Saturday, February 14, 2026
Google search engine

Homeರಾಜಕೀಯಸಿದ್ದರಾಮಯ್ಯ ಅವರದ್ದು ಜನರಿಗೆ ಕಾಯಿಸುವುದೇ ಕೈಲಾಸ ನೀತಿ : ಬಿ.ವೈ. ವಿಜಯೇಂದ್ರ ವ್ಯಂಗ್ಯ

ಸಿದ್ದರಾಮಯ್ಯ ಅವರದ್ದು ಜನರಿಗೆ ಕಾಯಿಸುವುದೇ ಕೈಲಾಸ ನೀತಿ : ಬಿ.ವೈ. ವಿಜಯೇಂದ್ರ ವ್ಯಂಗ್ಯ

ಬೆಂಗಳೂರು : ಪಂಚ ಗ್ಯಾರಂಟಿಗಳು ಪಂಚರ್ ಆಗಿ ವರ್ಷಗಳೇ ಕಳೆದಿವೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಕಾಂಗ್ರೆಸ್‌ ಸಾಧನಾ ಸಮಾವೇಶದ ವಿಚಾರಕ್ಕೆ ವ್ಯಂಗ್ಯವಾಡಿದ್ದಾರೆ.

ನಗರದ ಬಿಜೆಪಿ ಕಚೇರಿಯಲ್ಲಿ ಸುದ್ದಿಗೋಷ್ಠಿ ನಡೆಸಿದ ಅವರು, ಕಾಂಗ್ರೆಸ್‌ನ ಸಾವಿರ ದಿನಗಳ ಸಾಧನಾ ಸಮಾವೇಶದ ವಿರುದ್ಧ ವಾಗ್ದಾಳಿ ನಡೆಸಿದ್ದು, ಈ ವೇಳೆ, ಮೋದಿ ಸರ್ಕಾರದ್ದು ಕಾಯಕವೇ ಕೈಲಾಸ ನೀತಿ. ಸಿದ್ದರಾಮಯ್ಯ ಅವರದ್ದು ಜನರಿಗೆ ಕಾಯಿಸುವುದೇ ಕೈಲಾಸ ನೀತಿಯಾಗಿದೆ. ಅವರ ಯೋಜನೆಗಳು ರಾಜ್ಯದ ಜನರಿಗೆ ಕಾಯುವುದೇ ಕೈಲಾಸ ಅನ್ನುವ ರೀತಿ ಸತಾಯಿಸ್ತಿದ್ದಾರೆ ಎಂದು ಅಸಮಾಧಾನ ಹೊರಹಾಕಿದ್ದಾರೆ.

ಇನ್ನೂ ರಾಜ್ಯವನ್ನು ಸಿದ್ದರಾಮಯ್ಯ ಕುಡುಕರ ರಾಜ್ಯ ಮಾಡ್ತಿದ್ದಾರೆ. ಅಬಕಾರಿ ಇಲಾಖೆಯಲ್ಲಿ ಮಹಾತ್ಮಾ ಗಾಂಧಿಗೆ ಅಪಮಾನ ಮಾಡಲಾಗುತ್ತಿದೆ. ನೂರು ಸುಳ್ಳು ಹೇಳಿ ಮದುವೆ ಮಾಡು ಎನ್ನುವಂತೆ ಸಾವಿರ ಸುಳ್ಳು ಹೇಳಿ ನಾಡಿನ ಜನರಿಗೆ ಅನ್ಯಾಯ ಎಸಗಿದ್ದಾರೆ. ಅಹಿಂದ ಹೆಸರಲ್ಲಿ ಪರಿಶಿಷ್ಟ ಜಾತಿ, ಪಂಗಡ, ಹಿಂದುಳಿದ, ಒಕ್ಕಲಿಗ ಸಮುದಾಯಗಳಿಗೆ ಅನ್ಯಾಯ ಮಾಡಲಾಗುತ್ತಿದೆ. ರಾಮರಾಜ್ಯ ಮಾಡ್ತೀವಿ ಅಂತ ಅಧಿಕಾರಕ್ಕೆ ಬಂದು, ಜನರ ಕಿವಿಗೆ ಹೂ ಮುಡಿಸಿದ್ದಾರೆ.

ಇಷ್ಟಲ್ಲದೆ ವಾಲ್ಮೀಕಿ ನಿಗಮ ಹಗರಣ, ಅಬಕಾರಿ, ಸ್ಮಾರ್ಟ್ ಮೀಟರ್ ಹಗರಣ, ಗೃಹಲಕ್ಷ್ಮಿ ಹಗರಣ, ಮುಡಾ ಹಗರಣಗಳನ್ನು ಮಾಡಿದ್ದು, ಗೃಹಲಕ್ಷ್ಮಿ ಯೋಜನೆಯ 5 ಸಾವಿರ ಕೋಟಿ ರೂ. ಎಲ್ಲಿಗೆ ಹೋಗಿದೆ ಅಂತ ಸಿಎಂ ಇನ್ನೂ ಉತ್ತರ ಕೊಟ್ಟಿಲ್ಲ. ಭ್ರಷ್ಟಾಚಾರದಲ್ಲಿ ಸರ್ಕಾರ ಮುಳುಗಿದೆ. ಕಾಂಗ್ರೆಸ್ ಹೈಕಮಾಂಡ್‌ಗೆ ರಾಜ್ಯವನ್ನು ಸರ್ಕಾರ ಅಡ ಇಟ್ಟಿದೆ ಎಂದು ಕಿಡಿಕಾರಿದ್ದಾರೆ.

ಗ್ಯಾರಂಟಿಗಳಿಂದ ಜನರ ಸಬಲೀಕರಣ ಆಗಿದೆ ಅಂತ ಬಡಾಯಿ ಕೊಚ್ಚಿ ಕೊಳ್ತಾರೆ. ರಸ್ತೆ ಗುಂಡಿಗಳನ್ನು ಮುಚ್ಚಲೂ ಈ ಅಯೋಗ್ಯ ಕಾಂಗ್ರೆಸ್ ಸರ್ಕಾರದಿಂದ ಆಗಿಲ್ಲ. ಇವರ ಸಾಧನೆ ಅಂದ್ರೆ ಭ್ರಷ್ಟಾಚಾರಕ್ಕೆ ಸಾಂಸ್ಥಿಕ ರೂಪ ಕೊಟ್ಟಿರೋದು. ಈ ಕಾಂಗ್ರೆಸ್ ಸರ್ಕಾರ ಕಳೆದ ಎರಡೂಮುಕ್ಕಾಲು ವರ್ಷದಲ್ಲಿ ಓಲೈಕೆ ಮೂಲಕ ಹಿಂದೂಗಳಿಗೆ ಅನ್ಯಾಯ ಮಾಡುತ್ತಿದೆ. ಅಭಿವೃದ್ಧಿ ದೂರದೃಷ್ಟಿ ಇಲ್ಲದೇ 25 ವರ್ಷ ಕೆಳಗೆ ರಾಜ್ಯ ಹೋಗಿದೆ ಎಂದಿದ್ದಾರೆ.

ಕಾಂಗ್ರೆಸ್‌ನವರು ವೈಫಲ್ಯ, ಭ್ರಷ್ಟಾಚಾರ ಮುಚ್ಚಿ ಹಾಕಲು ಕೇಂದ್ರದ ಮೇಲೆ ಆರೋಪ ಮಾಡುತ್ತಿದ್ದಾರೆ. ಈ ಸರ್ಕಾರ ಎಲ್ಲ ವರ್ಗದ ಜನರಿಗೆ ಘೋರ ಅನ್ಯಾಯ ಮಾಡಿದ್ದು, ಇನ್ನೂ ಇಲಾಖೆಗಳಿಗೆ ಕೇಂದ್ರದ ವಿಶೇಷ ಅನುದಾನ ಕೊಟ್ಟೇ ಇಲ್ಲ. ಅನುದಾನ ಕೊಡದಿದ್ರೂ ಆ ಇಲಾಖೆಗಳ ಮೇಲೆ ಒತ್ತಾಯ ಹಾಕಿ ನಕಲಿ ಯುಟಿಲೈಸೇಷನ್ ಸರ್ಟಿಫಿಕೇಟ್ ಸಲ್ಲಿಕೆ ಮಾಡಲಾಗಿದೆ. ಈ ಬಗ್ಗೆ ಸಿಎಂ, ಡಿಸಿಎಂ ಉತ್ತರಿಸಬೇಕು ಎಂದಿದ್ದಾರೆ.

RELATED ARTICLES
- Advertisment -
Google search engine

Most Popular