Thursday, May 22, 2025
Google search engine

Homeಅಪರಾಧಲೈಂಗಿಕ ದೌರ್ಜನ್ಯ ಪ್ರಕರಣ : ಬಿಜೆಪಿ ಮುಖಂಡ ದೇವರಾಜೇಗೌಡ ಪೊಲೀಸ್ ವಶಕ್ಕೆ

ಲೈಂಗಿಕ ದೌರ್ಜನ್ಯ ಪ್ರಕರಣ : ಬಿಜೆಪಿ ಮುಖಂಡ ದೇವರಾಜೇಗೌಡ ಪೊಲೀಸ್ ವಶಕ್ಕೆ

ಬೆಂಗಳೂರು: ಬಿಜೆಪಿ ಮುಖಂಡ, ವಕೀಲ ದೇವರಾಜೇಗೌಡ ಅವರನ್ನು ಚಿತ್ರದುರ್ಗ ಜಿಲ್ಲೆಯ ಹಿರಿಯೂರಿನಲ್ಲಿ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಮಹಿಳೆ ಮೇಲೆ ಲೈಂಗಿಕ ದೌರ್ಜನ್ಯ ಹಿನ್ನೆಲೆ ಹೊಳೆನರಸೀಪುರ ಠಾಣೆಯಲ್ಲಿ ದಾಖಲಾಗಿದ್ದ ಪ್ರಕರಣದಲ್ಲಿ ವಶಕ್ಕೆ ಪಡೆಯಲಾಗಿದೆ. ಮಹಿಳೆ ಮೇಲೆ ಲೈಂಗಿಕ ದೌರ್ಜನ್ಯ ಸಂಬಂಧ ಕೇಸ್ ದಾಖಲಾಗಿತ್ತು. ಇಂದು ಅದೇ ಮಹಿಳೆ ವಿರುದ್ಧ ದೇವರಾಜೇಗೌಡ ಹೆಬ್ಬಾಳ ಠಾಣೆಯಲ್ಲಿ ದೂರು ದಾಖಲಿಸಿದ್ದರು. ಇದೀಗ ದೇವರಾಜೇಗೌಡ ಹಿರಿಯೂರು ಠಾಣೆ ಪೊಲೀಸರ ವಶದಲ್ಲಿದ್ದಾರೆ.

ಸಂಸದ ಪ್ರಜ್ವಲ್ ರೇವಣ್ಣ ಪೆನ್ ಡ್ರೈವ್ ವೈರಲ್ ವಿಚಾರದಲ್ಲಿ ವಕೀಲ ದೇವರಾಜೇಗೌಡಗೆ ಸಂಕಷ್ಟ ಎದುರಾಗಿದೆ. ಮಹಿಳೆಗೆ ಲೈಂಗಿಕ ಕಿರುಕುಳ ನೀಡಿದ ಆರೋಪದಲ್ಲಿ ದಾಖಲಾಗಿದ್ದ ಕೇಸ್‌ನ ವಿಚಾರಗಳು ಬಹಿರಂಗವಾಗಿವೆ. ಏಪ್ರಿಲ್ ೧ ರಂದು ಹೊಳೆನರಸೀಪುರ ನಗರ ಠಾಣೆಯಲ್ಲಿ ಸಂತ್ರಸ್ಥ ಮಹಿಳೆಯಿಂದ ದೂರು ನೀಡಲಾಗಿತ್ತು. ತಮ್ಮ ನಿವೇಶನವೊಂದರ ಮಾರಾಟ ವಿಚಾರವಾಗಿ ವಕೀಲ ದೇವರಾಜೇಗೌಡ ಸಂಪರ್ಕ ಮಾಡಿರುವ ಬಗ್ಗೆ ದೂರಿನಲ್ಲಿ ಉಲ್ಲೇಖಿಸಲಾಗಿದೆ.

ಮಹಿಳೆ ಮೇಲಿನ ದೌರ್ಜನ್ಯ ಆರೋಪ ಕೇಸ್‌ನಲ್ಲಿ ಜಾಮೀನಿಗಾಗಿ ದೇವರಾಜೇಗೌಡ ಮೇ ೮ರಂದು ಹಾಸನದ ಎರಡನೇ ಅಧಿಕ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದಲ್ಲಿ ಅರ್ಜಿ ಸಲ್ಲಿಸಿದ್ದರು. ಮೇ ೧೫ ಕ್ಕೆ ಕೋರ್ಟ್ ವಿಚಾರಣೆ ಮುಂದೂಡಿದೆ. ಪ್ರಜ್ವಲ್ ಪೆನ್ ಡ್ರೈವ್ ಹಂಚಿಕೆ ಆರೋಪ ಪ್ರತ್ಯಾರೋಪದ ನಡುವೆ ದೇವರಾಜೇಗೌಡ ಮೇಲಿನ ಆರೋಪ ಪ್ರಕರಣ ತೀವ್ರ ಚರ್ಚೆ ಹುಟ್ಟು ಹಾಕಿದೆ. ಮಹಿಳೆ ಹಾಗೂ ಆಕೆಯ ಪತಿ ವಿರುದ್ಧ ಹನಿ ಟ್ಯಾಪ್ ಆರೋಪದಲ್ಲಿ ಬೆಂಗಳೂರಿನ ಹೆಬ್ಬಾಳ ಪೊಲೀಸ್ ಠಾಣೆಯಲ್ಲಿ ತನ್ನ ವಿರುದ್ದ ದೂರು ನೀಡಿದ್ದ ಮಹಿಳೆಯಿಂದ ಹನಿ ಟ್ರ್ಯಾಪ್ ಎಂದು ದೇವರಾಜೇಗೌಡ ದೂರು ನೀಡಿದ್ದು ಪ್ರಕರಣ ದಾಖಲಾಗಿದೆ.

RELATED ARTICLES
- Advertisment -
Google search engine

Most Popular