ಮಂಗಳೂರು (ದಕ್ಷಿಣ ಕನ್ನಡ) : ಕರಾವಳಿಯಲ್ಲಿ ಆಚರಿಸಲಾಗುವ ನವರಾತ್ರಿ ಉತ್ಸವವು ದೇಶ-ವಿದೇಶದಲ್ಲಿ ಪ್ರಸಿದ್ಧಿ ಪಡೆದಿದೆ. ಇಂತಹ ಪುಣ್ಯ ಪರ್ವಕಾಲ ನವರಾತ್ರಿಯ ಶುಭ ಸಂದರ್ಭದಲ್ಲಿ ತುಳುವರ ಸಂಸ್ಕೃತಿ, ಕಲೆ ಹಾಗೂ ಹಿಂದುತ್ವದ ಅರಿವು ಮೂಡಿಸುವ ಉದ್ದೇಶದಿಂದ ದಸರಾ ನವರಾತ್ರಿಯ ಸಂದರ್ಭದಲ್ಲಿ ಮಂಗಳೂರಿನ ಶರಧಿ ಪ್ರತಿಷ್ಠಾನವು ಸೆಪ್ಟೆಂಬರ್ 28 ರಂದು ಶಾರದಾ ವಿದ್ಯಾಲಯದಲ್ಲಿ ಮೂರನೇ ವರ್ಷದ ಅದ್ದೂರಿ ಮಕ್ಕಳ ಮುದ್ದು ಶಾರದೆ ಮತ್ತು ನವದುರ್ಗೆಯರ ವೇಷ ಸ್ಪರ್ಧೆಯು ೧ ರಿಂದ ೧೪ ತನಕದ ವಯೋಮಾನ ಹೊಂದಿರುವ ಮಕ್ಕಳಿಗೆ ಆಯೋಜಿಸಲಾಗಿದೆ ಎಂದು ದಿನೇಶ್ ಹೊಳ್ಳ ತಿಳಿಸಿದ್ದಾರೆ.
ಅವರು ಮಂಗಳೂರು ಪ್ರೆಸ್ ಕ್ಲಬ್ ನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಈ ಬಗ್ಗೆ ಮಾಹಿತಿ ನೀಡಿದ ಅವರು, ಈ ಬಾರಿ ನವದುರ್ಗೆ ಮತ್ತು ಮುದ್ದು ಶಾರದೆ ಎಂಬ ಎರಡು ಪ್ರತ್ಯೇಕ ವಿಭಾಗಗಳಲ್ಲಿ ಸ್ಪರ್ಧೆ ನಡೆಯಲಿದೆ. ಸ್ಪರ್ಧಾಳುಗಳು ಭಾಗವಹಿಸಲು ಇಚ್ಚಿಸುವ ವಿಭಾಗದಲ್ಲಿ ಹೆಸರು ನೋಂದಾಯಿಸಿಕೊಳ್ಳಬಹುದು ಎಂದರು.
ಮಕ್ಕಳಲ್ಲಿ ನಮ್ಮ ಸಂಸ್ಕೃತಿಯ ಅರಿವು ಮೂಡಿಸುವ ಉದ್ದೇಶದಿಂದ ಸ್ಪರ್ಧೆ ಆಯೋಜಿಸಲಾಗುತ್ತಿದ್ದು, ಕರಾವಳಿಯ ಉಡುಪಿ, ದಕ್ಷಿಣ ಕನ್ನಡ, ಕಾಸರಗೋಡಿನ ವ್ಯಾಪ್ತಿಯ ಮಕ್ಕಳಿಗಾಗಿ ಈ ಸ್ಪರ್ಧೆ ಆಯೋಜಿಸಲಾಗುತ್ತಿದೆ. ಈ ಸ್ಪರ್ಧೆ ಕೇವಲ, ಫೋಟೋ ಸ್ಪರ್ಧೆಯಾಗಿ ಉಳಿಯಬಾರದು ಎಂಬ ಉದ್ದೇಶವನ್ನು ಸಂಘಟಕರು ಹೊಂದಿದ್ದು, ಇದೇ ಕಾರಣಕ್ಕಾಗಿ ಸ್ತಬ್ಧಚಿತ್ರ, ನೃತ್ಯ, ಅಭಿನಯ, ಶ್ಲೋಕ, ಹಾಡು ಹಾಡಲು ಅವಕಾಶ ನೀಡಲಾಗಿದೆ.
ಅದೇ ರೀತಿ ಸ್ಪರ್ಧೆಯಲ್ಲಿ ಪಾಲ್ಗೊಂಡ ಎಲ್ಲ ಮಕ್ಕಳಿಗೆ ಪ್ರಮಾಣ ಪತ್ರವನ್ನು ವಿತರಿಸಲಾಗುವುದು. ಪ್ರಥಮ, ದ್ವಿತೀಯ, ತೃತೀಯ ಸ್ಥಾನ ಪಡೆದ ವಿಜೇತರಿಗೆ ನಗದು ಪ್ರೋತ್ಸಾಹ, ನೆನಪಿನ ಕಾಣಿಕೆ ನೀಡಿ ಪುರಸ್ಕರಿಸಲಾಗುವುದು ಸ್ಪರ್ದೆಗೆ ಯಾವುದೇ ಶುಲ್ಕ ಇರುವುದಿಲ್ಲ,ಸ್ಪರ್ಧಾ ನೊಂದಣಿಗೆ ಸೆಪ್ಟೆಂಬರ್ ೨೫ ಕೊನೆಯ ದಿನವಾಗಿದೆ ಎಂದರು.
ಸುದ್ದಿಗೋಷ್ಠಿಯಲ್ಲಿ ಶರಧಿ ಪ್ರತಿಷ್ಠಾನ ಮಂಗಳೂರು ಇದರ ಅಧ್ಯಕ್ಷರಾದ ಪುನಿಕ್ ಶೆಟ್ಟಿ , ಜಗದೀಶ್ ಶೆಟ್ಟಿ ಉಪಸ್ಥಿತರಿದ್ದರು.