Thursday, April 23, 2026
Google search engine

Homeರಾಜಕೀಯಇಡೀ ದೇಶ ಎಐಸಿಸಿ ಅಧ್ಯಕ್ಷರಿಂದ ಕ್ಷಮೆಯಾಚನೆ ಬಯಸುತ್ತದೆ : ಬಿ.ವೈ.ವಿಜಯೇಂದ್ರ

ಇಡೀ ದೇಶ ಎಐಸಿಸಿ ಅಧ್ಯಕ್ಷರಿಂದ ಕ್ಷಮೆಯಾಚನೆ ಬಯಸುತ್ತದೆ : ಬಿ.ವೈ.ವಿಜಯೇಂದ್ರ

ಬೆಂಗಳೂರು : ಮಲ್ಲಿಕಾರ್ಜುನ ಖರ್ಗೆ ಅವರು ಪ್ರಧಾನಿ ನರೇಂದ್ರ ಮೋದಿ ಅವರನ್ನು ಭಯೋತ್ಪಾದಕ ಎಂದು ಟೀಕಿಸಿದ ಬಗ್ಗೆ ಬಗ್ಗೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಕಿಡಿ ಕಾರಿದ್ದು, ಎಐಸಿಸಿ ಅಧ್ಯಕ್ಷರು ತಕ್ಷಣ ಕ್ಷಮೆಯಾಚಿಸಬೇಕು ಎಂದು ಪಟ್ಟು ಹಿಡಿದಿದ್ದಾರೆ.

ಇನ್ನೂ ಖರ್ಗೆ ಹೇಳಿಕೆ ವಿರುದ್ಧ ಬಿಜೆಪಿ ನಾಯಕರು ಪ್ರತಿಭಟನೆ ನಡೆಸಿದ್ದು, ಈ ವೇಳೆ ಮಾಧ್ಯಮಗಳೊಂದಿಗೆ ಮಾತನಾಡಿದ ವಿಜಯೇಂದ್ರ ನಾವು ಖರ್ಗೆ ಅವರ ಹೇಳಿಕೆಯನ್ನು ಬಲವಾಗಿ ಖಂಡಿಸುತ್ತೇವೆ. ಕಾಂಗ್ರೆಸ್ ಮತ್ತು ಮಲ್ಲಿಕಾರ್ಜುನ ಖರ್ಗೆ ಅವರ ಪರಿಸ್ಥಿತಿಯನ್ನು ನಾನು ಅರ್ಥಮಾಡಿಕೊಂಡಿದ್ದೇನೆ ಮತ್ತು ಅವರ ಬಗ್ಗೆ ಕರುಣೆ ತೋರುತ್ತೇನೆ. ಅವರಿಗೆ ಪ್ರಧಾನಿ ಮೋದಿ ಅವರ ಜನಪ್ರಿಯತೆಯನ್ನು ಸಹಿಸಲು ಸಾಧ್ಯವಾಗುತ್ತಿಲ್ಲ. 25 ಕ್ಕೂ ಹೆಚ್ಚು ದೇಶಗಳು ಪ್ರಧಾನಿಗೆ ಅತ್ಯುನ್ನತ ನಾಗರಿಕ ಪ್ರಶಸ್ತಿಯನ್ನು ನೀಡಿವೆ. ಇಡೀ ದೇಶವು ಎಐಸಿಸಿ ಅಧ್ಯಕ್ಷರಿಂದ ಕ್ಷಮೆಯಾಚನೆ ಬಯಸುತ್ತದೆ ಎಂದರು.

ಇದೇ ವೇಳೆ ಚುನಾವಣಾ ಆಯೋಗವು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರಿಗೆ ನೋಟಿಸ್ ಜಾರಿ ಮಾಡಿದ ಕುರಿತು ಪ್ರತಿಕ್ರಿಯೆ ನೀಡಿದ ಅವರು, ನಮಗೂ ನೋಟಿಸ್‌ಗೂ ಯಾವುದೇ ಸಂಬಂಧವಿಲ್ಲ. ಬಿಜೆಪಿ ಸದಸ್ಯರಾಗಿ ಮತ್ತು ಈ ದೇಶದ ಪ್ರಜೆಯಾಗಿ, ಮಲ್ಲಿಕಾರ್ಜುನ ಖರ್ಗೆ ಅವರು ತತ್ ಕ್ಷಣ ಕ್ಷಮೆಯಾಚಿಸಬೇಕು ಎಂದು ನಾವು ಒತ್ತಾಯಿಸುತ್ತೇವೆ. ಚುನಾವಣಾ ಆಯೋಗವು ತನ್ನ ಕರ್ತವ್ಯವನ್ನು ಮಾತ್ರ ನಿರ್ವಹಿಸಿದೆ ಎಂದು ಹೇಳಿದರು.

RELATED ARTICLES
- Advertisment -
Google search engine

Most Popular