ತುಮಕೂರು: ಸಚಿವ ಸ್ಥಾನದಿಂದ ಕೆ.ಎನ್. ರಾಜಣ್ಣರನ್ನು ವಜಾ ಮಾಡಿರುವುದನ್ನು ಖಂಡಿಸಿ ಮಧುಗಿರಿಯಲ್ಲಿ ಬೆಂಬಲಿಗರು ತೀವ್ರ ಪ್ರತಿಭಟನೆ ನಡೆಸಿದ್ದಾರೆ.
ಅಂಗಡಿ ಮುಂಗಟ್ಟು ಮುಚ್ಚಿಸಿ, ರಸ್ತೆ ತಡೆ ನಡೆಸಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಕೆಲವರು ಪೆಟ್ರೋಲ್ ಸುರಿದುಕೊಂಡು ಆತ್ಮಹತ್ಯೆಗೆ ಯತ್ನಿಸುವ ನಾಟಕವನ್ನೂ ಸೃಷ್ಠಿಸಿದ್ದಾರೆ.
ಮಧುಗಿರಿ ಪುರಸಭೆಯ ಅಧ್ಯಕ್ಷ, ಉಪಾಧ್ಯಕ್ಷರು ಸೇರಿದಂತೆ 13 ಸದಸ್ಯರು ರಾಜೀನಾಮೆ ನೀಡುವ ಬೆದರಿಕೆ ಹಾಕಿದ್ದಾರೆ. ರಾಜಕೀಯವಾಗಿ ಪರಿಸ್ಥಿತಿ ತೀವ್ರ ರೂಪ ಪಡೆಯುತ್ತಿದ್ದು, ರಾಜಣ್ಣ ಬೆಂಬಲಿಗರು ಆದೇಶ ಹಿಂಪಡೆಯುವಂತೆ ಆಗ್ರಹಿಸುತ್ತಿದ್ದಾರೆ.