Tuesday, May 20, 2025
Google search engine

Homeರಾಜ್ಯಕೆಲವೇ ಕ್ಷಣಗಳಲ್ಲಿ SSLC ಫಲಿತಾಂಶ ಪ್ರಕಟ: ಮಧ್ಯಾಹ್ನ 12.30ರಿಂದ ವೆಬ್‌ಸೈಟ್‌ನಲ್ಲಿ ಲಭ್ಯ

ಕೆಲವೇ ಕ್ಷಣಗಳಲ್ಲಿ SSLC ಫಲಿತಾಂಶ ಪ್ರಕಟ: ಮಧ್ಯಾಹ್ನ 12.30ರಿಂದ ವೆಬ್‌ಸೈಟ್‌ನಲ್ಲಿ ಲಭ್ಯ

ಬೆಂಗಳೂರು: SSLC ಪರೀಕ್ಷೆ-1ರ ಫಲಿತಾಂಶವನ್ನು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯಮಾಪನ ಮಂಡಳಿ ಕೆಲವೇ ಕ್ಷಣಗಳಲ್ಲಿ ಪ್ರಕಟವಾಗಲಿದೆ. ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಶಿಕ್ಷಣ ಸಚಿವ ಮಧು ಬಂಗಾರಪ್ಪ ಇಂದು ಬೆಳಗ್ಗೆ 11.30ಕ್ಕೆ ಸುದ್ದಿಗೋಷ್ಠಿ ನಡೆಸಿ ಫಲಿತಾಂಶ ಪ್ರಕಟಿಸಲಿದ್ದಾರೆ. ಮಧ್ಯಾಹ್ನ 12.30ರ ನಂತರ ವೆಬ್‌ಸೈಟ್‌ನಲ್ಲಿ SSLC ಫಲಿತಾಂಶ ಲಭ್ಯವಾಗಲಿದೆ. http://karresults.nic.in ಜಾಲತಾಣದಲ್ಲಿ ಫಲಿತಾಂಶ ವೀಕ್ಷಿಸಬಹುದಾಗಿದೆ. ಮಾರ್ಚ್‌, ಏಪ್ರಿಲ್ ತಿಂಗಳಲ್ಲಿ ಎಸ್‌ಎಸ್‌ಎಲ್‌ಸಿ ಪರೀಕ್ಷೆ ನಡೆಸಲಾಗಿತ್ತು. 8,96,447 ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದು ನಾಳೆ ಫಲಿತಾಂಶ ಪ್ರಕಟವಾಗಲಿದೆ.


ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯಮಾಪನ ಮಂಡಳಿ (KSEAB) ನಡೆಸುವ ಎಸ್‌ ಎಸ್‌ ಎಲ್‌ ಸಿ ಪರೀಕ್ಷೆ-1 ಮಾರ್ಚ್ 21 ರಿಂದ ಏಪ್ರಿಲ್ 4, 2025 ರವರೆಗೆ ನಡೆದಿತ್ತು.  ಎಸ್‌ ಎಸ್‌ ಎಲ್‌ ಸಿ ಪರೀಕ್ಷೆ -1ಕ್ಕೆ 8,96,447 ವಿದ್ಯಾರ್ಥಿಗಳು ಹಾಜರಾಗಿದ್ದರು.15,881 ಶಾಲೆಗಳ ಈ ವಿದ್ಯಾರ್ಥಿಗಳು 2,818 ಪರೀಕ್ಷಾ ಕೇಂದ್ರಗಳಲ್ಲಿ ಪರೀಕ್ಷೆ ಬರೆದಿದ್ದರು.

ಫಲಿತಾಂಶ ನೋಡುವುದು ಹೇಗೆ:

ಫಲಿತಾಂಶವನ್ನು ಅಧಿಕೃತ ವೆಬ್‌ಸೈಟ್ sslc.karnataka.gov.in ಮತ್ತು karresults.nic.in ಮೂಲಕ ಪಡೆಯಬಹುದು. ವಿದ್ಯಾರ್ಥಿಗಳು ತಮ್ಮ ನೋಂದಣಿ ಸಂಖ್ಯೆ ಮತ್ತು ಜನ್ಮ ದಿನಾಂಕವನ್ನು ಫಲಿತಾಂಶ ಲಾಗಿನ್ ವಿಂಡೋದಲ್ಲಿ ನಮೂದಿಸಬೇಕು.
 ಫಲಿತಾಂಶವನ್ನು karresults.nic.in ಅಧಿಕೃತ ವೆಬ್‌ಸೈಟ್‌ನಲ್ಲಿ ಪರಿಶೀಲಿಸಬಹುದು. ಆನ್‌ಲೈನ್ ಮೋಡ್‌ನಲ್ಲಿ ಪರಿಶೀಲಿಸಲು ಈ ಸೂಚನೆಗಳನ್ನು ಪಾಲಿಸಿ.
ಹಂತ 1: karresults.nic.in ನಲ್ಲಿ ಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡಿ.
ಹಂತ 2: ‘ ಕರ್ನಾಟಕ ಎಸ್‌ಎಸ್‌ಎಲ್‌ಸಿ ಮುಖ್ಯ ಪರೀಕ್ಷೆಯ ಫಲಿತಾಂಶಗಳು 2025 ‘ ಲಿಂಕ್ ಅನ್ನು ಕ್ಲಿಕ್ ಮಾಡಿ.
ಹಂತ 3: SSLC ಪರೀಕ್ಷೆಯ ಫಲಿತಾಂಶ 2025 ಲಾಗಿನ್ ವಿಂಡೋ.
ಹಂತ 4: ಸೂಕ್ತ ಕ್ಷೇತ್ರಗಳಲ್ಲಿ ನೋಂದಣಿ ಸಂಖ್ಯೆ ಮತ್ತು ಜನ್ಮ ದಿನಾಂಕವನ್ನು ನಮೂದಿಸಿ.
ಹಂತ 5: ಕರ್ನಾಟಕ ಮಂಡಳಿಯ SSLC ಫಲಿತಾಂಶ 2025 ಪರದೆಯ ಮೇಲೆ ಕಾಣಿಸುತ್ತದೆ.
ಹಂತ 6: ಭವಿಷ್ಯದ ಉಲ್ಲೇಖಕ್ಕಾಗಿ SSLC.karnataka.gov.in ಆನ್‌ಲೈನ್ ಫಲಿತಾಂಶ ಅಂಕಪಟ್ಟಿಯ ಮುದ್ರಣವನ್ನು ತೆಗೆದುಕೊಳ್ಳಿ.

SMS ಮೂಲಕ ಪರಿಶೀಲಿಸುವುದು ಹೇಗೆ:
KAR10<ಸ್ಪೇಸ್>ರೋಲ್ ಸಂಖ್ಯೆ ನಂತಹ ಸಂದೇಶವನ್ನು ಟೈಪ್ ಮಾಡಿ .
56263 ಗೆ ಸಂದೇಶ ಕಳುಹಿಸಿ. ಫಲಿತಾಂಶವನ್ನು ವಿದ್ಯಾರ್ಥಿಗಳ ಅದೇ ಮೊಬೈಲ್ ಸಂಖ್ಯೆಗೆ ಕಳುಹಿಸಲಾಗುತ್ತದೆ.

ಫಲಿತಾಂಶ ಪ್ರಕಟವಾದ ನಂತರ ವಿದ್ಯಾರ್ಥಿಗಳು ಮರುಮೌಲ್ಯಮಾಪನ/ಮರುಪರಿಶೀಲನೆ ಪ್ರಕ್ರಿಯೆಗೆ ಅರ್ಜಿ ಸಲ್ಲಿಸಬಹುದು.  ಅಭ್ಯರ್ಥಿಗಳು ಕೊನೆಯ ದಿನಾಂಕದ ಮೊದಲು ಮಂಡಳಿಯ ಅರ್ಜಿ ನಮೂನೆಯನ್ನು ಆನ್‌ ಲೈನ್ ಅಥವಾ ಆಫ್‌ ಲೈನ್ ಮೋಡ್‌ನಲ್ಲಿ ಅಗತ್ಯ ಶುಲ್ಕದೊಂದಿಗೆ ಸಲ್ಲಿಸಬೇಕು.
ವಿದ್ಯಾರ್ಥಿಗಳು ನಿರಾಶರಾಗಬೇಕಿಲ್ಲ. ಮತ್ತೆ ಎರಡು ಅವಕಾಶಗಳಿರುತ್ತವೆ. ಪರೀಕ್ಷೆ ಬರೆದು ಉತ್ತೀರ್ಣರಾಗಲು ನಿಮಗೆ ಇನ್ನೂ ಎರಡು ಅವಕಾಶಗಳಿರುತ್ತದೆ. ಈ ಪರೀಕ್ಷೆಗಳು ಜೂನ್‌ ಮತ್ತು ಜುಲೈ ತಿಂಗಳಲ್ಲಿ ಜರುಗಲಿವೆ.

RELATED ARTICLES
- Advertisment -
Google search engine

Most Popular