ಬೆಂಗಳೂರು: ಮಹಿಳೆಗೆ ಲೈಂಗಿಕ ದೌರ್ಜನ್ಯ ನೀಡದ ಆರೋಪದ ಮೇಲೆ ಬಂಧಿತರಾಗಿರುವ ಬಿಜೆಪಿ ಮುಖಂಡ ಮತ್ತು ವಕೀಲ ಡಿ ದೇವರಾಜೇಗೌಡ ಅವರ ಮೂರು ದಿನದ ಪೊಲೀಸ್ ಕಸ್ಟಡಿ ಅವಧಿ ಮುಗಿದಿದ್ದು, ಮೇ. ೨೪ವರೆಗೆ ಮತ್ತೆ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.
ಮೇ ೧೧ರಂದು ದೇವರಾಜೇಗೌಡ ಬಂಧನವಾಗಿತ್ತು. ಅಂದು ಪ್ರಕರಣದ ಮಾಹಿತಿ ಪಡೆದಿದ್ದ ನ್ಯಾಯಾಲಯವು ಅವರನ್ನು ೧೪ ದಿನ ನ್ಯಾಯಾಂಗ ಬಂಧನಕ್ಕೆ ನೀಡಿತ್ತು.
ಹೊಳೆನರಸೀಪುರ ಟೌನ್ ಠಾಣೆಯ ಪೊಲೀಸರು ಹೆಚ್ಚಿನ ತನಿಖೆಗಾಗಿ ಪೊಲೀಸ್ ಕಸ್ಟಡಿಗೆ ನೀಡುವಂತೆ ಮೇ.೧೩ರಂದು ಹಾಸನ ಜಿಲ್ಲೆಯ ಹೊಳೆನರಸೀಪುರ ತಾಲ್ಲೂಕಿನ ಹೆಚ್ಚುವರಿ ಸಿವಿಲ್ ನ್ಯಾಯಾಧೀಶ ಎಸ್ ಸಿದ್ದರಾಮ ಅವರಿಗೆ ಮನವಿ ಮಾಡಿದರು. ಈ ಮನವಿ ಪುರಸ್ಕರಿಸಿದ ನ್ಯಾಯಾಧೀಶರು ದೇವರಾಜೇಗೌಡರನ್ನು ಮೇ ೧೬ವರೆಗೆ ಪೊಲೀಸ್ ಕಸ್ಟಡಿ ನೀಡಿದ್ದರು.