Saturday, May 24, 2025
Google search engine

Homeರಾಜ್ಯಶೀಘ್ರದಲ್ಲೇ ಮತ್ತೊಂದು ಸಿಡಿ, ಹೊಸ ಬಾಂಬ್ ಸಿಡಿಸಿದ ಯತ್ನಾಳ್

ಶೀಘ್ರದಲ್ಲೇ ಮತ್ತೊಂದು ಸಿಡಿ, ಹೊಸ ಬಾಂಬ್ ಸಿಡಿಸಿದ ಯತ್ನಾಳ್

ವಿಜಯಪುರ: ಹಾಸನ ಸಂಸದ ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣದ ಚರ್ಚೆ ದೇಶದಾದ್ಯಂತ ನಡೆಯುತ್ತಿರುವ ಬೆನ್ನಲ್ಲೇ ವಿಜಯಪುರ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಮತ್ತೊಂದು ಬಾಂಬ್ ಸಿಡಿಸಿದ್ದಾರೆ.

ಶೀಘ್ರದಲ್ಲೇ ಮತ್ತೊಂದು ಸಿಡಿ ಫ್ಯಾಕ್ಟರಿ ಓಪನ್ ಆಗಲಿದೆ ಎಂದು ಅವರು ಹೇಳಿದ್ದಾರೆ. ಇಂದು ಮಂಗಳವಾರ ಮತ ಚಲಾಯಿಸಿ ಬಳಿಕ ಮಾತನಾಡಿದ ಅವರು, ಪ್ರಜ್ವಲ್ ಅಶ್ಲೀಲ ವಿಡಿಯೋ ಬಹಿರಂಗವಾಗಿದ್ದರ ಹಿಂದೆ ಡಿಸಿಎಂ ಡಿಕೆ ಶಿವಕುಮಾರ್ ಕೈವಾಡವಿದೆ ಎಂದು ಆರೋಪಿಸಿದರು. ಸೋಮವಾರ ವಕೀಲ, ಬಿಜೆಪಿ ನಾಯಕ ದೇವೇರಾಜೇ ಗೌಡರು ಆರೋಪಿಸಿದಂತೆ ಪ್ರಕರಣದಲ್ಲಿ ಡಿಕೆಶಿ ಕೈವಾಡ ಇರುವುದು ಸ್ಪಷ್ಟ ಎಂದು ಹೇಳಿದರು. ರಾಜ್ಯ ಸರ್ಕಾರ ರಚನೆ ಮಾಡಿರುವ ಎಸ್‌ಐಟಿ ಸಂಪೂರ್ಣವಾಗಿ ಡಿಕೆ ಶಿವಕುಮಾರ್ ವಶದಲ್ಲಿದೆ. ಅವರ ಆಣತಿಯಂತೆ ಕೆಲಸ ಮಾಡುತ್ತದೆ ಎಂದು ಯತ್ನಾಳ್ ದೂರಿದರು.

RELATED ARTICLES
- Advertisment -
Google search engine

Most Popular