ಮೈಸೂರು: ಬೆಂ-ಮೈ ದಶಪಥ ಹೆದ್ದಾರಿಯಲ್ಲಿ ಸರಣಿ ಅಪಘಾತ ಸಂಭವಿಸಿದ್ದು, ಕಾರೊಂದು ಹೊತ್ತಿ ಉರಿದಿರುವ ಘಟನೆ ಗೌರಿಪುರ ಗ್ರಾಮದ ಬಳಿ ನಡೆದಿದೆ.
ಮಂಡ್ಯ ಜಿಲ್ಲೆ ಶ್ರೀರಂಗಪಟ್ಟಣ ತಾಲ್ಲೂಕಿನ ಗೌರಿಪುರ ಗ್ರಾಮದ ಬಳಿ ಅತೀವೇಗವಾಗಿ ಬಂದ ಲಾರಿ ಕಾರಿಗೆ ಡಿಕ್ಕಿ ಹೊಡೆದಿದೆ.
ಮುಂಭಾಗದಲ್ಲಿ ಇದ್ದ ಕಾರುಗಳುಗಳಿಗೆ ಕಾರು ಡಿಕ್ಕಿ ಹೊಡೆದಿದೆ.. ಕಾರಿನಲ್ಲಿ ಇದ್ದವರನ್ನ ಪೊಲೀಸರು ರಕ್ಷಣೆ ಮಾಡಿದ್ದಾರೆ.
ಬೆಂಕಿ ಹೊತ್ತಿಕೊಳ್ಳುವ ವೇಳೆ ಕಿಟಕಿ ಗಾಜು ಒಡೆದು ಕಾರಿನಲ್ಲಿದ್ದವರನ್ನು ರಕ್ಷಣೆ ಮಾಡಲಾಗಿದೆ.
ಅಪಘಾತದ ವೇಳೆ ಶ್ರೀರಂಗಪಟ್ಟಣ ಕಡೆಗೆ ಹೋಗುತ್ತಿದ್ದ ಮಂಡ್ಯ ಎಸ್ ಪಿ ಯತೀಶ್ ವಾಹನಕ್ಕೂ ಕಾರು ಡಿಕ್ಕಿಯಾಗಿದೆ.
ಈ ಕುರಿತು ಶ್ರೀರಂಗಪಟ್ಟಣ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.



