Saturday, May 24, 2025
Google search engine

Homeಅಪರಾಧಶಿವಮೊಗ್ಗ: ಬೆಳ್ಳಂಬೆಳಿಗ್ಗೆ ರೌಡಿಶೀಟರ್ ಕಾಲಿಗೆ ಗುಂಡೇಟು

ಶಿವಮೊಗ್ಗ: ಬೆಳ್ಳಂಬೆಳಿಗ್ಗೆ ರೌಡಿಶೀಟರ್ ಕಾಲಿಗೆ ಗುಂಡೇಟು

ಶಿವಮೊಗ್ಗ: ಬೆಳ್ಳಂಬೆಳಿಗ್ಗೆ ರೌಡಿಶೀಟರ್ ಕಾಲಿಗೆ ಪೊಲೀಸರು ಗುಂಡೇಟು ಹೊಡೆದ ಘಟನೆ ಶಿವಮೊಗ್ಗ ನಗರದ ಹೊರವಲಯದ ಮಲ್ಲಿಗೇನಹಳ್ಳಿ ಬಳಿ ನಡೆದಿದೆ.

ರೌಡಿಶೀಟರ್ ಪರ್ವೇಜ್ ಅಲಿಯಾಸ್ ಫರ್ರು ಕಾಲಿಗೆ ಪೊಲೀಸರು ಗುಂಡು ನುಗ್ಗಿಸಿದ್ದಾರೆ. ಮಲ್ಲಿಗೇನಹಳ್ಳಿಯ ಹಿಂದೂ ರುದ್ರಭೂಮಿ ಬಳಿ ಘಟನೆ ನಡೆದಿದೆ.

ಪ್ರಕರಣವೊಂದರಲ್ಲಿ ಆರೋಪಿ ಪರ್ವೇಜ್ ಬಂಧನಕ್ಕೆ ಶಿವಮೊಗ್ಗ ಗ್ರಾಮಾಂತರ ಪೊಲೀಸರು ತೆರಳಿದ್ದರು. ಈ ವೇಳೆ ರೌಡಿಶೀಟರ್ ಪರ್ವೇಜ್ ಡ್ರಾಗರ್ ನಿಂದ ಪೊಲೀಸ್ ಸಿಬ್ಬಂದಿ ಮೇಲೆಯೇ ಹಲ್ಲೆಗೆ ಮುಂದಾಗಿದ್ದ. ಪೊಲೀಸ್ ಸಿಬ್ಬಂದಿ ನಾಗಪ್ಪ ಎಂಬುವರ ಮೇಲೆ ಹಲ್ಲೆ ಮಾಡಿದ್ದ.

ಈ ವೇಳೆ ರೌಡಿಶೀಟರ್ ಗೆ ಗ್ರಾಮಾಂತರ ಠಾಣೆ ಇನ್ಸ್ ಪೆಕ್ಟರ್ ಸತ್ಯನಾರಾಯಣ ಅವರು ಎಚ್ಚರಿಕೆ ನೀಡಿದರೂ ಅದನ್ನು ಲೆಕ್ಕಿಸದ ಹಿನ್ನೆಲೆಯಲ್ಲಿ ಕಾಲಿಗೆ ಗುಂಡು ಹಾರಿಸಿ ಬಂಧಿಸಿದ್ದಾರೆ.

ಗಾಯಗೊಂಡ ರೌಡಿಶೀಟರ್ ಪರ್ವೇಜ್ ನನ್ನು ಪೊಲೀಸರು ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಿದ್ದಾರೆ. ಘಟನೆ ಸಂಬಂಧ ತುಂಗಾನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

RELATED ARTICLES
- Advertisment -
Google search engine

Most Popular