ಮೈಸೂರು: ಮೈಸೂರು ವಿಶ್ವವಿದ್ಯಾಲಯದಿಂದ ಆ.3 ಮತ್ತು 4 ರಂದು ಆಯೋಜಿಸಿದ ಕ್ರೀಡಾಕೂಟದಲ್ಲಿ ನಗರದ ಜಿಎಸ್ಎಸ್ಎಸ್ ಸಿಂಹ ಸುಬ್ಬಮಹಾಲಕ್ಷ್ಮಿ ಪ್ರಥಮ ದರ್ಜೆ ಕಾಲೇಜಿನ ವಿದ್ಯಾರ್ಥಿಗಳು ಸಾಧನೆ ಮಾಡಿದ್ದಾರೆ.
ಕಾಲೇಜಿನ ದ್ವಿತೀಯ ಬಿಸಿಎ ವಿದ್ಯಾರ್ಥಿನಿ ನವ್ಯಾಶ್ರೀ ಕರಾಟೆಯಲ್ಲಿ ಚಿನ್ನ ಮತ್ತು ಬೆಳ್ಳಿ ಪದಕಗಳಿಸಿದ್ದಾರೆ. ಅಂತಿಮ ವರ್ಷದ ಬಿಸಿಎ ವಿದ್ಯಾರ್ಥಿ ತೇಜಸ್ ತೂಕ ಎತ್ತುವಿಕೆಯಲ್ಲಿ ಬೆಳ್ಳಿ ಪದಕ ಹಾಗೂ ಪ್ರಥಮ ಬಿಕಾಂ ವಿದ್ಯಾರ್ಥಿ ಪ್ರಶಾಂತ್ ಈಜು ಸ್ಪರ್ಧೆಯಲ್ಲಿ ಕಂಚಿನ ಪದಕ ಪಡೆದಿದ್ದಾರೆ. ಕ್ರೀಡೆಯಲ್ಲಿ ಭಾಗವಹಿಸಿ ವಿಜೇತ ವಿದ್ಯಾರ್ಥಿಗಳಿಗೆ ಸಂಸ್ಥೆವತಿಯಿಂದ ಅಭಿನಂದನೆ ಸಲ್ಲಿಸಲಾಯಿತು.
ಜಿಎಸ್ಎಸ್ಎಸ್ ಕಾರ್ಯದರ್ಶಿ ಅನುಪಮಾ ಬಿ ಪಂಡಿತ್, ಪ್ರಾಂಶುಪಾಲ ದ.ರಾಕೇಶ್ ಟಿ.ಎಸ್, ದೈಹಿಕ ಶಿಕ್ಷಣ ನಿರ್ದೇಶಕ ದರ್ಶನ್ ಸಿ.ಜೆ ಹಾಗೂ ಕ್ರೀಡಾಪಟುಗಳು ಇದ್ದರು.