ಮೈಸೂರು : ನಗರದಲ್ಲಿ ಬೆಳ್ಳಂಬೆಳಗ್ಗೆ ಸರ್ಕಾರಿ ಜಾಗ ಒತ್ತುವರಿ ಮಾಡಿಕೊಂಡಿದ್ದವರಿಗೆ ತಾಲೂಕು ಆಡಳಿತ ಶಾಕ್ ನೀಡಿದ್ದು, ಮೈಸೂರು – ನಂಜನಗೂಡು ರಾಷ್ಟ್ರೀಯ ಹೆದ್ದಾರಿಯ ಪಕ್ಕದಲ್ಲಿರುವ ಸರ್ವೆ ನಂ. 87ರ 38 ಗುಂಟೆ ಸರ್ಕಾರಿ ಜಾಗ ಒತ್ತುವರಿ ಮಾಡಿಕೊಂಡಿದ್ದರು. ಈ ಜಾಗವನ್ನ ತಾಲೂಕು ಆಡಳಿತ ಅಧಿಕಾರಿಗಳು ತೆರವು ಮಾಡಿಸಿದ್ದಾರೆ.
ಹಿಂದುಳಿದ ವರ್ಗಗಳ ಹಾಗೂ ಅಲ್ಪಸಂಖ್ಯಾತರ ಕಲ್ಯಾಣಕ್ಕಾಗಿ ವಿದ್ಯಾರ್ಥಿನಿಲಯ ನಿರ್ಮಾಣಕ್ಕೆ ಮಂಜೂರಾಗಿದ್ದ ಜಾಗವನ್ನ ಒತ್ತುವರಿ ಮಾಡಿಕೊಂಡು ಹಲವು ವರ್ಷಗಳಿಂದ ಪೇ ಅಂಡ್ ಪಾರ್ಕಿಂಗ್ ವ್ಯವಹಾರ ಮಾಡಲಾಗುತ್ತಿತ್ತು. ಇದೀಗ ಈ ಜಾಗವನ್ನು ತೆರವು ಮಾಡಲಾಗಿದೆ.



