ಮದ್ದೂರು: ತಾಲೂಕಿನ ಕೋಣಸಾಲೆ ಗ್ರಾಮದ ಸರ್ಕಾರಿ ಪ್ರೌಢಶಾಲಾ ಆವರಣದಲ್ಲಿ ತಾಲೂಕು ಆಡಳಿತ ಹಾಗೂ ಅರಣ್ಯ ಇಲಾಖೆಯ ಸಹಯೋಗದಲ್ಲಿ ವಿಶ್ವ ಪರಿಸರ ದಿನಾಚರಣೆ ಪ್ರಯುಕ್ತ ಗಿಡ ನೆಟ್ಟು ವಿದ್ಯಾರ್ಥಿಗಳಿಗೆ ತಹಶೀಲ್ದಾರ್ ಸೋಮಶೇಖರ್ ಗಿಡಗಳನ್ನು ನೀಡುವ ಮೂಲಕ ಪರಿಸರ ಜಾಗೃತಿ ಮೂಡಿಸಿದರು.
ನಮ್ಮ ಸುತ್ತಮುತ್ತಲಿನ ಪರಿಸರವನ್ನು ಶುಚಿಯಾಗಿ ಇಟ್ಟುಕೊಳ್ಳುವುದರ ಜೊತೆಗೆ ಪ್ರತಿಯೊಬ್ಬರು ತಮ್ಮ ಹುಟ್ಟು ಹಬ್ಬದಂದು ಹಾಗೂ ವಿಶೇಷ ದಿನಗಳಲ್ಲಿ ಗಿಡಗಳನ್ನು ನೆಟ್ಟು ಪರಿಸರವನ್ನು ಉಳಿಸಬೇಕಾಗಿದೆ ಎಂದರು.
ಎಸ್ ಎಸ್ ಎಲ್ ಸಿ ವಿದ್ಯಾರ್ಥಿಗಳು ಈಗಿನಿಂದಲೇ ಶ್ರಮವಹಿಸಿದರೆ ಮುಂದಿನ ದಿನಗಳಲ್ಲಿ ನೀವು ಅಂದುಕೊಂಡ ಹಾಗೆ ಉನ್ನತ ಮಟ್ಟದ ಅಧಿಕಾರಿಗಳಾಗಬಹುದು ಲೇಖನಿಗಿರುವ ಶಕ್ತಿ ಬೇರೆ ಯಾವುದಕ್ಕೂ ಇಲ್ಲ ಎಂದು ವಿದ್ಯಾರ್ಥಿಗಳಿಗೆ ಕಿವಿಮಾತು ಹೇಳಿದರು.
ಈ ವೇಳೆ ವಲಯ ಅರಣ್ಯ ಅಧಿಕಾರಿ ಗವಿಯಪ್ಪ, ಸಾಮಾಜಿಕ ವಲಯ ಅರಣ್ಯ ಅಧಿಕಾರಿ ಶಶಿಕುಮಾರ್, ಆರ್ ಐ ಮಹೇಂದ್ರ ಸೇರಿದಂತೆ ಇತರರು ಹಾಜರಿದ್ದರು.