Thursday, April 9, 2026
Google search engine

Homeರಾಜ್ಯದ್ಚಿತೀಯ ಪಿಯುಸಿ ಪರೀಕ್ಷೆ ಫಲಿತಾಂಶ ಪ್ರಕಟ

ದ್ಚಿತೀಯ ಪಿಯುಸಿ ಪರೀಕ್ಷೆ ಫಲಿತಾಂಶ ಪ್ರಕಟ

ಬೆಂಗಳೂರು: ದ್ವಿತೀಯ ಪಿಯುಸಿ ಪರೀಕ್ಷೆ-1ರ ಫಲಿತಾಂಶವನ್ನು ಗುರುವಾರ (ಏ.9) ಮಧ್ಯಾಹ್ನ 3 ಗಂಟೆಗೆ ವೆಬ್‌ಸೈಟ್‌, ಮೊಬೈಲ್‌ ಆ್ಯಪ್‌ನಲ್ಲಿ ಪ್ರಕಟಿಸಲಾಗಿದೆ.

ಫಲಿತಾಂಶವನ್ನು https://karresults.nic.in ವೆಬ್‌ಸೈಟ್‌, “ಕರ್ನಾ ಟಕ ಒನ್‌’ ಮೊಬೈಲ್‌ ಆ್ಯಪ್‌ ಮೂಲಕವೂ ಪಡೆಯಬಹುದು. ವಿದ್ಯಾರ್ಥಿಗಳ ನೋಂದಾಯಿತ ಮೊಬೈಲ್‌ ಸಂಖ್ಯೆಗೆ ವಾಟ್ಸ್‌ ಆ್ಯಪ್‌/ಎಸ್‌ಎಂಎಸ್‌ ಮೂಲಕವೂ ಫಲಿತಾಂಶ ರವಾನೆಯಾಗಲಿದೆ.

ಮೊದಲ ಬಾರಿಗೆ ವಿದ್ಯಾರ್ಥಿಗಳ ಫಲಿತಾಂಶ ಪ್ರಕಟಣೆ ವೇಳೆಯೇ ಅಂಕಪಟ್ಟಿಗಳನ್ನೂ ಡಿಜಿಲಾಕರ್‌ ನಲ್ಲಿ ಅಪ್‌ಲೋಡ್‌ ಮಾಡಲಾಗುತ್ತದೆ. https://www.digilocker.gov.in ಮೂಲಕ ವಿದ್ಯಾರ್ಥಿಗಳು ತಮ್ಮ ಅಂಕಪಟ್ಟಿ ಡೌನ್‌ಲೋಡ್‌ ಮಾಡಿಕೊಳ್ಳಬಹುದು ಎಂದು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿ ಮಾಹಿತಿ ನೀಡಿದೆ.

ಅಂಕಪಟ್ಟಿ ಡಿಜಿಲಾಕರ್‌ ಮೂಲಕ ಯಾವ ರೀತಿ ಡೌನ್‌ಲೋಡ್‌ ಮಾಡಿ ಕೊಳ್ಳಬೇಕು ಎಂಬ ಮಾಹಿತಿ https://tinyurl.com/mw84wmh9 ನಲ್ಲಿ ತಿಳಿದುಕೊಳ್ಳಬಹುದು.

ಸಂಜೆ 6.15ಕ್ಕೆ ಮಂಡಳಿಯಲ್ಲಿ ಫಲಿತಾಂಶದ ಸಮಗ್ರ ಮಾಹಿತಿಯನ್ನು ಶಿಕ್ಷಣ ಸಚಿವ ಮಧು ಬಂಗಾರಪ್ಪ ಸುದ್ದಿಗೋಷ್ಠಿಯಲ್ಲಿ ಪ್ರಕಟಿಸಲಿದ್ದಾರೆ.

RELATED ARTICLES
- Advertisment -
Google search engine

Most Popular