Friday, June 6, 2025
Google search engine

Homeಅಪರಾಧಕಾನೂನುಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಕಾಲ್ತುಳಿತ ದುರಂತ : ಸ್ವಯಂಪ್ರೇರಿತ ಪಿಐಎಲ್ ದಾಖಲಿಸಿಕೊಂಡ ಹೈಕೋರ್ಟ್

ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಕಾಲ್ತುಳಿತ ದುರಂತ : ಸ್ವಯಂಪ್ರೇರಿತ ಪಿಐಎಲ್ ದಾಖಲಿಸಿಕೊಂಡ ಹೈಕೋರ್ಟ್

ಬೆಂಗಳೂರು : ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಕಾಲ್ತುಳಿತ ದುರಂತಕ್ಕೆ ಸಂಬಂಧಿಸಿದಂತೆ ಹೈಕೋರ್ಟ್ ಸ್ವಯಂ ಪ್ರೇರಿತ ಪಿಐಎಲ್ ದಾಖಲಿಸಿಕೊಂಡಿದೆ.

ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂ ಬಳಿ ನಡೆದ ಭೀಕರ ಕಾಲ್ತುಳಿತದಲ್ಲಿ 11 ಮಂದಿ ಸಾವನ್ನಪ್ಪಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಕರ್ನಾಟಕ ಹೈಕೋರ್ಟ್ ಸ್ವಯಂಪ್ರೇರಿತ ಪಿಐಎಲ್ ದಾಖಲಿಸಿಕೊಂಡಿದ್ದು, ಇಂದು ಮಧ್ಯಾಹ್ನ 2.30 ಕ್ಕೆ ವಿಚಾರಣೆ ನಡೆಸಲಿದೆ.

ಹೈಕೋರ್ಟ್ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಭದ್ರತಾ ಲೋಪವಾಗಿದೆ, ಹಲವರ ಸಾವು-ನೋವು ಸಂಭವಿಸಿದೆ. ಘಟನೆ ಬಗ್ಗೆ ವರದಿ ನೀಡುವಂತೆ ರಾಜ್ಯ ಸರ್ಕಾರಕ್ಕೆ ಸೂಚನೆ ನೀಡಿದೆ.

ಇನ್ನೂ ಬೆಂಗಳೂರು ಕಾಲ್ತುಳಿತ ದುರಂತಕ್ಕೆ ಕಾರಣವಾಗಿರುವ ತಪ್ಪಿತಸ್ಥ ಅಧಿಕಾರಿಗಳು, ಖಾಸಗಿ ಸಂಸ್ಥೆಯ ಅಧಿಕಾರಿಗಳು-ಸಿಬ್ಬಂದಿ ವಿರುದ್ಧ ಕ್ರಮ ಜರುಗಿಸಬೇಕೆಂದು ಆಮ್ ಆದ್ಮಿ ಪಕ್ಷದ ಕರ್ನಾಟಕ ವಿಭಾಗದ ಯುವ ಅಧ್ಯಕ್ಷ ವಕೀಲ ಲೋಹಿತ್ ಹನುಮಪುರ ಹೈಕೋರ್ಟ್ ಗೆ ಅರ್ಜಿ ಸಲ್ಲಿಸಲಿದ್ದಾರೆ.

RELATED ARTICLES
- Advertisment -
Google search engine

Most Popular