ನವದೆಹಲಿ : ಮೈಸೂರಿನ ಚಾಮುಂಡೇಶ್ವರಿ ದೇವಸ್ಥಾನದಲ್ಲಿ ರಾಜ್ಯ ಪ್ರಾಯೋಜಿತ ದಸರಾ ಮಹೋತ್ಸವವನ್ನು ಉದ್ಘಾಟಿಸಲು ಬೂಕರ್ ಪ್ರಶಸ್ತಿ ವಿಜೇತೆ ಬಾನು ಮುಷ್ತಾಕ್ ಅವರನ್ನು ಆಹ್ವಾನಿಸುವ ರಾಜ್ಯ ಸರ್ಕಾರದ ನಿರ್ಧಾರವನ್ನು ಎತ್ತಿಹಿಡಿದ ಕರ್ನಾಟಕ ಹೈಕೋರ್ಟ್ ಆದೇಶವನ್ನು ಪ್ರಶ್ನಿಸಿ ಸಲ್ಲಿಸಲಾದ ಅರ್ಜಿಯನ್ನು ವಿಚಾರಣೆ ನಡೆಸಲು ಸುಪ್ರೀಂ ಕೋರ್ಟ್ ಒಪ್ಪಿಕೊಂಡಿದೆ.
ನಾಡಹಬ್ಬ ದಸರಾ ಉದ್ಘಾಟನೆಗೆ ಸಾಹಿತಿ ಬಾನು ಮುಷ್ತಾಕ್ ಅವರಿಗೆ ಆಹ್ವಾನ ನೀಡಿರುವ ಸರ್ಕಾರದ ಕ್ರಮ ಪ್ರಶ್ನಿಸಿ ಬಿಜೆಪಿ ಮಾಜಿ ಸಂಸದ ಪ್ರತಾಪ್ ಸಿಂಹ ಹೈಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದಾರೆ. ಅರ್ಜಿಯ ವಿಚಾರಣೆ ನಡೆಸಿದ್ದ ಕರ್ನಾಟಕ ಹೈಕೋರ್ಟ್ ಅರ್ಜಿಯನ್ನು ವಜಾಗೊಳಿಸಿ ಆದೇಶ ಹೊರಡಿಸಿತ್ತು.