Thursday, May 22, 2025
Google search engine

Homeಅಪರಾಧಕಾನೂನುತಮಿಳುನಾಡು ಸರ್ಕಾರ ಸುಪ್ರೀಂ ಕೋರ್ಟ್ ಮೊರೆ: ಸಮಗ್ರ ಶಿಕ್ಷಣ ಯೋಜನೆಯ ಅನುದಾನ ತಡೆ ವಿರುದ್ಧ ಕಾನೂನು...

ತಮಿಳುನಾಡು ಸರ್ಕಾರ ಸುಪ್ರೀಂ ಕೋರ್ಟ್ ಮೊರೆ: ಸಮಗ್ರ ಶಿಕ್ಷಣ ಯೋಜನೆಯ ಅನುದಾನ ತಡೆ ವಿರುದ್ಧ ಕಾನೂನು ಹೋರಾಟ

ನವದೆಹಲಿ: ಶಾಲಾ ಶಿಕ್ಷಣ ನೀಡಲು ಕೇಂದ್ರ ಸರ್ಕಾರ ಪ್ರಾಯೋಜಿತ ಸಮಗ್ರ ಶಿಕ್ಷಾ ಯೋಜನೆಯಡಿ ರಾಜ್ಯಕ್ಕೆ ನೀಡಬೇಕಾಗಿದ್ದ ಅನುದಾನವನ್ನು ತಡೆಹಿಡಿದಿರುವ ಕೇಂದ್ರ ಸರ್ಕಾರದ ನಿರ್ಧಾರದ ವಿರುದ್ಧ ತಮಿಳುನಾಡು ಸರ್ಕಾರ ಸುಪ್ರೀಂ ಕೋರ್ಟ್‌ನಲ್ಲಿ ಮೊಕದ್ದಮೆ ದಾಖಲಿಸಿದೆ.

ತ್ರಿಭಾಷಾ ಸೂತ್ರ ಮತ್ತು ರಾಷ್ಟ್ರೀಯ ಶಿಕ್ಷಣ ನೀತಿಯನ್ನು ಜಾರಿಗೊಳಿಸಲು ತಮಿಳುನಾಡು ಸರ್ಕಾರ ನಿರಾಕರಿಸಿದ ನಂತರ ಕೇಂದ್ರ ಸರ್ಕಾರ ಈ ಕ್ರಮ ಕೈಗೊಂಡಿದೆ.

ತಮಿಳು ನಾಡು ಸರ್ಕಾರ 2,291.30 ಕೋಟಿ ರೂಪಾಯಿಗಳನ್ನು ಬಿಡುಗಡೆ ಮಾಡಲು ಕೇಂದ್ರ ಸರ್ಕಾರಕ್ಕೆ ನಿರ್ದೇಶನ ನೀಡುವಂತೆ ಕೋರಿದೆ.  2024-25 ನೇ ಸಾಲಿನಲ್ಲಿ 2,151.59 ಕೋಟಿ ರೂ. ಅನುದಾನದ ಜತೆಗೆ ಮೂಲ ಮೊತ್ತದ ಮೇಲೆ ವಾರ್ಷಿಕ ಶೇ. 6ರ ಬಡ್ಡಿ ದರದಲ್ಲಿ ಬಿಡುಗಡೆ ಮಾಡಬೇಕೆಂದು ಕೋರಿದೆ.

ಮುಖ್ಯಮಂತ್ರಿ ಎಂ ಕೆ ಸ್ಟಾಲಿನ್ ಅವರು ಕಳೆದ ವಾರ ಚೆನ್ನೈನಲ್ಲಿ ನಡೆದ ಸಮಾರಂಭವೊಂದರಲ್ಲಿ ಮಾತನಾಡುತ್ತಾ, ಈ ವಿಷಯದ ಬಗ್ಗೆ ಸರ್ಕಾರ ಸುಪ್ರೀಂ ಕೋರ್ಟ್ ಮೊರೆ ಹೋಗುವುದಾಗಿ ತಿಳಿಸಿದ್ದರು. ಏಪ್ರಿಲ್‌ನಲ್ಲಿ ರಾಜ್ಯಪಾಲ ಆರ್.ಎನ್. ರವಿ ವಿರುದ್ಧದ ಪ್ರಕರಣದಲ್ಲಿ ಸಿಕ್ಕ ಜಯದಂತೆ ರಾಜ್ಯಕ್ಕೆ ನ್ಯಾಯ ಸಿಗಲಿದೆ ಎಂದು ಭರವಸೆಯನ್ನು ವ್ಯಕ್ತಪಡಿಸಿದ್ದರು.

RELATED ARTICLES
- Advertisment -
Google search engine

Most Popular