Thursday, March 26, 2026
Google search engine

Homeರಾಜ್ಯಎಸ್‌ಎಸ್‌ಎಲ್‌ಸಿ ಹಿಂದಿ ಪರೀಕ್ಷೆ ಮುಂದೂಡಿಕೆ

ಎಸ್‌ಎಸ್‌ಎಲ್‌ಸಿ ಹಿಂದಿ ಪರೀಕ್ಷೆ ಮುಂದೂಡಿಕೆ

ಬೆಂಗಳೂರು: ರಾಜ್ಯದಲ್ಲಿ ಮಾ.30ಕ್ಕೆ ನಡೆಯಬೇಕಿದ್ದ ಎಸ್‌ಎಸ್‌ಎಲ್‌ಸಿ ಹಿಂದಿ ಪರೀಕ್ಷೆಯನ್ನು ಮಾ.31ಕ್ಕೆ ಮುಂದೂಡಿಕೆ ಮಾಡಲಾಗಿದೆ ಎಂದು ಪರೀಕ್ಷಾ ಬೋರ್ಡ್‌ ಮಾಹಿತಿ ನೀಡಿದೆ.

ಮಾರ್ಚ್ 31 ರಂದು ಮಹಾವೀರ ಜಯಂತಿ ಹಿನ್ನೆಲೆಯಲ್ಲಿ ರಾಜ್ಯಾದ್ಯಂತ ಸಾರ್ವತ್ರಿಕ ರಜೆಯನ್ನು ಘೋಷಿಸಲಾಗಿತ್ತು. ಆದರೆ ಮಹಾವೀರ ಜಯಂತಿ ರಜೆಯನ್ನು ಮಾರ್ಚ್ 30ಕ್ಕೆ ಹಿಂದೂಡಿಕೆ ಮಾಡಲಾಗಿದೆ. ಹೀಗಾಗಿ ರಜೆ ಹಿಂದೂಡಿಕೆ ಮಾಡಿದ ಹಿನ್ನೆಲೆ ಮಾ.30ಕ್ಕೆ ನಡೆಯಬೇಕಿದ್ದ ಎಸ್‌ಎಸ್‌ಎಲ್‌ಸಿ ತೃತೀಯ ಭಾಷೆ ಹಿಂದಿ ಪರೀಕ್ಷೆಯನ್ನು ಮಾ.31ಕ್ಕೆ ಮುಂದೂಡಿಕೆ ಮಾಡಿದೆ. 

ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಮಾಹಿತಿ ನೀಡಿದ್ದು, ಮಹಾವೀರ ಜಯಂತಿ ರಜೆ ಹಿಂದೂಡಿಕೆ ಮಾಡಿದ ಹಿನ್ನೆಲೆ ಪರೀಕ್ಷೆಯನ್ನು ಒಂದು ದಿನ ಮುಂದೂಡಿಕೆ ಮಾಡಲಾಗಿದೆ. ಮಾ.30ಕ್ಕೆ ಮಹಾವೀರ ಜಯಂತಿ ರಜೆ ಹಾಗೂ ಮಾ.31ಕ್ಕೆ ಹಿಂದಿ ಪರೀಕ್ಷೆ ನಡೆಯಲಿದೆ ಎಂದು ತಿಳಿಸಿದೆ.

RELATED ARTICLES
- Advertisment -
Google search engine

Most Popular