Tuesday, April 21, 2026
Google search engine

Homeಸ್ಥಳೀಯಕೊರೊನಾ ದುರಂತ 25 ಮಂದಿಗೆ ಸರ್ಕಾರಿ ಉದ್ಯೋಗ ನೀಡಿದ ರಾಜ್ಯ ಸರ್ಕಾರ

ಕೊರೊನಾ ದುರಂತ 25 ಮಂದಿಗೆ ಸರ್ಕಾರಿ ಉದ್ಯೋಗ ನೀಡಿದ ರಾಜ್ಯ ಸರ್ಕಾರ

ಚಾಮರಾಜನಗರ : ಕೊರೊನಾ ಎರಡನೇ ಅಲೆಯ ಸಂದರ್ಭ 2021ರ ಮೇ 2ರಂದು ಚಾಮರಾಜನಗರ ಜಿಲ್ಲಾಸ್ಪತ್ರೆಯಲ್ಲಿ ಆಕ್ಸಿಜನ್ ಕೊರತೆಯಿಂದಾಗಿ ಹಲವು ರೋಗಿಗಳು ಪ್ರಾಣ ಕಳೆದುಕೊಂಡಿದ್ದರು. ಈ ಸಂಬಂಧ ಸಂತ್ರಸ್ತ ಕುಟುಂಬಗಳಿಗೆ ಕೊಟ್ಟ ಮಾತನ್ನು ರಾಜ್ಯ ಕಾಂಗ್ರೆಸ್​​ ಉಳಿಸಿಕೊಂಡಿದು, ಸಿದ್ದರಾಮಯ್ಯ ನೆತೃತ್ವದ ರಾಜ್ಯ ಸರ್ಕಾರ 25 ಮಂದಿಗೆ ಸರ್ಕಾರಿ ಉದ್ಯೋಗದ ನೇಮಕಾತಿ ಪತ್ರ ವಿತರಣೆ ಮಾಡಿದೆ. ಗುಂಡ್ಲುಪೇಟೆಯ ದೇವರಾಜ್ ಅರಸ್ ಮೈದಾನದಲ್ಲಿ ನಡೆದ ಕಾರ್ಯಕ್ರಮದಲ್ಲಿ ಸಿಎಂ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿ.ಕೆ. ಶಿವಕುಮಾರ್​​ ನೇಮಕಾತಿ ಪತ್ರ ವಿತರಿಸಿದ್ದಾರೆ.

ಭಾರತ್ ಜೋಡೋ ಯಾತ್ರೆ ವೇಳೆ ಸಂತ್ರಸ್ತ ಕುಟುಂಬಗಳ ಸದಸ್ಯರಿಗೆ ಸರ್ಕಾರಿ ಉದ್ಯೋಗ ನೀಡುವ ಭರವಸೆಯನ್ನು ಕಾಂಗ್ರೆಸ್​​ ನಾಯಕ ರಾಹುಲ್​​ ಗಾಂಧಿ ನೀಡಿದ್ದರು. ಅದರಂತೆ ಸಂತ್ರಸ್ತ ಕುಟುಂಬಗಳ 25 ಮಂದಿಗೆ ಚಾಮರಾಜನಗರ ವೈದ್ಯಕೀಯ ಕಾಲೇಜು ಆಸ್ಪತ್ರೆಯಲ್ಲಿ ಖಾಯಂ ನೌಕರಿಯನ್ನು ರಾಜ್ಯ ಸರ್ಕಾರ ನೀಡಿದೆ. ರಾಜ್ಯದಲ್ಲಿ ಕೊರೊನಾ ಮಹಾಮಾರಿ ಅಬ್ಬರದ ಸಂದರ್ಭ, ಕೋವಿಡ್​​ ಎರಡನೇ ಅಲೆಯ ವೇಳೆ ಚಾಮರಾಜನಗರ ಜಿಲ್ಲಾ ಆಸ್ಪತ್ರೆಯಲ್ಲಿ ಬಾರಿ ದುರಂತವೊಂದು ನಡೆದಿತ್ತು. ಆಮ್ಲಜನಕದ ಕೊರತೆಯಿಂದಾಗಿ ಒಟ್ಟು 36 ಮಂದಿ ಪ್ರಾಣಕಳೆದುಕೊಂಡಿದ್ದು, ಈ ವಿಚಾರ ದೇಶಾದ್ಯಂತ ಸುದ್ದಿಯಾಗಿತ್ತು. ಈ ಪೈಕಿ 21 ಸಂತ್ರಸ್ತ ಕುಟುಂಬಗಳು ಸರ್ಕಾರಿ ಉದ್ಯೋಗಕ್ಕೆ ಬೇಡಿಕೆ ಇಟ್ಟಿದ್ದರು. ಹೀಗಾಗಿ ಮೃತಪಟ್ಟ ಕುಟುಂಬದವರಿಗೆ ಸರ್ಕಾರಿ ನೌಕರಿ ಭರವಸೆಯನ್ನುವಿರೋಧ ಪಕ್ಷದಲ್ಲಿದ್ದಾಗ ಸಿದ್ದರಾಮಯ್ಯ ಹಾಗೂ ಡಿ.ಕೆ. ಶಿವಕುಮಾರ್​​ ನೀಡಿದ್ದರು. ಆ ವೇಳೆ ತಲಾ ಒಂದು‌ ಲಕ್ಷ ರೂ‌. ಪರಿಹಾರ ನೀಡುವುದರ ಜೊತೆಗೆ, ತಪ್ಪಿತಸ್ಥರಿಗೆ ಶಿಕ್ಷೆ ಕೊಡಿಸುವುದಾಗಿಯೂ ಆಶ್ವಾಸನೆ ನೀಡಲಾಗಿತ್ತು.

ಘಟನೆಯ ಬಳಿಕ ಸಂತ್ರಸ್ತ ಕುಟುಂಬಗಳಿಗೆ ನ್ಯಾಯ ಸಿಗಬೇಕೆಂಬ ನಿಟ್ಟಿನಲ್ಲಿ ಅಂದಿನಿಂದಲೂ ಹೋರಾಟಗಳು ನಡೆದುಕೊಂಡು ಬಂದಿದ್ದವು. ಅಂತಿಮವಾಗಿ ಇವರ ಮನವಿಗೆ ಸ್ಪಂದಿಸಿರುವ ರಾಜ್ಯ ಸರ್ಕಾರ 25 ಮಂದಿಗೆ ಸರ್ಕಾರಿ ನೌಕರಿಯನ್ನು ನೀಡಿದೆ. ಕುಟುಂಬದ ಸದಸ್ಯರನ್ನು ಕಳೆದುಕೊಂಡು ಕಂಗಾಲಾಗಿದ್ದವರ ಬಾಳಲ್ಲಿ ಸರ್ಕಾರದ ಈ ನಿರ್ಧಾರ ಹೊಸ ಅಶಾಕಿರಣ ಮೂಡಿಸಿದ್ದು, ಸಂತ್ರಸ್ತ ಕುಟುಂಬಗಳ ಸುದೀರ್ಘ ಹೋರಾಟಕ್ಕೆ ಕೊನೆಗೂ ಜಯ ಸಿಕ್ಕಂತಾಗಿದೆ.

RELATED ARTICLES
- Advertisment -
Google search engine

Most Popular