ವರದಿ: ವಿನಯ್ ದೊಡ್ಡಕೊಪ್ಪಲು
ಕೆ.ಆರ್.ನಗರ : 78 ನೇ ಸ್ವಾತಂತ್ರ್ಯ ದಿನಾಚರಣೆ ಹಾಗೂ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಅವರ ಜಯಂತೋತ್ಸವದ ಅಂಗವಾಗಿ ಎಸ್ ಎಸ್ ಎಲ್ ಸಿ ಹಾಗೂ ಪಿ.ಯು.ಸಿ ಪರೀಕ್ಷೆಯಲ್ಲಿ ಅತಿ ಹೆಚ್ಚು ಅಂಕ ಪಡೆದು ಉತ್ತಿರ್ಣರಾದ ವಿಧ್ಯಾರ್ಥಿಗಳಿಗೆ ಹುಣಸೂರು ತಾಲೂಕು ಜನಧ್ವನಿ ಫೌಂಡೇಶನ್ ವತಿಯಿಂದ ಅಭಿನಂದಿಸಲಾಯಿತು.
ಹುಣಸೂರು ತಾಲೂಕಿನ ತೆಂಕನ ಕೊಪ್ಪಲು ಸರ್ಕಾರಿ ಫೌಂಡ ಶಾಲೆ ಮತ್ತು ಬಿಳಿಕೆರೆಯ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ನಡೆದ ಕಾರ್ಯಕ್ರಮದಲ್ಲಿ ಮಾತನಾಡಿದ ಫೌಂಡೇಶನ್ ಅಧ್ಯಕ್ಷರು ಅದ ವಕೀಲ ಆಯರಹಳ್ಳಿ ಪ್ರವೀಣ್ ಓದುವುದರ ಜೊತೆಗೆ ಶಿಸ್ತುಮತ್ತು ಸಂಯಮ ನಮ್ಮ ಜೀವನದಲ್ಲಿ ಪ್ರಮುಖ ಪಾತ್ರ ವಹಿಸುತ್ತದೆ ನಾವೆಲ್ಲರೂ ನಾವು ಓದಿದ ಶಾಲೆ ಮತ್ತು ಕಾಲೇಜುಗಳಿಗೆ ಋಣಿಯಾಗಿರಬೇಕು ಸರ್ಕಾರಿ ಶಾಲೆಗಳನ್ನು ಉಳಿಸಿ ಬೆಳೆಸಬೇಕು ಎಂದರು.

ಈ ಸಂದರ್ಭದಲ್ಲಿ ಬಿಳಿಕೆರೆ ಕೃಷಿ ಪತ್ತಿನ ಸಹಕಾರ ಸಂಘದ ನಿರ್ದೆಶಕರಾದ ಮಹದೇವಸ್ವಾಮಿ , ತೆಂಕನಕೊಪ್ಪಲು ಶಾಲೆಯಎಸ್. ಡಿ. ಎಂ.ಸಿ ಅಧ್ಯಕ್ಷರಾದ ಯತೀಸ್,ಶಿಕ್ಷಕ ಸುನೀಲ್, ಕಾಲೇಜಿನ ಪ್ರಾಂಶುಪಾಲರಾದ ಸಾವಿತ್ರಮ್ಮ ಸೇರಿದಂತೆ ಮತ್ತಿತರರು ಹಾಜರಿದ್ದರು.