ನವದೆಹಲಿ : ಕೇಂದ್ರ ಸರ್ಕಾರವು ಶಶಿ ಶೇಖರ್ ವೆಂಪತಿ ಅವರನ್ನು ಕೇಂದ್ರ ಚಲನಚಿತ್ರ ಪ್ರಮಾಣೀಕರಣ ಮಂಡಳಿಯ (CBFC) ಅಧ್ಯಕ್ಷರನ್ನಾಗಿ ನೇಮಕ ಮಾಡಿದೆ. ಈ ಕುರಿತು ಮಾಹಿತಿ ಮತ್ತು ಪ್ರಸಾರ ಸಚಿವಾಲಯವು ಬುಧವಾರ ಅಧಿಸೂಚನೆಯನ್ನು ಹೊರಡಿಸಿದೆ.
ಪ್ರಸಾರ ಭಾರತಿಯ ಮಾಜಿ ಸಿಇಒ ಆಗಿರುವ ಶಶಿ ಶೇಖರ್ ವೆಂಪತಿ ಅವರು ಮೂರು ವರ್ಷಗಳ ಅವಧಿಗೆ ಸಿಬಿಎಫ್‌ಸಿ ನೂತನ ಅಧ್ಯಕ್ಷರಾಗಿ ಕಾರ್ಯನಿರ್ವಹಿಸಲಿದ್ದಾರೆ.
ಇವರು ಈ ಹಿಂದೆ ಪ್ರಸಾರ ಭಾರತಿಯ ಮುಖ್ಯ ಕಾರ್ಯನಿರ್ವಹಣಾ ಅಧಿಕಾರಿಯಾಗಿ (CEO) ಸೇವೆ ಸಲ್ಲಿಸಿದ್ದರು. ಮಾಧ್ಯಮ, ಪ್ರಸಾರ ಮತ್ತು ಸಾರ್ವಜನಿಕ ಸಂವಹನ ಕ್ಷೇತ್ರಗಳಲ್ಲಿ ವೆಂಪತಿ ಅವರು ಅಪಾರ ಅನುಭವವನ್ನು ಹೊಂದಿದ್ದಾರೆ.
ಇವರ ನೇಮಕಾತಿಯಿಂದಾಗಿ ಕೇಂದ್ರ ಚಲನಚಿತ್ರ ಪ್ರಮಾಣೀಕರಣ ಮಂಡಳಿಯ ಕಾರ್ಯವೈಖರಿ ಮತ್ತು ಆಡಳಿತಕ್ಕೆ ಹೆಚ್ಚಿನ ಬಲ ಸಿಗಲಿದೆ ಎಂದು ನಿರೀಕ್ಷಿಸಲಾಗಿದೆ.



