Saturday, February 14, 2026
Google search engine

Homeರಾಜ್ಯಎಸ್.ಎಸ್.ಎಲ್.ಸಿ ಫಲಿತಾಂಶ ತಾಲೂಕಿನ ಘನತೆ ಹೆಚ್ಚಿಸಬೇಕು : ಶಾಸಕ ಹೆಚ್.ಟಿ.ಮಂಜು

ಎಸ್.ಎಸ್.ಎಲ್.ಸಿ ಫಲಿತಾಂಶ ತಾಲೂಕಿನ ಘನತೆ ಹೆಚ್ಚಿಸಬೇಕು : ಶಾಸಕ ಹೆಚ್.ಟಿ.ಮಂಜು

ಕೆ.ಆರ್.ಪೇಟೆ : ತಾಲೂಕಿನ ವಸತಿ ಶಾಲೆಗಳಲ್ಲಿ ಗುಣಮಟ್ಟದ ಶಿಕ್ಷಣಕ್ಕೆ ಶಾಲೆಯ ಶಿಕ್ಷಕರು ಶ್ರಮ ಪಡುತ್ತಿದ್ದಾರೆ ಈ ವರ್ಷ ಎಸ್.ಎಸ್.ಎಲ್.ಸಿ ಫಲಿತಾಂಶದಲ್ಲಿ ಶೇ.100ರಷ್ಟು ಸಾಧನೆ ತಂದು ತಾಲೂಕಿನ ಘನತೆ ಹೆಚ್ಚಿಸಬೇಕು ಎಂದು ಶಾಸಕ ಹೆಚ್.ಟಿ.ಮಂಜು ಶಿಕ್ಷಕ ವೃಂದ ಮತ್ತು ವಿದ್ಯಾರ್ಥಿಗಳಿಗೆ ಕರೆ ನೀಡಿದರು.

ಈ ಬಗ್ಗೆ ತಾಲೂಕಿನ ಕಸಬಾ ಹೋಬಳಿಯ ಮಾರ್ಗೋನಹಳ್ಳಿ ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ 2025-26ರ ಸಾಲಿನ ಮೊರಾರ್ಜಿ ದೇಸಾಯಿ ಸಾಂಸ್ಕೃತಿಕ ವೈಭವ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಡಿದ ಅವರು, ವಸತಿ ಶಾಲೆಯು ಆರಂಭಗೊಂಡಂದಿನಿಂದಲೂ ಸೂಕ್ತ ಕಾಂಪೌಂಡ್ ಭದ್ರತೆ ವ್ಯವಸ್ಥೆ ಇಲ್ಲದೆ ಆತಂಕದಲ್ಲೇ ವಿದ್ಯಾರ್ಥಿಗಳು ವಿದ್ಯಾಭ್ಯಾಸ ಮಾಡುವ ಅನಿವಾರ್ಯ ಸೃಷ್ಟಿಯಾಗಿತ್ತು. ಅದನ್ನು ಪರಿಗಣಿಸಿ ಒಂದು ಕೋಟಿ ವೆಚ್ಚದಲ್ಲಿ ಸಂಪೂರ್ಣ ನಿರ್ಮಾಣ ಕಾಮಗಾರಿ ಪೂರ್ಣಗೊಳ್ಳುತ್ತಿದೆ. ಆಂಗ್ಲ ಮಾಧ್ಯಮದ ಶಿಕ್ಷಣ ಕಿಲಿಕೆಯ ವ್ಯವಸ್ಥೆಯನ್ನು ಗ್ರಾಮೀಣ ಭಾಗದಲ್ಲಿ ಸರ್ಕಾರ ಕಲ್ಪಿಸಿಕೊಟ್ಟಿರುವುದು ಶ್ಲಾಘನೀಯ.

ಬಡ ವಿದ್ಯಾರ್ಥಿಗಳಿಗೆ ಉಚಿತ ಶಿಕ್ಷಣ ವಸತಿ ಶಾಲೆಗಳಲ್ಲಿ ದೊರಕುತ್ತಿದ್ದು, ಪೋಷಕರು ಹೆಚ್ಚು ಹೆಚ್ಚು ತಮ್ಮ ಮಕ್ಕಳನ್ನು ವಸತಿ ಶಾಲೆಗೆ ಸೇರಿಸುವ ಪ್ರಯತ್ನ ಮಾಡಬೇಕು. ಪ್ರತಿ ವಿದ್ಯಾರ್ಥಿಗೆ ಸರ್ಕಾರ 1 ಲಕ್ಷ 50 ಸಾವಿರ ರೂಗಳ ಅನುಧಾನವನ್ನು ಪ್ರತಿ ವರ್ಷ ಖರ್ಚು ಮಾಡುತ್ತಿದೆ. ಇದನ್ನು ಸದ್ಬಳಕೆ ಮಾಡಿಕೊಂಡು ದೇಶದ ಸತ್ಪಜ್ರೆಗಳಾಗಿ ವಿದ್ಯಾರ್ಥಿಗಳು ಹೊರಹೊಮ್ಮಬೇಕೆಂದು ಶಾಸಕ ಹೆಚ್.ಟಿ.ಮಂಜು ಕರೆ ನೀಡಿದರು.

ಬಳಿಕ ಕಾರ್ಯಕ್ರಮವನ್ನು ಪಾಂಡವಪುರ ಉಪ ವಿಭಾಗಧಿಕಾರಿ ಶ್ರೀನಿವಾಸ್ ಉದ್ಘಾಟಿಸಿ ಮಾತನಾಡಿ ಮೊರಾರ್ಜಿ ದೇಸಾಯಿ ಶಾಲೆಗಳಲ್ಲಿ ಗುಣಮಟ್ಟ ಶಿಕ್ಷಣ ನೀಡುತ್ತಿವೆ. ಪಠ್ಯ ಶಿಕ್ಷಣದೊಟ್ಟಿಗೆ ವಿದ್ಯಾರ್ಥಿಗಳಲ್ಲಿ ಮಾನವೀಯ ಮೌಲ್ಯಗಳನ್ನು ಕಲಿಸುತ್ತಿದೆ. ನಾಗರೀಕ ಸಮಾಜದಲ್ಲಿ ಹಬ್ಬ ಹರಿದಿನ ಆಚರಿಸುವಂತೆ ಶಾಲಾ ಕಾಲೇಜುಗಳಲ್ಲಿ ವರ್ಷಕ್ಕೊಮ್ಮೆ ನಡೆಯುವ ವಾರ್ಷಿಕೋತ್ಸವ ಮಕ್ಕಳ ಪಾಲಿಗೆ ಹಬ್ಬದ ಸನ್ನಿವೇಶವನ್ನು ಸೃಷ್ಟಿಸುತ್ತದೆ ಎಂದರು.

ರಾಜ್ಯ ಆರ್.ಟಿ.ಓ ಅಧಿಕಾರಿಗಳ ಸಂಘದ ಅಧ್ಯಕ್ಷ ಮಲ್ಲಿಕಾರ್ಜುನ್ ಮಾತನಾಡಿ, ಮಾರ್ಗೋನಹಳ್ಳಿ ಶ್ರೀ ಮರಡಿಲಿಂಗೇಶ್ವರ ಕ್ಷೇತ್ರದಲ್ಲಿರುವ ಈ ಶಾಲೆ ವಾತಾವರಣವೇ ವಿದ್ಯಾರ್ಥಿಗಳಿಗೆ ಸ್ಪೂರ್ತಿದಾಯಕವಾಗಿದೆ. ಪ್ರಸ್ತುತ ಸರ್ಕಾರವು ಕೂಡ ವಸತಿ ಶಾಲೆಯ ಸೌಲಭ್ಯಗಳಿಗೆ ಹೆಚ್ಚು ಹೊತ್ತು ನೀಡುತ್ತಿದೆ. ಹಾಗಾಗಿ ವಿದ್ಯಾರ್ಥಿಗಳಿಗೆ ಕಲಿಯುವ ಆಸಕ್ತಿ ಇದ್ದಲ್ಲಿ ಅವಕಾಶಗಳು ಸಾಕಷ್ಟು ಇದೆ. ಅದನ್ನು ಬಳಸಿಕೊಳ್ಳುವ ಕೆಲಸ ಮಕ್ಕಳಿಂದ ಆಗಬೇಕು ಪೆÇೀಷಕರು ಇದಕ್ಕೆ ಸಹಕಾರವನ್ನು ನೀಡಬೇಕು. ವಿದ್ಯಾರ್ಥಿಗಳು ಸುಶಿಕ್ಷಿತರಾಗಿ ಭವ್ಯ ಭವಿಷ್ಯತ್ತಿನ ನಾಗರಿಕ ಪ್ರಜೆಗಳಾಗಿ ಸಮಾಜಮುಖಿಗಳಾಗಬೇಕು ಎಂದು ವಿದ್ಯಾರ್ಥಿಗಳಿಗೆ ಕಿವಿಮಾತು ತಿಳಿಸಿದರು.

ಕಾರ್ಯಕ್ರಮದಲ್ಲಿ ಕ್ಷೇತ್ರ ಶಿಕ್ಷಣಾಧಿಕಾರಿ ವೈ.ಕೆ.ತಿಮ್ಮೇಗೌಡ, ಕ್ರೈಸ್ ಡಿಸಿಓ ಮಂಡ್ಯ ಅಭಿಲಾಶ್, ಟಿ.ಎ.ಪಿ.ಸಿ.ಎಂ.ಎಸ್ ಅಧ್ಯಕ್ಷ ಬಲದೇವ್, ತಾಲ್ಲೂಕು ಶಿಕ್ಷಣ ಸಂಯೋಜಕ ಹರೀಶ್, ತಾಲ್ಲೂಕು ಸಾಂಖ್ಯಿಕ ಅಧಿಕಾರಿ ಮೋದೂರು ಶ್ರೀನಿವಾಸ್, ವಸತಿ ಶಾಲೆಯ ಪ್ರಾಂಶುಪಾಲ ಎಲ್.ಮಲ್ಲಿಕಾರ್ಜುನಸ್ವಾಮಿ, ಉಪ ಪ್ರಾಂಶುಪಾಲ ಸಿ.ಕೆ.ಧನಂಜಯಕುಮಾರ್, ತಾಲ್ಲೂಕಿನ ವಸತಿ ಶಾಲೆಗಳ ಪ್ರಾಂಶುಪಾಲರಾದ ವೈ.ಪವಿತ್ರ, ಟಿ.ಆರ್.ರಾಜಣ್ಣ, ಬಿ.ಎಸ್.ಲಲಿತ, ಶಾಂತಿ, ಗ್ರಾಮ ಪಂಚಾಯಿತಿ ಸದಸ್ಯೆ ಕಾಳಮ್ಮ ಮುಖಂಡರಾದ ಚಿಲ್ಲದಹಳ್ಳಿ ರಮೇಶ್‍ಗೌಡ, ಯಾಲಕಪ್ಪ, ಶಿಕ್ಷಕರಾದ ಎಚ್.ಮಹೇಶ್, ಎಂ.ಎಸ್.ಸುನೀಲ್‍ಕುಮಾರ್, ಶಾಲೆಯ ಸಾಂಸ್ಕೃತಿಕ ಸಮಿತಿ ಮುಖ್ಯಸ್ಥ ಟಿ.ವೈ.ಆನಂತನರಸಿಂಹನ್ ಸೇರಿದಂತೆ ಬೋಧಕ ಬೋಧಕೇತರರು ಹಾಜರಿದ್ದರು.

RELATED ARTICLES
- Advertisment -
Google search engine

Most Popular