Thursday, May 21, 2026
Google search engine

Homeರಾಜ್ಯಸುದ್ದಿಜಾಲಜೂನ್ 4 ರಂದು ರಾಜ್ಯ ಮಟ್ಟದ ಶ್ರೀ ನಾಲ್ವಡಿ ಕೃಷ್ಣರಾಜ ಒಡೆಯರ್ ಜಯಂತಿ ಆಚರಣೆ: ಅಪರ...

ಜೂನ್ 4 ರಂದು ರಾಜ್ಯ ಮಟ್ಟದ ಶ್ರೀ ನಾಲ್ವಡಿ ಕೃಷ್ಣರಾಜ ಒಡೆಯರ್ ಜಯಂತಿ ಆಚರಣೆ: ಅಪರ ಜಿಲ್ಲಾಧಿಕಾರಿ ಐಶ್ವರ್ಯ ಆರ್

ಮೈಸೂರು: ಜಿಲ್ಲಾಡಳಿತದ ವತಿಯಿಂದ ಜೂನ್ 4 ರಂದು ರಾಜ್ಯ ಮಟ್ಟದ ಶ್ರೀ ನಾಲ್ವಡಿ ಕೃಷ್ಣರಾಜ ಒಡೆಯರ್ ಜಯಂತಿಯನ್ನು ಕಲಾಮಂದಿರದಲ್ಲಿ ಆಚರಿಸಲಾಗುವುದು ಎಂದು ಅಪರ ಜಿಲ್ಲಾಧಿಕಾರಿ ಐಶ್ವರ್ಯ ಆರ್ ತಿಳಿಸಿದರು.

ಅವರು ಇಂದು  ಜಿಲ್ಲಾಧಿಕಾರಿಗಳ ಕಚೇರಿ ‌ಸಭಾಂಗಣದಲ್ಲಿ ಆಯೋಜಿಸಲಾಗಿದ್ದ ಪೂರ್ವಭಾವಿ ಸಿದ್ಧತಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ನಾಲ್ವಡಿ ಅವರು ನಾಡು ಕಂಡ ಅಪ್ರತಿಮವಾದ ಚೇತನ, ನೂರು ವರ್ಷಗಳ ಹಿಂದೆಯೇ ಕೈಗಾರಿಕೆ, ಶಿಕ್ಷಣ, ನೀರಾವರಿ, ಕೃಷಿಗೆ ಅವರು ನೀಡಿದ ಕೊಡುಗೆ ಅಪಾರ, ಅವರು ನೀಡಿದ ಕೊಡುಗೆ ಪ್ರತಿಯೊಬ್ಬರಿಗೂ ತಲುಪಬೇಕು. ಈ ನಿಟ್ಟಿನಲ್ಲಿ ಅರ್ಥಪೂರ್ಣವಾಗಿ ಜಯಂತಿ ಆಚರಿಸಲಾಗುವುದು. ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕಾಗಿ ಮನವಿ ಮಾಡಿದರು.

ಮೆರವಣಿಗೆ ಅರಮನೆ ಆವರಣದಲ್ಲಿರುವ ಲಕ್ಷ್ಮಿನಾರಾಯಣಸ್ವಾಮಿ ದೇವಸ್ಥಾನದ ಮುಂಭಾಗದಲ್ಲಿ ನಾಲ್ವಡಿ ಕೃಷ್ಣರಾಜ ಒಡೆಯರ್ ಅವರ ಭಾವಚಿತ್ರಕ್ಕೆ ಮಾಲಾರ್ಪಣೆ ಮಾಡಿ ಮೆರವಣಿಗೆಗೆ ಚಾಲನೆ ನೀಡಲಾಗುವುದು. ಮೆರವಣಿಗೆಯಲ್ಲಿ ಅಶ್ವರೋಹಿ ದಳ ಹಾಗೂ ಪೊಲೀಸ್ ಬ್ಯಾಂಡ್, ಡೊಳ್ಳು ಕುಣಿತ ಸೇರಿದಂತೆ ವಿವಿಧ ಕಲಾತಂಡಗಳು ಭಾಗವಹಿಸಿ ಮೆರವಣಿಗೆಗೆ ಮೆರಗು ನೀಡಲಿದೆ  ಎಂದರು.

ಕೆ.ಆರ್ ವೃತ್ತದಲ್ಲಿ ನಾಲ್ವಡಿ ಅವರ ಕುರಿತು ಗೀತಗಾಯನ ಕಾರ್ಯಕ್ರಮವನ್ನು ಆಯೋಜಿಸಲಾಗುವುದು. ಮೆರವಣಿಗೆ ಸಾಗುವ ಸಂದರ್ಭದಲ್ಲಿ ನಾಲ್ವಡಿ ಅವರ ಪುತ್ಥಳಿಗೆ ಮಾಲಾರ್ಪಣೆ ಮಾಡಲಾಗುವುದು‌ ಎಂದರು.

ವಿವಿಧ ಸ್ಪರ್ಧೆಗಳು 7 ರಿಂದ 14 ವರ್ಷ ಹಾಗೂ 15 ರಿಂದ 18 ವರ್ಷದ  ಎರಡು ವಿಭಾಗಗಳಲ್ಲಿ ವಿದ್ಯಾರ್ಥಿಗಳಿಗೆ ಚಿತ್ರಕಲಾ ಸ್ಪರ್ಧೆ, ರಸಪ್ರಶ್ನೆ ಸ್ಪರ್ಧೆ, ಪ್ರಬಂಧ ಸ್ಪರ್ಧೆಗಳನ್ನು ಆಯೋಜಿಸಿ ವಿಜೇತರಿಗೆ ಕಾರ್ಯಕ್ರಮದ ದಿನದಂದು ಬಹುಮಾನ ವಿತರಿಸಲಾಗುವುದು ಎಂದರು‌.

ಮೆರವಣಿಗೆಯಲ್ಲಿ ಭಾಗವಹಿಸುವವರಿಗೆ ಕುಡಿಯುವ ನೀರು ಉಪಹಾರದ ವ್ಯವಸ್ಥೆಯಾಗಬೇಕು. ಶಿಷ್ಠಾಚಾರದಂತೆ ಎಲ್ಲಾ ಗಣ್ಯರಿಗೆ ಆಹ್ವಾನ ಪತ್ರಿಕೆ ವಿತರಣೆಯಾಗಬೇಕು. ಮೆರವಣಿಗೆ ಹಾಗೂ ವೇದಿಕೆ ಕಾರ್ಯಕ್ರಮ ನಡೆಯುವ ಸ್ಥಳಗಳಲ್ಲಿ ಪೊಲೀಸ್ ಬಂದೋಬಸ್ತ್​  ಮಾಡುವಂತೆ ತಿಳಿಸಿದರು.

ಸಭೆಯಲ್ಲಿ ಹಾಜರಿದ್ದ ವಿವಿಧ ಸಂಘಟನೆಗಳ ಮುಖ್ಯಸ್ಥರು ಕಾರ್ಯಕ್ರಮದ ದಿನದಂದು ನಾಲ್ವಡಿ ಅವರ ಬಗ್ಗೆ ಉಪನ್ಯಾಸ ನೀಡಲು ಸಂಪನ್ಮೂಲ ವ್ಯಕ್ತಿ ಆಯ್ಜೆ ಮಾಡುವ ಬಗ್ಗೆ, ವಿವಿಧ ವೃತ್ತಗಳು ಹಾಗೂ ಶಾಲಾ ಕಾಲೇಜುಗಳಲ್ಲಿ ನಾಲ್ವಡಿ ಅವರ ಸಾಕ್ಷ್ಯಚಿತ್ರ ಪ್ರದರ್ಶಿಸುವ ಕುರಿತು, ಗ್ರಾಮ ಪಂಚಾಯತಿ ಮಟ್ಟದಲ್ಲಿ ನಾಲ್ವಡಿ ಅವರ ಜಯಂತಿ ಆಚರಿಸುವ ಬಗ್ಗೆ ಚರ್ಚಿಸಿದರು.

ಸಭೆಯಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ಡಾ.ಸುದರ್ಶನ್, ವಾರ್ತಾ ಮತ್ತು ಸಾರ್ವಜನಿಕ ಇಲಾಖೆ ಸಹಾಯಕ ನಿರ್ದೇಶಕಿ ನಿರ್ಮಲ ಎಸ್.ಹೆಚ್, ಹಿರಿಯ ಸಾಹಿತಿ ನಂಜರಾಜ ಅರಸ್, ಕನ್ನಡ ಸಾಂಸ್ಕೃತಿಕ ಪರಿಷತ್ ಅಧ್ಯಕ್ಷ  ಎಸ್. ಕೆ. ರಾಜುಗೌಡ, ಜಿಲ್ಲಾ ಕನ್ನಡ ಚಳುವಳಿಗಾರರ ಸಂಘದ  ಅಧ್ಯಕ್ಷ ಬಿ. ಎ. ಶಿವಶಂಕರ್, ನಾಲ್ವಡಿ ಪುರಾಷ್ಟಾನ ಸಮಿತಿ ಕಾರ್ಯದರ್ಶಿ ಸೋಸಲೆ ಸಿದ್ದರಾಜು, ಪದ್ಮ ಪಾಣಿ ಲಲಿತ ಕಲಾ ಅಕಾಡೆಮಿ ಗಾಯಕರು ಜಯಶಂಕರ ಮೇಸ್ತ್ರಿ, ಸಾಮಾಜಿಕ ಚಳುವಳಿಗಾರರು ಅರವಿಂದ್ ಶರ್ಮಾ ಸೇರಿದಂತೆ ವಿವಿಧ ಸಂಘಟನೆಗಳ ಮುಖ್ಯಸ್ಥರು ಉಪಸ್ಥಿತರಿದ್ದರು.

RELATED ARTICLES
- Advertisment -
Google search engine

Most Popular