Tuesday, July 14, 2026
Google search engine

Homeರಾಜಕೀಯಗೃಹ ಸಚಿವರ ತವರು ಜಿಲ್ಲೆಯಲ್ಲೇ ಭದ್ರತಾ ವೈಫಲ್ಯ : ಸರ್ಕಾರದ ವಿರುದ್ಧ ಬಿವೈ ವಿಜಯೇಂದ್ರ ಕಿಡಿ

ಗೃಹ ಸಚಿವರ ತವರು ಜಿಲ್ಲೆಯಲ್ಲೇ ಭದ್ರತಾ ವೈಫಲ್ಯ : ಸರ್ಕಾರದ ವಿರುದ್ಧ ಬಿವೈ ವಿಜಯೇಂದ್ರ ಕಿಡಿ

ಕಲಬುರಗಿ : ಗೃಹ ಸಚಿವ ಪ್ರಿಯಾಂಕ್ ಖರ್ಗೆ ಅವರ ತವರು ಜಿಲ್ಲೆ ಕಲಬುರಗಿಯ ಸೆಂಟ್ರಲ್ ಜೈಲಿನಿಂದ ಮೂವರು ಸಜಾ ಕೈದಿಗಳು ಪರಾರಿಯಾದ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

ಈ ಕುರಿತು ಪ್ರತಿಕ್ರಿಯಿಸಿದ ವಿಜಯೇಂದ್ರ, ಪ್ರಿಯಾಂಕ್ ಖರ್ಗೆ ಅವರು ಇರಾನ್-ಅಮೆರಿಕ ಯುದ್ಧದ ಬಗ್ಗೆ ಹೆಚ್ಚು ಗಮನ ಹರಿಸುತ್ತಿದ್ದಾರೆ. ತಮ್ಮ ಇಲಾಖೆಯ ಜವಾಬ್ದಾರಿಗಳ ಬಗ್ಗೆ ಮೊದಲು ಗಮನ ನೀಡಬೇಕು ಎಂದು ವ್ಯಂಗ್ಯವಾಡಿದರು.

ಗೃಹ ಸಚಿವರ ತವರು ಜಿಲ್ಲೆಯಲ್ಲೇ ಜೈಲು ಭದ್ರತಾ ವ್ಯವಸ್ಥೆಯಲ್ಲಿ ಲೋಪ ಉಂಟಾಗಿ ಕೈದಿಗಳು ಪರಾರಿಯಾಗಿರುವುದು ಗಂಭೀರ ವಿಚಾರವಾಗಿದೆ ಎಂದ ಅವರು ಜೈಲು ಭದ್ರತೆಯಲ್ಲಿನ ವೈಫಲ್ಯಗಳ ಕುರಿತು ಸರ್ಕಾರ ಸಮಗ್ರ ತನಿಖೆ ನಡೆಸಿ, ನಿರ್ಲಕ್ಷ್ಯ ತೋರಿದವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು.

ಕಾನೂನು ಸುವ್ಯವಸ್ಥೆ ಹಾಗೂ ಜೈಲುಗಳ ಭದ್ರತೆ ಸರ್ಕಾರದ ಪ್ರಮುಖ ಜವಾಬ್ದಾರಿಯಾಗಿದ್ದು, ಇಂತಹ ಘಟನೆಗಳು ಮರುಕಳಿಸದಂತೆ ಅಗತ್ಯ ಕ್ರಮಗಳನ್ನು ಕೈಗೊಳ್ಳಬೇಕು ಎಂದು ವಿಜಯೇಂದ್ರ ಒತ್ತಾಯಿಸಿದರು.

RELATED ARTICLES
- Advertisment -
Google search engine

Most Popular