Friday, January 30, 2026
Google search engine

HomeUncategorizedರಾಷ್ಟ್ರೀಯಮಹಾರಾಷ್ಟ್ರ ಉಪಮುಖ್ಯಮಂತ್ರಿ ಸ್ಥಾನಕ್ಕೆ ಸುನೇತ್ರಾ ಪವಾರ್? ಎನ್‌ಸಿಪಿ ನಾಯಕರಲ್ಲಿ ಚರ್ಚೆ

ಮಹಾರಾಷ್ಟ್ರ ಉಪಮುಖ್ಯಮಂತ್ರಿ ಸ್ಥಾನಕ್ಕೆ ಸುನೇತ್ರಾ ಪವಾರ್? ಎನ್‌ಸಿಪಿ ನಾಯಕರಲ್ಲಿ ಚರ್ಚೆ

ಮುಂಬೈ : ಅಜಿತ್ ಪವಾರ್ ಅವರ ಮರಣದಿಂದ ತೆರವಾದ ಮಹಾರಾಷ್ಟ್ರ ಉಪಮುಖ್ಯಮಂತ್ರಿ ಸ್ಥಾನಕ್ಕೆ ಅವರ ಪತ್ನಿ ಸುನೇತ್ರಾ ಪವಾರ್ ಅವರ ಹೆಸರನ್ನು ಪಕ್ಷ ಪ್ರಸ್ತಾಪಿಸಿಸಲು ಮುಂದಾಗಿದೆ ಎಂದು ರಾಷ್ಟ್ರೀಯವಾದಿ ಕಾಂಗ್ರೆಸ್ ಪಕ್ಷದ (ಎನ್‌ಸಿಪಿ) ಮೂಲಗಳು ತಿಳಿಸಿವೆ. ಸುನೇತ್ರಾ ಪವಾರ್ ಅವರು ಪ್ರಸ್ತುತ ರಾಜ್ಯಸಭಾ ಸದಸ್ಯರಾಗಿದ್ದಾರೆ.

ಸುನೇತ್ರಾ ಪವಾರ್ ಅವರನ್ನು ರಾಜ್ಯ ಸಚಿವಾಲಯಕ್ಕೆ ಸೇರಿಸಿಕೊಳ್ಳಬೇಕೆಂದು ಸಾರ್ವಜನಿಕರು ಬಯಸುತ್ತಿದ್ದಾರೆ ಎಂದು ಎನ್‌ಸಿಪಿಯ ಹಿರಿಯ ನಾಯಕ ಮತ್ತು ಮಹಾರಾಷ್ಟ್ರದ ಸಚಿವ ನರಹರಿ ಜಿರ್ವಾಲ್ ಮಾಧ್ಯಮಗಳ ಮುಂದೆ ಹೇಳಿದ್ದಾರೆ.

ಎನ್‌ಸಿಪಿಯ ಹಿರಿಯ ನಾಯಕರಾದ ಪ್ರಫುಲ್ ಪಟೇಲ್, ಛಗನ್ ಭುಜಬಲ್, ಧನಂಜಯ್ ಮುಂಡೆ ಮತ್ತು ಸುನಿಲ್ ತತ್ಕರೆ ಅವರು ಈ ಬಗ್ಗೆ ಸುನೇತ್ರಾ ಪವಾರ್ ಅವರೊಂದಿಗೆ ಮಾತುಕತೆ ನಡೆಸಿದ್ದಾರೆ. ಅಜಿತ್ ಪವಾರ್ ಅಗಲಿಕೆಯಿಂದ ತೆರವಾದ ಸ್ಥಾನಕ್ಕೆ ಸುನೇತ್ರಾ ಪವಾರ್ ಸ್ಪರ್ಧಿಸುವ ಸಾಧ್ಯತೆ ಹೆಚ್ಚಿದೆ ಎಂದು ಮೂಲಗಳು ತಿಳಿಸಿವೆ. ಈ ವಿಚಾರ ಚರ್ಚಿಸಲು ಎನ್‌ಸಿಪಿ ನಾಯಕರು ದೇವೇಂದ್ರ ಫಡ್ನವೀಸ್ ಅವರನ್ನು ಭೇಟಿ ಮಾಡುವ ಸಾಧ್ಯತೆ ಇದೆ ಎಂದು ವರದಿಯಾಗಿದೆ.

RELATED ARTICLES
- Advertisment -
Google search engine

Most Popular