Sunday, June 8, 2025
Google search engine

Homeರಾಜ್ಯಕಾಲ್ತುಳಿತ ಕೇಸ್ : ವಿಧಾನಸೌಧದ ಗಾಂಧಿ ಪ್ರತಿಮೆ ಬಳಿ ಬಿಜೆಪಿಯಿಂದ ಪ್ರತಿಭಟನೆ

ಕಾಲ್ತುಳಿತ ಕೇಸ್ : ವಿಧಾನಸೌಧದ ಗಾಂಧಿ ಪ್ರತಿಮೆ ಬಳಿ ಬಿಜೆಪಿಯಿಂದ ಪ್ರತಿಭಟನೆ

ಬೆಂಗಳೂರು : ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಕಾಲ್ತುಳಿತ ದುರಂತ ಸಂಭವಿಸಿ 11 ಜನರು ಸಾವನ್ನಪ್ಪಿರುವ ಘಟನೆ ಖಂಡಿಸಿ ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿ ನಾಯಕರು ಪ್ರತಿಭಟನೆ ನಡೆಸುತ್ತಿದ್ದಾರೆ.

ವಿಧಾನಸೌಧದ ಗಾಂಧಿ ಪ್ರತಿಮೆ ಬಳಿ ವಿಪಕ್ಷ ನಾಯಕ ಆರ್. ಅಶೋಕ್, ಬಿ.ವೈ. ವಿಜಯೇಂದ್ರ ನೇತೃತ್ವದಲ್ಲಿ ಬಿಜೆಪಿ ಪ್ರತಿಭಟನೆ ನಡೆಸುತ್ತಿದೆ. ಪ್ರತಿಭಟನೆಯಲ್ಲಿ ಬಿಜೆಪಿ ಶಾಸಕರು, ಸಂಸದರು, ಎಂಎಲ್ ಸಿಗಳು ಪಾಲ್ಗೊಂಡಿದ್ದು, ರಾಜ್ಯ ಬಿಜೆಪಿ ಸರ್ಕಾರದ ವಿರುದ್ಧ ಧಿಕ್ಕಾರ ಕೂಗಿ ಪ್ರತಿಭಟಿಸುತ್ತಿದ್ದಾರೆ.

ವಿಧಾನಸೌಧದ ಗಾಂಧಿ ಪ್ರತಿಮೆ ಬಳಿ ಬಿಜೆಪಿ ಪ್ರತಿಭಟನೆ ನಡೆಸುತ್ತಿದ್ದು, ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ. ಶಿವಕುಮಾರ್ ರಾಜೀನಾಮೆಗೆ ಆಗ್ರಹಿಸಿದ್ದಾರೆ. ಇನ್ನು ವಿಧಾನಸೌಧದ ಸುತ್ತಮುತ್ತ ಬಿಗಿ ಪೊಲೀಸ್ ಬಂದೋಬಸ್ತ ಮಾಡಲಾಗಿದೆ.

RELATED ARTICLES
- Advertisment -
Google search engine

Most Popular