Monday, June 22, 2026
Google search engine

Homeಸ್ಥಳೀಯಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಭೀಕರ ರಸ್ತೆ ಅಪಘಾತ : ಇಬ್ಬರು BEOಗಳಿಗೆ ಗಂಭೀರ ಗಾಯ

ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಭೀಕರ ರಸ್ತೆ ಅಪಘಾತ : ಇಬ್ಬರು BEOಗಳಿಗೆ ಗಂಭೀರ ಗಾಯ

ಮದ್ದೂರು :  ಮೈಸೂರು ಜಿಲ್ಲೆಯ ಬ್ಲಾಕ್ ಶಿಕ್ಷಣಾಧಿಕಾರಿಗಳು (BEO) ಪ್ರಯಾಣಿಸುತ್ತಿದ್ದ ವಾಹನಕ್ಕೆ ಟ್ಯಾಂಕರ್ ಡಿಕ್ಕಿ ಹೊಡೆದ ಪರಿಣಾಮ ಭೀಕರ ಅಪಘಾತ ಸಂಭವಿಸಿದ ಘಟನೆ ಮದ್ದೂರು ಸಮೀಪದ ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ ವೇನಲ್ಲಿ ನಡೆದಿದೆ.

ಮೈಸೂರು ಜಿಲ್ಲೆಯ ವಿವಿಧ ತಾಲ್ಲೂಕುಗಳ ಬಿಇಒಗಳು ಪ್ರಯಾಣಿಸುತ್ತಿದ್ದ ವೇಳೆ ಈ ದುರ್ಘಟನೆ ಸಂಭವಿಸಿದೆ. ಟ್ಯಾಂಕರ್ ಡಿಕ್ಕಿಯ ರಭಸಕ್ಕೆ ವಾಹನ ಜಖಂಗೊಂಡಿದ್ದು, ಅದರಲ್ಲಿದ್ದ ಅಧಿಕಾರಿಗಳ ಪೈಕಿ ಇಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ ಎಂದು ತಿಳಿದುಬಂದಿದೆ.

ಅಪಘಾತದ ಬಳಿಕ ವಾಹನದಲ್ಲಿ ಕೆಲವರು ಸಿಲುಕಿಕೊಂಡಿದ್ದು, ಸ್ಥಳದಲ್ಲಿದ್ದ ಸಾರ್ವಜನಿಕರು ಹಾಗೂ ಇತರ ವಾಹನ ಸವಾರರು ತಕ್ಷಣ ನೆರವಿಗೆ ಧಾವಿಸಿ ರಕ್ಷಣಾ ಕಾರ್ಯಾಚರಣೆ ನಡೆಸಿದರು. ವಾಹನದಲ್ಲಿ ಸಿಲುಕಿದ್ದವರನ್ನು ಸುರಕ್ಷಿತವಾಗಿ ಹೊರತೆಗೆದು ಆಸ್ಪತ್ರೆಗೆ ರವಾನಿಸಲಾಯಿತು.

ಗಾಯಾಳುಗಳಿಗೆ ಸಮೀಪದ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದ್ದು, ಅವರ ಆರೋಗ್ಯ ಸ್ಥಿತಿಯ ಬಗ್ಗೆ ಹೆಚ್ಚಿನ ಮಾಹಿತಿ ಇನ್ನಷ್ಟೇ ಲಭ್ಯವಾಗಬೇಕಿದೆ. ಅಪಘಾತದ ಸುದ್ದಿ ತಿಳಿಯುತ್ತಿದ್ದಂತೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಅಪಘಾತಕ್ಕೆ ನಿಖರ ಕಾರಣ ಏನು ಎಂಬುದು ಇನ್ನೂ ತಿಳಿದುಬಂದಿಲ್ಲ. ಈ ಸಂಬಂಧ ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗುತ್ತಿದೆ.

RELATED ARTICLES
- Advertisment -
Google search engine

Most Popular