Thursday, November 6, 2025
Google search engine

Homeರಾಜ್ಯಸುದ್ದಿಜಾಲಕ್ರೀಡೆ ಮಕ್ಕಳಿಗೆ ದೈಹಿಕ ಬೆಳವಣಿಗೆಯ ಜೊತೆಗೆ ನಾಯಕತ್ವ ಗುಣ ರೂಢಿಸಿಕೊಳ್ಳಲು ಸಹಾಯಕ: ಸೋಮೇಶ್ವರನಾಥ ಸ್ವಾಮೀಜಿ

ಕ್ರೀಡೆ ಮಕ್ಕಳಿಗೆ ದೈಹಿಕ ಬೆಳವಣಿಗೆಯ ಜೊತೆಗೆ ನಾಯಕತ್ವ ಗುಣ ರೂಢಿಸಿಕೊಳ್ಳಲು ಸಹಾಯಕ: ಸೋಮೇಶ್ವರನಾಥ ಸ್ವಾಮೀಜಿ

ವರದಿ: ವಿನಯ್ ದೊಡ್ಡಕೊಪ್ಪಲು

ಕೆ.ಆರ್.ನಗರ : ಕ್ರೀಡೆ ಮಕ್ಕಳಿಗೆ ದೈಹಿಕ ಬೆಳವಣಿಗೆಯ ಜೊತೆಗೆ ನಾಯಕತ್ವ ಗುಣ ರೂಢಿಸಿಕೊಳ್ಳಲು ಸಹಾಯಕವಾಗಲಿದೆ ಎಂದು ಆದಿಚುಂಚನಗಿರಿ ಮೈಸೂರು ಶಾಖಾಮಠದ ಸೋಮೇಶ್ವರನಾಥ ಸ್ವಾಮೀಜಿ ಹೇಳಿದರು.

ಸಾಲಿಗ್ರಾಮ ತಾಲೂಕಿನ ಚುಂಚನಕಟ್ಟೆಯ ಆದಿಚುಂಚನಗಿರಿ ಶಾಖಾಮಠದ ಆವರಣದಲ್ಲಿ 22ನೇಜಿಲ್ಲಾಮಟ್ಟದ ಚುಂಚಾದ್ರಿ ಕ್ರಿಡೋತ್ಸವ ಕಾರ್ಯಕ್ರಮ ಚಾಲನೆ ನೀಡಿ ಅವರು ಮಾತನಾಡಿದರು.

ಆದಿಚುಂಚನಗಿರಿ ಸಂಸ್ಥೆ ವತಿಯಿಂದ ರಾಜ್ಯಮಟ್ಟದ ಆಟೋ ಸ್ಪರ್ಧೆಗಳನ್ನು ಏರ್ಪಡಿಸಲಾಗಿದ್ದು ಮೈಸೂರು ವಿಭಾಗದಲ್ಲಿ ಎ ಮತ್ತು ಬಿ ವಲಯಗಳನ್ನು ಮಾಡಿದ್ದು ನಮ್ಮ ಸಂಸ್ಥೆಗಳಿಂದ ವಿವಿಧ ವಿಭಾಗಗಳಲ್ಲಿ ಆಯ್ಕೆಯಾಗುವ ಮಕ್ಕಳನ್ನು ರಾಜ್ಯಮಟ್ಟಕ್ಕೆ ಆಯ್ಕೆ ಮಾಡಿ ಶಿಕ್ಷಣ ಜೊತೆಗೆ ಗುಣಮಟ್ಟದ ಕ್ರೀಡಾಳುಗಳನ್ನು ತಯಾರು ಮಾಡಿರುವ ಸಂಸ್ಥೆಯ ಸಿಬ್ಬಂದಿಗಳಿಗೆ ಅಭಿನಂದನೆಗಳನ್ನು ತಿಳಿಸಿದರು.

ಕ್ರೀಡೆಯಲ್ಲಿ ಸೋಲು ಗೆಲುವು ಮುಖ್ಯವಲ್ಲ ಭಾಗವಹಿಸುವಿಕೆ ಅಗತ್ಯವಾಗಿದ್ದು ಸಮಾಜದಲ್ಲಿ ಧೈರ್ಯದಿಂದ ಮುನ್ನಡೆಯುವ ಗುಣ ಕ್ರೀಡೆಯಿಂದ ಬರಲಿದ್ದು ಮೊಬೈಲ್, ಸಾಮಾಜಿಕ ಜಾಲತಾಣಗಳಿಂದ ಯುವ ಸಮುದಾಯ ಕ್ರೀಡೆಯುತ್ತಮರಳಿದರೆ ಇಂದು ಅಂತರಾಷ್ಟ್ರೀಯ ಮಟ್ಟದಲ್ಲೂ ಬೆಳೆಯಲು ಅವಕಾಶ ಇದೆ ಎಂದರು.

ಕ್ರೀಡೋತ್ಸವದ ಅಂಗವಾಗಿ ಪಥ ಸಂಚಲನ ನಡೆಸಿ ಪ್ರತಿಜ್ಞಾವಿಧಿ ಬೋಧಿಸಲಾಯಿತು.

ಕಾರ್ಯಕ್ರಮದಲ್ಲಿ ಒಕ್ಕಲಿಗ ಸಂಘದ ಉಪಾಧ್ಯಕ್ಷ ಕುಚೇಲ್, ನಿವೃತ್ತ ಇಂಜಿನಿಯರ್ ಕೆ. ಬಿ ಪ್ರಕಾಶ್, ಎಪಿಎಂಸಿ ಮಾಜಿ ನಿರ್ದೇಶಕ ಕುಪ್ಪಳ್ಳಿ ಸೋಮು, ದೈಹಿಕ ಶಿಕ್ಷಣ ಪರಿವೀಕ್ಷಕ ಕುಮಾರಸ್ವಾಮಿ, ಬಾಲೂರು ನಂಜುಂಡೇಗೌಡ, ಸಿದ್ದಪ್ಪ, ಮಠದ ವ್ಯವಸ್ಥಾಪಕ ರಾಮಲಿಂಗಪ್ಪ, ಉಪನ್ಯಾಸಕ ಮಹೇಶ್, ಶಾಲೆಯ ಮುಖ್ಯ ಶಿಕ್ಷಕಿ ಚಾಂದಿನಿ , ಶಿಕ್ಷಕ ಗಿರೀಶ್ ಹಾಗೂ ವಿವಿಧ ಶಾಲೆಯ ಶಿಕ್ಷಕರು ಮತ್ತು ಮಕ್ಕಳು ಹಾಜರಿದ್ದರು.

RELATED ARTICLES
- Advertisment -
Google search engine

Most Popular