Wednesday, May 21, 2025
Google search engine

Homeರಾಜಕೀಯಕಾವೇರಿ ವಿಷಯದಲ್ಲಿ ರಾಜ್ಯಕ್ಕೆ ಹಿನ್ನಡೆ: ಮಾಜಿ ಸಿಎಂ ಬಿ ಎಸ್ ಯಡಿಯೂರಪ್ಪ ಅಸಮಾಧಾನ

ಕಾವೇರಿ ವಿಷಯದಲ್ಲಿ ರಾಜ್ಯಕ್ಕೆ ಹಿನ್ನಡೆ: ಮಾಜಿ ಸಿಎಂ ಬಿ ಎಸ್ ಯಡಿಯೂರಪ್ಪ ಅಸಮಾಧಾನ

ಶಿವಮೊಗ್ಗ: ಕಾವೇರಿ ನದಿ ನೀರು ಹರಿಸುವಿಕೆಯಲ್ಲಿ ಕರ್ನಾಟಕ ರಾಜ್ಯಕ್ಕೆ ಅನ್ಯಾಯವಾಗುತ್ತಿದೆ. ನ್ಯಾಯಾಲಯದ ತೀರ್ಮಾನ ನಮಗೆ ಸಮಾಧಾನ ಇಲ್ಲ ಎಂದು ಮಾಜಿ ಸಿಎಂ ಬಿ ಎಸ್ ಯಡಿಯೂರಪ್ಪ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಶಿವಮೊಗ್ಗದ ತಮ್ಮ ನಿವಾಸದಲ್ಲಿ ಮಾತನಾಡಿದ ಅವರು, ಕಾವೇರಿ ವಿಷಯದಲ್ಲಿ ನಮ್ಮ ರಾಜ್ಯಕ್ಕೆ ಹಿನ್ನಡೆ ಆಗುತ್ತಿದೆ. ಸುಪ್ರೀಂ ಕೋರ್ಟ್​ಗೆ ಹೋಗಿ ಮೇಲ್ಮನವಿ ಮಾಡಿ ನ್ಯಾಯ ದೊರಕಿಸಿಕೊಡಬೇಕು. ಈ ನಿಟ್ಟಿನಲ್ಲಿ ಸರ್ಕಾರ ಮುಂದಾಗಬೇಕು ಎಂದು ಎಂದು ಆಗ್ರಹಿಸಿದರು.

ಉತ್ತರ ಕರ್ನಾಟಕದ ಸಮಸ್ಯೆ ಪರಿಹಾರಕ್ಕಾಗಿಯೇ ಬೆಳಗಾವಿಯಲ್ಲಿ ಅಧಿವೇಶನ ನಡೆಯಬೇಕೆಂದು ದೊಡ್ಡ ಸೌಧ ಕಟ್ಟಿದ್ದೇವೆ. ಬೆಳಗಾವಿಯಲ್ಲಿ ಅಧಿವೇಶನ ವರ್ಷಕ್ಕೊಮ್ಮೆ ಮಾಡಬೇಕು. ಅಲ್ಲಿ ಅಧಿವೇಶನ ನಡೆಸುವ ಬಗ್ಗೆ ತೀರ್ಮಾನ ಕೈಗೊಳ್ಳುವುದು ರಾಜ್ಯ ಸರ್ಕಾರಕ್ಕೆ ಬಿಟ್ಟಿದ್ದು ಎಂದರು.

ಅನಿಯಮಿತ ವಿದ್ಯುತ್ ಶಾಕ್ ಅನ್ನು ರಾಜ್ಯ ಸರ್ಕಾರ ನೀಡುತ್ತಿದೆ. ರೈತರ ಪಂಪಸೆಟ್​ ಗೆ ನೀರು ಸಿಗುತ್ತಿಲ್ಲ. ಅಲ್ಪ ಸ್ವಲ್ಪ ಬೆಳೆ ಮಾಡಲೂ ಆಗದ ಪರಿಸ್ಥಿತಿ ನಿರ್ಮಾಣ ಆಗಿದೆ. ಕೂಡಲೇ ಸರ್ಕಾರ ವಿದ್ಯುತ್ ಒದಗಿಸುವ ಬಗ್ಗೆ ಕ್ರಮ ವಹಿಸಬೇಕು ಎಂದರು.

ನಾನು ರಾಜ್ಯ ಈಗಾಗಲೇ ಪ್ರವಾಸಕ್ಕೆ ಹೊರಡಬೇಕಿತ್ತು. ಆದರೆ ಹಬ್ಬ ಮುಗಿದ ನಂತರ ಪ್ರವಾಸ ಕೈಗೊಳ್ಳುತ್ತೆನೆ ಎಂದರು.

RELATED ARTICLES
- Advertisment -
Google search engine

Most Popular