Monday, March 2, 2026
Google search engine

Homeರಾಜ್ಯಮಧ್ಯಪ್ರಾಚ್ಯ ದೇಶಗಳಲ್ಲಿ ಉದ್ವಿಗ್ನ: ಪ್ರತೀ ಜಿಲ್ಲೆಯಲ್ಲಿ 24x7 ತುರ್ತು ಸಹಾಯವಾಣಿ ಕೇಂದ್ರ ಆರಂಭ

ಮಧ್ಯಪ್ರಾಚ್ಯ ದೇಶಗಳಲ್ಲಿ ಉದ್ವಿಗ್ನ: ಪ್ರತೀ ಜಿಲ್ಲೆಯಲ್ಲಿ 24×7 ತುರ್ತು ಸಹಾಯವಾಣಿ ಕೇಂದ್ರ ಆರಂಭ

ಬೆಂಗಳೂರು: ಮಧ್ಯಪ್ರಾಚ್ಯ ದೇಶಗಳಲ್ಲಿ ಉದ್ವಿಗ್ನ ಪರಿಸ್ಥಿತಿ ಮುಂದುವರಿದಿರುವುದು ಹಾಗೂ ಅನೇಕ ರಾಷ್ಟ್ರಗಳು ವಾಯುಪ್ರದೇಶವನ್ನು ಮುಚ್ಚಿರುವ ಹಿನ್ನೆಲೆಯಲ್ಲಿ, ರಾಜ್ಯದ ಜನತೆಗೆ ನೆರವು ನೀಡಲು ಕರ್ನಾಟಕ ಸರ್ಕಾರ ರಾಜ್ಯ ಹಾಗೂ ಜಿಲ್ಲಾಮಟ್ಟದ ತುರ್ತು ಕಾರ್ಯಾಚರಣೆ ಕೇಂದ್ರಗಳನ್ನು (EOCs) ಆರಂಭಿಸಿದೆ.

ಈ ಕುರಿತು ಸಚಿವ ಕೃಷ್ಣ ಬೈರೇಗೌಡ ಮಾಹಿತಿ ನೀಡಿದ್ದು, ಮಧ್ಯಪ್ರಾಚ್ಯದ ಕೆಲವು ದೇಶಗಳಲ್ಲಿನ ಪ್ರಸ್ತುತ ಪರಿಸ್ಥಿತಿಯ ಹಿನ್ನೆಲೆ ಹಲವಾರು ರಾಷ್ಟ್ರಗಳು NOTAM ಘೋಷಿಸಿ ವೈಮಾನಿಕ ಸಂಚಾರವನ್ನು ನಿರ್ಬಂಧಿಸಿವೆ ಎಂದಿದ್ದಾರೆ. ನಾಗರಿಕ ವಿಮಾನಯಾನ ಸಚಿವಾಲಯದ ಸಲಹೆಯಂತೆ ಇರಾನ್, ಇಸ್ರೇಲ್, ಲೆಬನಾನ್, ಸೌದಿ ಅರೇಬಿಯಾಯ ಭಾಗಶಃ ಪ್ರದೇಶಗಳು, ಬಹ್ರೇನ್, ಓಮನ್, ಇರಾಕ್, ಜೋರ್ಡಾನ್, ಕುವೈತ್, ಯುನೈಟೆಡ್ ಅರಬ್ ಎಮಿರೇಟ್ಸ್ ಮತ್ತು ಕತಾರ್ ಮೇಲಿನ ವಾಯುಪ್ರದೇಶವನ್ನು ಮಾರ್ಚ್ 2ರವರೆಗೆ ಮುಚ್ಚಲಾಗಿದೆ.

ವಿಮಾನಯಾನ ವ್ಯತ್ಯಯದಿಂದಾಗಿ ಕರ್ನಾಟಕ ಸೇರಿದಂತೆ ವಿವಿಧ ರಾಜ್ಯಗಳ ಅನೇಕ ಪ್ರಯಾಣಿಕರು ಯುದ್ಧಪೀಡಿತ ಪ್ರದೇಶಗಳಲ್ಲಿ, ವಿಶೇಷವಾಗಿ ಯುಎಇನಲ್ಲಿ ಸಿಲುಕಿದ್ದಾರೆ. ಮುಖ್ಯಮಂತ್ರಿಗಳು ಹಾಗೂ ಕಂದಾಯ ಸಚಿವರ ನಿರ್ದೇಶನದಂತೆ ರಾಜ್ಯ ತುರ್ತು ಕಾರ್ಯಾಚರಣೆ ಕೇಂದ್ರ (SEOC) ಮತ್ತು ಎಲ್ಲಾ ಜಿಲ್ಲಾ ತುರ್ತು ಕಾರ್ಯಾಚರಣೆ ಕೇಂದ್ರಗಳು (DEOCs) ಪೂರ್ಣ ಪ್ರಮಾಣದಲ್ಲಿ ಸಕ್ರಿಯಗೊಂಡಿವೆ. ಇವು 24×7 ಪರಿಸ್ಥಿತಿಯನ್ನು ಮೇಲ್ವಿಚಾರಣೆ ಮಾಡುತ್ತಿವೆ.

ವಿದೇಶಾಂಗ ವ್ಯವಹಾರಗಳ ಸಚಿವಾಲಯ ಮತ್ತು ಸಂಬಂಧಿತ ದೇಶಗಳ ಭಾರತೀಯ ರಾಯಭಾರ ಕಚೇರಿಗಳ ಮಾರ್ಗಸೂಚಿಗಳನ್ನು ನಿರಂತರವಾಗಿ ನವೀಕರಿಸಲಾಗುತ್ತಿದೆ. ದೆಹಲಿಯ ಕರ್ನಾಟಕ ಭವನ ತಂಡವೂ ಸಮನ್ವಯ ಕಾರ್ಯದಲ್ಲಿ ತೊಡಗಿದೆ. ಸಾರ್ವಜನಿಕರಿಗೆ ಅಧಿಕೃತ ಸಾಮಾಜಿಕ ಜಾಲತಾಣಗಳ ಮೂಲಕ ಮಾಹಿತಿ ಹಂಚಲಾಗುತ್ತಿದೆ.

RELATED ARTICLES
- Advertisment -
Google search engine

Most Popular