಕುಮಾರಸ್ವಾಮಿ ಭೇಟಿ : ಸಿಎಂ ಆಸೆಗಾಗಿ ಜೆಡಿಎಸ್ ಬೆಂಬಲ? ಜಿಟಿಡಿ ಬಾಂಬ್

ಮೈಸೂರು : ಸತೀಶ್ ಜಾರಕಿಹೊಳಿ ಸಿಎಂ ಆಗಲು ಹೆಚ್.ಡಿ.ಕುಮಾರಸ್ವಾಮಿ ಅವರನ್ನು ಭೇಟಿಯಾಗಿರಬಹುದು. ರಾಜಕಾರಣದಲ್ಲಿ ಏನಾದ್ರೂ ಆಗಬಹುದು ಎಂದು ಶಾಸಕ ಜಿ.ಟಿ. ದೇವೇಗೌಡ ಹೊಸ ಬಾಂಬ್ ಸಿಡಿಸಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮುಖ್ಯಮಂತ್ರಿ ಆಗಲು ಸತೀಶ್ ಜಾರಕಿಹೊಳಿ ಅವರು 18 ಜೆಡಿಎಸ್ ಶಾಸಕರ ಬೆಂಬಲ ಕೇಳಿರಬಹುದು. ರಾಜಕಾರಣದಲ್ಲಿ ಏನು ಬೇಕಾದ್ರೂ ಆಗಬಹುದು. ಹೆಚ್.ಡಿ. ಕುಮಾರಸ್ವಾಮಿ ಅವರನ್ನು ಭೇಟಿಯಾಗಿ ಜೆಡಿಎಸ್ ಶಾಸಕರ ಬೆಂಬಲ ಕೇಳಿರಬಹುದು ಎಂದು ಹೇಳಿದ್ದಾರೆ.

ಇನ್ನು ನಿನ್ನೆಯಷ್ಟೇ ಸಚಿವ ಸತೀಶ್ ಜಾರಕಿಹೊಳಿ ಅವರು ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಅವರ ನಿವಾಸಕ್ಕೆ ಭೇಟಿ ನೀಡಿದ್ದು, ರಾಜ್ಯ ರಾಜಕೀಯದಲ್ಲಿ ತೀವ್ರ ಕುತೂಹಲ ಮೂಡಿಸಿದೆ.

RELATED ARTICLES
- Advertisment -
Google search engine

Most Popular