ಧಾರವಾಡ: ಜಿಲ್ಲಾಡಳಿತ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಯೋಗದಲ್ಲಿ ಇಂದು ಮೇ. 14 ಶ್ರೀ ಮಹರ್ಷಿ ಭಗೀರಥ ಜಯಂತಿಯನ್ನು ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಆಚರಿಸಲಾಯಿತು.
ಕುವೆಂಪು ಜಿಲ್ಲಾಧಿಕಾರಿ ಗೀತಾ ಸಿ.ಡಿ ಅವರು ಶ್ರೀ ಮಹರ್ಷಿ ಭಗೀರಥರ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ ಪೂಜೆ ಸಲ್ಲಿಸಿದರು. ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ಸರಳ ರೀತಿಯಲ್ಲಿ ಜಯಂತಿ ಕಾರ್ಯಕ್ರಮವನ್ನು ಆಚರಿಸಲಾಯಿತು. ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ಕುಮಾರ ಬೆಕ್ಕೇರಿ, ಸತೀಶ ಮುರಗೋಡ, ಹನುಮಂತ ಲಾತೂರ, ಲಕ್ಷ್ಮಣ ಉಪ್ಪಾರ, ಕಲ್ಲಪ್ಪ ಉಪ್ಪಾರ ಹಾಗೂ ಹಿರಿಯ ನಾಗರಿಕರು, ಸಾರ್ವಜನಿಕರು ಉಪಸ್ಥಿತರಿದ್ದರು.