ಬೆಂಗಳೂರು : ಸಿಎಂ ಸಿದ್ದರಾಮಯ್ಯ ಹಳೇ ಹುಲಿ. ಯಾವ ಆಟ ಆಡುತ್ತಾರೆ ಗೊತ್ತಿಲ್ಲ. ಅವರು ರಾಜೀನಾಮೆ ನೀಡುವವರೆಗೂ ಗ್ಯಾರಂಟಿ ಇಲ್ಲ ಎಂದು ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಕುಟುಕಿದರು.
ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ, ರಾಜ್ಯದಲ್ಲಿ ಒಂದು ಕಡೆ ಬರಗಾಲ ಮತ್ತೊಂದು ಕಡೆ ಬರ ಎಲ್ಲವನ್ನೂ ಬಿಟ್ಟು ಕಾಂಗ್ರೆಸ್ ನಲ್ಲಿ ಕುರ್ಚಿಗಾಗಿ ಕಚ್ಚಾಟ ನಡೆಯುತ್ತಿದೆ . ಸಿಎಂ ಕುರ್ಚಿ ಉಳಿಸಿಕೊಳ್ಳಲು ಸಿದ್ದರಾಮಯ್ಯ ಯತ್ನಿಸಿದರೆ. ಡಿಕೆ ಶಿವಕುಮಾರ್ ಸಿಎಂ ಆಗಲು ಯತ್ನಿಸುತ್ತಿದ್ದಾರೆ. ಈ ಮಧ್ಯೆ ರಾಜ್ಯದ ಜನರು ಬಡವರಾಗಿದ್ದಾರೆ. ಸಿದ್ದರಾಮಯ್ಯ ಯಾವಾಗ ಯಾವ ಆಟ ಆಡ್ತಾರೆ ಎಂದರು.
ಸಿದ್ದರಾಮಯ್ಯ ರಾಜೀನಾಮೆ ಕೊಡುವವರೆಗೂ ಗ್ಯಾರಂಟಿ ಇಲ್ಲ. ಕಾಂಗ್ರೆಸ್ ಸರ್ಕಾರಕ್ಕೆ ಜನರ ಬಗ್ಗೆ ಕಾಳಜಿ ಇಲ್ಲ ಎಂದುಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ವಾಗ್ದಾಳಿ ನಡೆಸಿದರು.



