ನವದೆಹಲಿ : ಹಿರಿಯ ಕಾಂಗ್ರೆಸ್ ನಾಯಕಿ, ರಾಜ್ಯಸಭಾ ಸಂಸದೆ ಸೋನಿಯಾ ಗಾಂಧಿ ಅವರು ಸಣ್ಣ ಶಸ್ತ್ರಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ಹಲವಾರು ಆರೋಗ್ಯ ಸಮಸ್ಯೆಗಳಿಂದ ಬಳಲುತ್ತಿರುವ ಅವರನ್ನು ಗುರುಗ್ರಾಮ್‌ನ ಉನ್ನತ ಖಾಸಗಿ ಆಸ್ಪತ್ರೆಗೆ ದಾಖಲಿಸಿರುವುದಾಗಿ ಬುಧವಾರ ಮೂಲಗಳು ತಿಳಿಸಿವೆ.
ಈ ವರ್ಷದ ಆರಂಭದಲ್ಲಿ ಬಳಿಕ ಕಳೆದ ಮಾರ್ಚ್ ತಿಂಗಳಲ್ಲಿ ಅವರು ಆಸ್ಪತ್ರೆಗೆ ದಾಖಲಾಗಿದ್ದರು. ಉಸಿರಾಟದ ತೊಂದರೆ ಸೇರಿದಂತೆ ಹಲವಾರು ಆರೋಗ್ಯ ಸಮಸ್ಯೆಗಳನ್ನು ಅವರು ಎದುರಿಸುತ್ತಿದ್ದಾರೆ ಎನ್ನಲಾಗಿದೆ.



