ಬೆಂಗಳೂರು: ಗ್ರೇಟರ್ ಬೆಂಗಳೂರು ಪ್ರಾಧಿಕಾರ (GBA) ಚುನಾವಣೆಯನ್ನು ನಡೆಸಲು ರಾಜ್ಯ ಸರ್ಕಾರ ಮತ್ತೆ ಸುಪ್ರೀಂಕೋರ್ಟ್ಗೆ ಕಾಲಾವಕಾಶ ವಿಸ್ತರಣೆ ಕೋರಿ ಅರ್ಜಿ ಸಲ್ಲಿಸಿದೆ.
ಆಗಸ್ಟ್ 31ರೊಳಗೆ ಜಿಬಿಎ ಚುನಾವಣೆ ಪೂರ್ಣಗೊಳಿಸುವಂತೆ ಸುಪ್ರೀಂಕೋರ್ಟ್ ಈಗಾಗಲೇ ನಿರ್ದೇಶನ ನೀಡಿತ್ತು. ಆದರೆ, ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ ಹಾಗೂ ಆಡಳಿತಾತ್ಮಕ ಕಾರಣಗಳನ್ನು ಉಲ್ಲೇಖಿಸಿರುವ ಸರ್ಕಾರ, ಚುನಾವಣೆ ನಡೆಸಲು ಡಿಸೆಂಬರ್ 31ರವರೆಗೆ ಗಡುವು ವಿಸ್ತರಿಸುವಂತೆ ಮನವಿ ಮಾಡಿದೆ.
ಬೆಂಗಳೂರಿನ ಐದು ಮಹಾನಗರ ಪಾಲಿಕೆಗಳಿಗೆ ಚುನಾವಣೆ ನಡೆಯಬೇಕಿದ್ದು, ಸರ್ಕಾರದ ಅರ್ಜಿಯ ಕುರಿತು ಸುಪ್ರೀಂಕೋರ್ಟ್ ಶೀಘ್ರದಲ್ಲೇ ವಿಚಾರಣೆ ನಡೆಸುವ ಸಾಧ್ಯತೆಯಿದೆ.



