Tuesday, July 14, 2026
Google search engine

Homeರಾಜ್ಯಕೆಆರ್‌ಎಸ್‌ಗೆ ನೀರಿನ ಒಳಹರಿವು ಭಾರೀ ಕುಸಿತ ; ರೈತರಲ್ಲಿ ಹೆಚ್ಚಿದ ಆತಂಕ

ಕೆಆರ್‌ಎಸ್‌ಗೆ ನೀರಿನ ಒಳಹರಿವು ಭಾರೀ ಕುಸಿತ ; ರೈತರಲ್ಲಿ ಹೆಚ್ಚಿದ ಆತಂಕ

ಮಂಡ್ಯ : ಕಾವೇರಿ ಜಲಾನಯನ ಪ್ರದೇಶದಲ್ಲಿ ಮಳೆಯ ಪ್ರಮಾಣ ಕಡಿಮೆಯಾಗಿರುವ ಪರಿಣಾಮ, ಹಳೇ ಮೈಸೂರು ಭಾಗದ ಜೀವನಾಡಿಯಾಗಿರುವ ಕೃಷ್ಣರಾಜಸಾಗರ (ಕೆಆರ್‌ಎಸ್) ಜಲಾಶಯಕ್ಕೆ ಹರಿದುಬರುವ ನೀರಿನ ಪ್ರಮಾಣದಲ್ಲಿ ಭಾರೀ ಇಳಿಕೆ ಕಂಡುಬಂದಿದೆ.

ಕೆಲವೇ ದಿನಗಳ ಹಿಂದೆ ಸುರಿದ ಉತ್ತಮ ಮಳೆಯಿಂದ ಜಲಾಶಯದ ಒಳಹರಿವು 12 ಸಾವಿರ ಕ್ಯೂಸೆಕ್‌ಗಿಂತ ಹೆಚ್ಚಾಗಿತ್ತು. ಆದರೆ ಮಳೆ ಕಡಿಮೆಯಾದ ಹಿನ್ನೆಲೆಯಲ್ಲಿ ಜುಲೈ 13ರಂದು ಒಳಹರಿವು 7,500 ಕ್ಯೂಸೆಕ್‌ಗೆ ಇಳಿಕೆಯಾಗಿದ್ದು, ಇಂದು ಅದು ಮತ್ತಷ್ಟು ಕುಸಿದು ಕೇವಲ 3,685 ಕ್ಯೂಸೆಕ್‌ಗೆ ತಲುಪಿದೆ. 124.80 ಅಡಿ ಗರಿಷ್ಠ ಮಟ್ಟ ಹೊಂದಿರುವ ಕೆಆರ್‌ಎಸ್ ಜಲಾಶಯದಲ್ಲಿ ಪ್ರಸ್ತುತ 92.54 ಅಡಿ ನೀರಿನ ಮಟ್ಟ ದಾಖಲಾಗಿದ್ದು, 49.452 ಟಿಎಂಸಿ ಸಂಗ್ರಹ ಸಾಮರ್ಥ್ಯ ಹೊಂದಿರುವ ಜಲಾಶಯದಲ್ಲಿ ಈಗ 17.509 ಟಿಎಂಸಿ ನೀರು ಸಂಗ್ರಹವಿದ್ದು, ಕುಡಿಯುವ ನೀರಿನ ಉದ್ದೇಶಕ್ಕಾಗಿ 623 ಕ್ಯೂಸೆಕ್ ನೀರನ್ನು ನದಿಗೆ ಹರಿಸಲಾಗುತ್ತಿದೆ.

ಇನ್ನೂ ಜಲಾಶಯದಲ್ಲಿ ಒಟ್ಟು ಸಾಮರ್ಥ್ಯದ ಅರ್ಧಕ್ಕಿಂತಲೂ ಕಡಿಮೆ ಪ್ರಮಾಣದ ನೀರು ಮಾತ್ರ ಉಳಿದಿರುವುದು ಆತಂಕಕ್ಕೆ ಕಾರಣವಾಗಿದ್ದು, ಕೃಷಿ ಚಟುವಟಿಕೆಗಳು ತೀವ್ರಗೊಂಡಿರುವ ಈ ಸಂದರ್ಭದಲ್ಲಿ ನೀರಿನ ಒಳಹರಿವು ಕುಸಿದಿರುವುದರಿಂದ ರೈತರಲ್ಲಿ ಚಿಂತೆ ಹೆಚ್ಚಾಗಿದೆ. ಮುಂದಿನ ದಿನಗಳಲ್ಲಿ ಜಲಾಶಯದ ನೀರಿನ ಮಟ್ಟ ಏರಿಕೆಯಾಗಬೇಕಾದರೆ ಕಾವೇರಿ ಜಲಾನಯನ ಪ್ರದೇಶದಲ್ಲಿ ಉತ್ತಮ ಮಳೆಯಾಗುವುದು ಅಗತ್ಯವಾಗಿದೆ.

RELATED ARTICLES
- Advertisment -
Google search engine

Most Popular