Thursday, April 23, 2026
Google search engine

Homeರಾಜ್ಯSSLC ಫಲಿತಾಂಶ ಪ್ರಕಟ: ಶೇ.94.1% ವಿದ್ಯಾರ್ಥಿಗಳು ಪಾಸ್‌

SSLC ಫಲಿತಾಂಶ ಪ್ರಕಟ: ಶೇ.94.1% ವಿದ್ಯಾರ್ಥಿಗಳು ಪಾಸ್‌

ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿಯು (KSEAB) ಇಂದು ಎಸ್‌ಎಸ್‌ಎಲ್‌ಸಿ ಪರೀಕ್ಷೆಯ ಫಲಿತಾಂಶವನ್ನು ಅಧಿಕೃತವಾಗಿ ಬಿಡುಗಡೆ ಮಾಡಿದ್ದು, ಈ ಬಾರಿ ರಾಜ್ಯಾದ್ಯಂತ ಶೇ. 94.1 ರಷ್ಟು ವಿದ್ಯಾರ್ಥಿಗಳು ಉತ್ತೀರ್ಣರಾಗುವ ಮೂಲಕ ಉತ್ತಮ ಸಾಧನೆ ಮಾಡಿದ್ದಾರೆ.

ಫಲಿತಾಂಶ ವೀಕ್ಷಿಸುವುದು ಹೇಗೆ ?
ವಿದ್ಯಾರ್ಥಿಗಳು ಈ ಕೆಳಗಿನ ಹಂತಗಳನ್ನು ಅನುಸರಿಸಿ ತಮ್ಮ ಅಂಕಪಟ್ಟಿಯನ್ನು ಆನ್‌ಲೈನ್‌ನಲ್ಲಿ ಪಡೆಯಬಹುದು

  • karresults.nic.in ಅಥವಾ kseab.karnataka.gov.in ಅಧಿಕೃತ ವೆಬ್‌ಸೈಟ್‌ಗೆ ಲಾಗಿನ್ ಆಗಿ.
  • ಮುಖಪುಟದಲ್ಲಿ ಕಾಣುವ ‘SSLC Result 2026’ ಎಂಬ ಲಿಂಕ್ ಆರಿಸಿ.
  • ನಿಮ್ಮ ನೋಂದಣಿ ಸಂಖ್ಯೆ (Registration Number) ಮತ್ತು ಜನ್ಮ ದಿನಾಂಕವನ್ನು (DOB) ಸರಿಯಾಗಿ ಟೈಪ್ ಮಾಡಿ.
  • ‘Submit’ ಬಟನ್ ಒತ್ತಿದ ತಕ್ಷಣ ನಿಮ್ಮ ಅಂಕಪಟ್ಟಿ ಪರದೆಯ ಮೇಲೆ ಕಾಣಿಸುತ್ತದೆ.

ಇದಲ್ಲದೆ ನಿಮ್ಮ ರಿಸಲ್ಟ್‌ / ಅಂಕಪಟ್ಟಿಯನ್ನ ಡಿಜಿಲಾಕರ್ ಮೂಲಕವೂ ಪಡೆಯಬಹುದು.
ಈ ಬಾರಿ ಮಂಡಳಿಯು ವಿದ್ಯಾರ್ಥಿಗಳಿಗೆ ತಮ್ಮ ಅಂಕಪಟ್ಟಿಯನ್ನು ಡಿಜಿಲಾಕರ್ ಮೂಲಕ ಡೌನ್‌ಲೋಡ್ ಮಾಡಿಕೊಳ್ಳಲು ಅವಕಾಶ ನೀಡಿದೆ. ಇದು ಮುಂದಿನ ಕಾಲೇಜು ಪ್ರವೇಶಾತಿ ಪ್ರಕ್ರಿಯೆಗಳಿಗೆ ಮೂಲ ದಾಖಲೆಯಾಗಿ ಮಾನ್ಯತೆ ಪಡೆಯಲಿದೆ.

RELATED ARTICLES
- Advertisment -
Google search engine

Most Popular