Saturday, January 10, 2026
Google search engine

Homeರಾಜ್ಯಮನರೇಗಾ ಯೋಜನೆ ಮರುಸ್ಥಾಪಿಸುವಂತೆ ಕೇಂದ್ರದ ವಿರುದ್ಧ ರಾಜ್ಯ ಸರ್ಕಾರ ಆಗ್ರಹ

ಮನರೇಗಾ ಯೋಜನೆ ಮರುಸ್ಥಾಪಿಸುವಂತೆ ಕೇಂದ್ರದ ವಿರುದ್ಧ ರಾಜ್ಯ ಸರ್ಕಾರ ಆಗ್ರಹ

ಬೆಂಗಳೂರು: ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯನ್ನು ಮರುಸ್ಥಾಪಿಸಬೇಕೆಂದು ರಾಜ್ಯಸರ್ಕಾರ ಆಗ್ರಹಿಸಿದ್ದು, ಈ ನಿಟ್ಟಿನಲ್ಲಿ ನಿರ್ಣಯ ಅಂಗೀಕರಿಸಲು ರಾಜ್ಯ ವಿಧಾನಸಭೆಯ ವಿಶೇಷ ಅಧಿವೇಶನವನ್ನು ಕರೆಯಲು ನಿರ್ಧರಿಸಿದೆ.

ಈ ಬಗ್ಗೆ ಬೆಂಗಳೂರು ನಗರದ ಹೋಟೆಲ್‌ನಲ್ಲಿ ನಡೆದ ಕಾಂಗ್ರೆಸ್ ಪಕ್ಷದ ಹಿರಿಯ ನಾಯಕರ ಹಾಗೂ ಸಚಿವರ ಸಭೆಯಲ್ಲಿ ಮಾತನಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ಶೀಘ್ರದಲ್ಲೇ ರಾಜ್ಯ ವಿಧಾನಸಭೆಯ ವಿಶೇಷ ಅಧಿವೇಶನ ಕರೆಯಲಾಗುವುದು ಎಂದು ತಿಳಿಸಿದ್ದಾರೆ.

ಇದೇ ವೇಳೆ ಡಾ. ಮನಮೋಹನ್ ಸಿಂಗ್ ಪ್ರಧಾನಮಂತ್ರಿಯಾಗಿದ್ದ ಸಂದರ್ಭದಲ್ಲಿ ಜಾರಿಗೆ ಬಂದ ಎಂಜಿಎನ್‌ಆರ್‌ಇಗಾ ಯೋಜನೆಯಿಂದ ಮಹಾತ್ಮ ಗಾಂಧಿಯ ಹೆಸರು ತೆಗೆದುಹಾಕುವುದು ಬಿಜೆಪಿಯ ಸಂಚು ಎಂದು ಆರೋಪಿಸಿದರಲ್ಲದೆ, ಗ್ರಾಮೀಣ ಪ್ರದೇಶಗಳ ದಲಿತರು, ಮಹಿಳೆಯರು ಹಾಗೂ ರೈತರಿಗೆ ಉದ್ಯೋಗ ಕಲ್ಪಿಸುವ ಉದ್ದೇಶದಿಂದ ಈ ಯೋಜನೆಯನ್ನು ಜಾರಿಗೆ ತರಲಾಗಿತ್ತು. ಆದರೆ, ಇದೀಗ ಕೇಂದ್ರ ಸರ್ಕಾರ ಉದ್ಯೋಗದ ಹಕ್ಕನ್ನೇ ಕಸಿದುಕೊಳ್ಳುವ ಕಾರ್ಯದಲ್ಲಿ ತೊಡಗಿದೆ. ಇದರಿಂದ ಉದ್ಯೋಗದ ಹಕ್ಕು ಅರ್ಥಹೀನವಾಗಿದೆ ಎಂದು ತಿಳಿಸಿದ್ದಾರೆ.

ಉದ್ಯೋಗದ ಹಕ್ಕು ಕಿತ್ತುಕೊಳ್ಳುವ ಕೇಂದ್ರ ಸರ್ಕಾರದ ಕ್ರಮದಿಂದಾಗಿ 28 ಕೋಟಿ ದಲಿತರಿಗೆ ಅನ್ಯಾಯವಾಗಿದೆ. ಬಡವರು ಆರ್ಥಿಕವಾಗಿ ಸಬಲರಾಗುವುದನ್ನು ಸಂಘದ ಪರಿವಾರ ಸಹಿಸುವುದಿಲ್ಲ. ಮಹಾತ್ಮಗಾಂಧಿಯ ಹೆಸರು ತೆಗೆದು ಮತ್ತೊಮ್ಮೆ ಗಾಂಧೀಜಿಯನ್ನು ಕೊಲೆ ಮಾಡಲಾಗಿದೆ. ಇದು ಸಂಘ ಪರಿವಾರದವರು ಹೇಳಿ ಕೊಟ್ಟಿರುವ ಪಾಠ. ಇವರಿಗೆ ಸರಿಯಾದ ಪಾಠ ಕಲಿಸಬೇಕು ಎಂದಿದ್ದಾರೆ.

ಇನ್ನೂ ಈ ವೇಳೆ ನರೇಗಾ ಕಾಯ್ದೆ ಮತ್ತೆ ಜಾರಿಯಾಗವಂತೆ ಜನಾಂದೋಲನ ನಡೆಯಬೇಕು. ಪ್ರತಿ ಗ್ರಾಮ ಪಂಚಾಯಿತಿ ಸದಸ್ಯರನ್ನು, ನರೇಗಾದಲ್ಲಿ ಕೆಲಸ ಮಾಡುತ್ತಿರುವವರನ್ನು ತಲುಪಬೇಕು. ಜನರನ್ನು ಜಾಗೃತಗೊಳಿಸುವ ಕೆಲಸವನ್ನು ಶಾಸಕರು ಮಾಡಬೇಕು. ನಮ್ಮ ಹೋರಾಟ ಜನಾಂದೋಲನವಾಗಿ ರೂಪುಗೊಳ್ಳುವಂತಹ ವಾತಾವರಣ ನಿರ್ಮಾಣ ಆಗಬೇಕು ಎಂದು ಸಲಹೆ ನೀಡಿದ್ದಾರೆ.

RELATED ARTICLES
- Advertisment -
Google search engine

Most Popular