Friday, March 6, 2026
Google search engine

Homeರಾಜಕೀಯರಾಜಕೀಯ ಆಪತ್ತು ಎದುರಾದಾಗ ಮಾತ್ರ ಸಾಮಾಜಿಕ ನ್ಯಾಯ ನೆನಪಾಗುತ್ತದೆ : ಸಿಎಂ ವಿರುದ್ಧ ಹೆಚ್.ಡಿ.ಕೆ ವಾಗ್ದಾಳಿ

ರಾಜಕೀಯ ಆಪತ್ತು ಎದುರಾದಾಗ ಮಾತ್ರ ಸಾಮಾಜಿಕ ನ್ಯಾಯ ನೆನಪಾಗುತ್ತದೆ : ಸಿಎಂ ವಿರುದ್ಧ ಹೆಚ್.ಡಿ.ಕೆ ವಾಗ್ದಾಳಿ

ಬೆಂಗಳೂರು : ಒಳ ಮೀಸಲಾತಿ ವಿಚಾರದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸ್ಪಷ್ಟ ನಿರ್ಧಾರ ಕೈಗೊಳ್ಳದೆ ಪಲಾಯನ ಮಾಡುತ್ತಿದ್ದಾರೆ ಎಂದು ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಟೀಕಿಸಿದ್ದಾರೆ‌.

ನಗರದ ಜೆಡಿಎಸ್ ರಾಜ್ಯ ಕಚೇರಿ ಜೆಪಿ ಭವನದಲ್ಲಿ ನಡೆದ ಮಾಲೂರು ವಿಧಾನಸಭೆ ಕ್ಷೇತ್ರದ ಹಿರಿಯ ಮುಖಂಡ ಹೂಡಿ ವಿಜಯಕುಮಾರ್ ಅವರ ಪಕ್ಷ ಸೇರ್ಪಡೆ ಹಾಗೂ ಅವರ ನೇತೃತ್ವದ ಸ್ವಾಭಿಮಾನಿ ಜನತಾ ಪಕ್ಷದ ವಿಲೀನ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಸಿದ್ದರಾಮಯ್ಯ ಅವರು ಎಂಟು ವರ್ಷಗಳ ಕಾಲ ಮುಖ್ಯಮಂತ್ರಿ ಆಗಿದ್ದು, ದೇವರಾಜ ಅರಸು ಅವರ ದಾಖಲೆ ಮುರಿದಿದ್ದಾರೆ. ಅಹಿಂದಾ ನಾಯಕರು ಎಂದು ಹೇಳಿಕೊಳ್ಳುವ ಅವರು ಜಾತಿ ಹೆಸರಿನಲ್ಲಿ ರಾಜಕೀಯ ಲಾಭ ಪಡೆದಿದ್ದಾರೆ. ಆದರೂ ಒಳ ಮೀಸಲಾತಿ ಬಗ್ಗೆ ಇನ್ನೂ ನಿರ್ಧಾರ ಕೈಗೊಳ್ಳದಿರುವುದು ಆಶ್ಚರ್ಯಕರ ಎಂದು ಹೇಳಿದರು.

ಸಾಮಾಜಿಕ ನ್ಯಾಯದ ಮಾತು ಚುನಾವಣೆ ಬಂದಾಗ ಅಥವಾ ರಾಜಕೀಯ ಆಪತ್ತು ಎದುರಾದಾಗ ಮಾತ್ರ ಅವರಿಗೆ ನೆನಪಾಗುತ್ತದೆ. ನಂತರ ಅಹಿಂದಾ ಎಲ್ಲಿಗೆ ಹೋಗುತ್ತದೆ ಎಂಬುದನ್ನು ಜನರು ಗಮನಿಸಬೇಕು ಎಂದು ಹೇಳಿದರು.

ಮುಂದುವರೆದು, ಮಾಜಿ ಪ್ರಧಾನಿ ಹೆಚ್‌.ಡಿ.ದೇವೇಗೌಡರು ಸಾಮಾಜಿಕ ನ್ಯಾಯಕ್ಕಾಗಿ ಹೋರಾಡಿದರು ಮತ್ತು ಅನೇಕ ಸಮುದಾಯಗಳು ಮೀಸಲಾತಿಯ ಪ್ರಯೋಜನ ಪಡೆಯುವಂತೆ ನೋಡಿಕೊಂಡರು ಎಂದರಲ್ಲದೆ, ಇದು ಸರ್ಕಾರಿ ನೇಮಕಾತಿಗಳಲ್ಲಿ ಹಾಗೂ ಶಾಸಕಾಂಗ ಸಭೆಯಲ್ಲಿ ಸ್ಪಷ್ಟವಾಗಿದ್ದು, ಕಳೆದ 10 ವರ್ಷಗಳಿಂದ ಮೀಸಲಾತಿಯ ಪ್ರಯೋಜನ ಪಡೆದ ಸಮುದಾಯಗಳ ಪಟ್ಟಿಯನ್ನು ಬಿಡುಗಡೆ ಮಾಡುವಂತೆ ರಾಜ್ಯ ಸರ್ಕಾರವನ್ನು ಕುಮಾರಸ್ವಾಮಿ ಒತ್ತಾಯಿಸುತ್ತಿದ್ದೇನೆ. ಪಟ್ಟಿ ಬಿಡುಗಡೆಯಾದರೆ, ಸಿದ್ದರಾಮಯ್ಯ ಅವರ ನಿಜವಾದ ಬಣ್ಣ ಬಯಲಾಗುತ್ತದೆ ಎಂದರು.

ರಾಜ್ಯದ ಎಲ್ಲಾ ಸಮುದಾಯಗಳು ಜನಪರವಾಗಿ ಪ್ರಾಮಾಣಿಕವಾಗಿ ಕೆಲಸ ಮಾಡುವ ಸರ್ಕಾರಕ್ಕೆ ಆಶೀರ್ವಾದ ನೀಡಬೇಕು. ಐದು ವರ್ಷಗಳಲ್ಲಿ ರಾಜ್ಯದಲ್ಲಿ ನಡೆದ ಅನ್ಯಾಯಗಳನ್ನು ಸರಿಪಡಿಸುವ ಕೆಲಸ ಮಾಡುತ್ತೇನೆ ಎಂದು ಹೇಳಿದರು.

RELATED ARTICLES
- Advertisment -
Google search engine

Most Popular