ಬೆಂಗಳೂರು: ಟಿಡಿಆರ್ ಹಗರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲುಯದ ಬೆಂಗಳೂರಿನ 9 ಸ್ಥಳಗಳಲ್ಲಿ ಇಡಿ ದಾಳಿ, ಶೋಧ ಅಧಿಕಾರಿಗಳು ವಾಲ್ಮಾರ್ಕ್ ರಿಯಾಲ್ಟಿ ಹೋಲ್ಡಿಂಗ್ಸ್ ಕಂಪನಿಗೆ ಸಂಬಂಧಿಸಿದ ಬೆಂಗಳೂರಿನಲ್ಲಿನ ಒಂಬತ್ತು ಸ್ಥಳಗಳಲ್ಲಿ ಏಕಾಕಾಲಕ್ಕೆ ದಾಳಿ ಮಾಡಿ, ದಾಖಲೆಗಳನ್ನು ಪರಿಶೀಲನೆ ನಡೆಸುತ್ತಿದ್ದಾರೆ.
ದಾಳಿ ವೇಳೆ ಅಕ್ರಮ ಹಣದ ವಹಿವಾಟು ನಡೆಸಿರುವ ದಾಖಲೆಗಳು ಪತ್ತೆಯಾಗಿವೆ.ಮೆಸರ್ಸ್ ವಾಲ್ಮಾರ್ಕ್ ರಿಯಾಲ್ಟಿ ಹೋಲ್ಡಿಂಗ್ಸ್ ಪ್ರೈವೇಟ್ ಲಿಮಿಟೆಡ್ ಕಂಪನಿ ವಿರುದ್ಧ ಟಿಡಿಆರ್ ಅನ್ನು ಅಕ್ರಮವಾಗಿ ಮಾರಾಟ ಮಾಡಿದ್ದಾರೆ ಎಂಬ ಆರೋಪ ಕೇಳಿಬಂದಿದೆ. ವಾಲ್ಮರ್ಕ್ ಮಾಲೀಕ ರತನ್ ಲಾತ್ ಅವರು ಡಿಸಿಆರ್ ಪಡೆದು, 27 ಕೋಟಿಯಷ್ಟು ಟಿಡಿಆರ್ ಅನ್ನು ಅಕ್ರಮವಾಗಿ ಮಾರಾಟ ಮಾಡಿದ್ದಾರೆ ಎಂಬ ಆರೋಪವಿದೆ. ಈ ಸಂಬಂಧ ಎಸಿಬಿ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಿ ಕೋರ್ಟ್ಗೆ ಚಾರ್ಜ್ ಶೀಟ್ ಸಲ್ಲಿಕೆ ಮಾಡಿದೆ.ಇದೀಗ, ಹಗರಣಕ್ಕೆ ಸಂಬಂಧಿಸಿದಂತೆ ಅಕ್ರಮ ಹಣ ವರ್ಗಾವಣೆ ಕಾಯ್ದೆ-2002ರ ನಿಬಂಧನೆ ಅಡಿಯಲ್ಲಿ ಇಡಿ ಅಧಿಕಾರಿಗಳು ದಾಳಿ ಮಾಡಿದ್ದಾರೆ.
ರಿಚ್ಮಂಡ್ ರಸ್ತೆಯಲ್ಲಿರುವ ಮೆಸರ್ಸ್ ವಾಲ್ಮಾರ್ಕ್ ರಿಯಾಲ್ಟಿ ಹೋಲ್ಡಿಂಗ್ಸ್ ಪ್ರೈವೇಟ್ ಲಿಮಿಟೆಡ್ ಕಂಪನಿ ಮತ್ತು ಕಂಪನಿಯ ನಿರ್ದೇಶಕರ ಮನೆಗಳ ಮೇಲೆ ದಾಳಿ ಮಾಡಿದ್ದಾರೆ. ದಾಳಿ ವೇಳೆ ಹಲವು ದಾಖಲೆಗಳನ್ನು ಇಡಿ ಅಧಿಕಾರಿಗಳು ವಶಪಡಿಸಿಕೊಂಡಿದ್ದಾರೆ.
ಟಿಡಿಆರ್ ಅನ್ನು ಬ್ರೋಕರ್ಗಳು ಮತ್ತು ಆಸ್ತಿಗಳ ಹಿಂದಿನ ಮಾಲೀಕರು, ಬಿಬಿಎಂಪಿ ನೌಕರರು ಕಂದಾಯ ಅಧಿಕಾರಿಗಳೊಂದಿಗೆ ಸೇರಿ ಸರ್ಕಾರಕ್ಕೆ ವಂಚನೆ ಮಾಡಿದ್ದಾರೆ. ಟಿಡಿಆರ್ ಪಡೆಯಲು ಶಾಮೀಲಾಗಿ ಸರ್ಕಾರವನ್ನು ಹಾಗೂ ಆಸ್ತಿಗಳ ನಿಜವಾದ ಮಾಲೀಕರನ್ನು ವಂಚಿಸಿದ್ದಾರೆ. ಬಿಬಿಎಂಪಿ ಅಧಿಕಾರಿಗಳು, ಕಂದಾಯ ಬ್ರೋಕರ್ ಗಳು ಶಾಮೀಲಾಗಿ ಸ್ವಾಧೀನಪಡಿಸಿಕೊಂಡ ಭೂಮಿಯ ವಿಸ್ತೀರ್ಣವನ್ನು ಹೆಚ್ಚಿಸಿದ್ದಾರೆ. ಸಾರ್ವಜನಿಕ ರಸ್ತೆಗಳನ್ನು, ಹೆಚ್ಚುವರಿ ಮಹಡಿಗಳು ಮತ್ತು ನಕಲಿ ಕಟ್ಟಡಗಳಿವೆ ಎಂದು ಹೇಳಿಕೊಂಡು ಸರ್ಕಾರಕ್ಕೆ ತಪ್ಪು ಲೆಕ್ಕ ನೀಡಿದ್ದಾರೆ. ಇದರಿಂದಾಗಿ ಬಿಬಿಎಂಪಿ ಮತ್ತು ರಾಜ್ಯ ಸರ್ಕಾರಕ್ಕೆ ಗಣನೀಯ ಆರ್ಥಿಕ ನಷ್ಟವಾಗಿದೆ.ಹಗರಣದಲ್ಲಿ ಬಿಬಿಎಂಪಿಯ ಉನ್ನತ ಅಧಿಕಾರಿಗಳೊಂದಿಗೆ ಡೆವಲಪರ್ಗಳು ಭಾಗಿಯಾಗಿರುವುದನ್ನು ಇಡಿ ಪತ್ತೆಹಚ್ಚಿದೆ. 2009 ರಿಂದ 2015 ರವರೆಗೆ ಬಿಬಿಎಂಪಿ ಮತ್ತು ನಂತರ ಬಿಡಿಎ ಬೆಂಗಳೂರಿನ ವಿವಿಧ ಪ್ರದೇಶಗಳಲ್ಲಿ ಹೊರಡಿಸಿದ ಟಿಡಿಆರ್‌ನಲ್ಲಿ ದೊಡ್ಡ ಪ್ರಮಾಣದ ಹಗರಣ ನಡೆದಿದೆ ಎನ್ನಲಾಗಿದೆ.