ಮಂಡ್ಯ: ಮಾಜಿ ಸಿಎಂ ಹೆಚ್ ಡಿ ಕುಮಾರಸ್ವಾಮಿಗೆ ಹೃದಯ ಶಸ್ತ್ರಚಿಕಿತ್ಸೆ ಹಿನ್ನಲೆ ಶೀಘ್ರವಾಗಿ ಗುಣಮುಖರಾಗಲೆಂದು ಪ್ರಾರ್ಥಿಸಿ ಮಂಡ್ಯ ನಗರದ ಪ್ರಸಿದ್ದಿ ವಿದ್ಯಾಗಣಪತಿ ದೇವಸ್ಥಾನದಲ್ಲಿ ಜೆಡಿಎಸ್ ಕಾರ್ಯಕರ್ತರಿಂದ ವಿಶೇಷ ಪೂಜೆ ಸಲ್ಲಿಸಲಾಯಿತು.
ಮಾಜಿ ಸಿಎಂ ಹೆಚ್ ಡಿ ಕುಮಾರಸ್ವಾಮಿ ಹೆಸರಲ್ಲಿ ಅರ್ಚನೆ ಮಾಡಿಸಿ ವಿಶೇಷ ಪೂಜೆ ಸಲ್ಲಿಸಿದರು.
ಜೆಡಿಎಸ್ ಮುಖಂಡ ರಾಮಚಂದ್ರ ನೇತೃತ್ವದಲ್ಲಿ ಪೂಜೆ ಸಲ್ಲಿಸಲಾಗಿದ್ದು, ಕುಮಾರಸ್ವಾಮಿ ಅವರಿಗೆ ಮೂರನೇ ಬಾರಿ ಹೃದಯ ಶಸ್ತ್ರಚಿಕಿತ್ಸೆ ನಡೆಯುತ್ತಿದೆ. ಚಿಕಿತ್ಸೆ ಫಲಕಾರಿಯಾಗಿ ಬೇಗ ಗುಣಮುಖರಾಗಲೇಂದು ಪ್ರಾರ್ಥನೆ ಮಾಡಲಾಗಿದೆ.
ಇದೇ ಸಂದರ್ಭದಲ್ಲಿ ಮನ್ಮುಲ್ ಉಪಾಧ್ಯಕ್ಷ ರಘುನಂದನ್, ಜಿಲ್ಲಾಧ್ಯಕ್ಷ ಡಿ.ರಮೇಶ್, ಸಿದ್ದರಾಮೇಗೌಡ, ಸೇರಿ ಕಾರ್ಯಕರ್ತರು ಭಾಗಿಯಾಗಿದ್ದರು.