ಶಿವಮೊಗ್ಗ: ಕಾರು ಡಿಕ್ಕಿಯಾಗಿ ಪಾದಚಾರಿ ಮಹಿಳೆ ಸಾವನ್ನಪ್ಪಿದ ಘಟನೆ ಶಿವಮೊಗ್ಗ ತಾಲೂಕು ಹನಸವಾಡಿ ಗ್ರಾಮದಲ್ಲಿ ಘಟನೆ ಸಂಭವಿಸಿದೆ.
ಮೇಲಿನ ಹನಸವಾಡಿ ಗ್ರಾಮದ ಮಂಜುಳಮ್ಮ (45) ಮೃತ ದುರ್ದೈವಿ. ಚಾಲಕನ ನಿಯಂತ್ರಣ ತಪ್ಪಿದ ಕಾರು ಹೊಟೇಲ್ ಗೆ ನುಗ್ಗಿದೆ.
ಶಿವಮೊಗ್ಗದಿಂದ ದಾವಣಗೆರೆಯಿಂದ ತೆರಳುತ್ತಿದ್ದ ಕಾರು ಹನಸವಾಡಿ ಬಳಿ ಮಂಜುಳಮ್ಮ ಅವರಿಗೆ ಡಿಕ್ಕಿ ಹೊಡೆದು, ಪಕ್ಕದ ಹೊಟೇಲ್ ಗೆ ನುಗ್ಗಿತ್ತು. ಗಂಭೀರ ಗಾಯಗೊಂಡಿದ್ದ ಮಂಜುಳಮ್ಮ ಅವರನ್ನು ಕೂಡಲೆ ಮ್ಯಾಕ್ಸ್ ಆಸ್ಪತ್ರೆಗೆ ಕರೆದೊಯ್ಯಲಾಗಿತ್ತು. ಆದರೆ ಚಿಕಿತ್ಸೆಗೆ ಸ್ಪಂದಿಸದೆ ಕೊನೆಯುಸಿರೆಳೆದಿದ್ದಾರೆ ಎಂದು ತಿಳಿದು ಬಂದಿದೆ.
ಮಂಜುಳಮ್ಮ ಅವರಿಗೆ ಡಿಕ್ಕಿ ಹೊಡೆದ ಬಳಿಕ ಕಾರು ಎರಡು ಬೈಕುಗಳಿಗೆ ಡಿಕ್ಕಿ ಹೊಡೆದಿದೆ. ಬಳಿಕ ಕಾರು ಹೊಟೇಲ್‌ಗೆ ನುಗ್ಗಿದ್ದು ಅದೃಷ್ಟವಶಾತ್ ಯಾರಿಗೂ ಸಮಸ್ಯೆಯಾಗಿಲ್ಲ. ಕಾರಿನಲ್ಲಿದ್ದ ಐವರು ಪ್ರಾಣಪಾಯದಿಂದ ಪಾರಾಗಿದ್ದಾರೆ.
ಶಿವಮೊಗ್ಗ ಗ್ರಾಮಾಂತರ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದರು.



