ಮೈಸೂರು: ಅಂಗಡಿ ಬೀಗ ಮುರಿದು ಕಳ್ಳತನಮಾಡಿರುವ ಘಟನೆ ಟಿ.ನರಸೀಪುರ ತಾಲ್ಲೂಕಿನ ಬನ್ನೂರಿನಲ್ಲಿ ನಡೆದಿದೆ.
ಸಂತೆಮಾಳ ಸಮೀಪ ರಂಗಸ್ವಾಮಿ ಎಂಬುವರಿಗೆ ಸೇರಿದ ಶ್ರೀರಂಗ ಫ್ರೂಟ್ ಸ್ಟಾಲ್ ನ ಅಂಗಡಿ ಬೀಗ ಮುರಿದು ಅಂಗಡಿಯಲ್ಲಿದ್ದ ನಗದು ಮತ್ತು ಇತರೆ ವಸ್ತುಗಳನ್ನು ಕಳ್ಳರು ಕದ್ದೊಯ್ದಿದ್ದಾರೆ.
ಬನ್ನೂರು ಪೋಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಕಳ್ಳರನ್ನ ಪತ್ತೆ ಹಚ್ಚುವಂತೆ ಅಂಗಡಿ ಮಾಲೀಕ ರಂಗಸ್ವಾಮಿ ಒತ್ತಾಯಿಸಿದ್ದಾರೆ.
ಘಟನಾ ಸ್ಥಳಕ್ಕೆ ಬನ್ನೂರು ಠಾಣಾ ಪೋಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.



                                    