ಮಂಡ್ಯ: ರೈತರ ನಿರಂತರ ಹೋರಾಟಕ್ಕೆ ಸರ್ಕಾರ ಮಣಿದಿದ್ದು, ಕೆಆರ್ ಎಸ್ ಜಲಾಶಯದಿಂದ ತಮಿಳುನಾಡಿಗೆ ಹರಿಸುತ್ತಿರುವ ನೀರಿನ ಪ್ರಮಾಣವನ್ನು ಕಡಿಮೆ ಮಾಡಿದೆ.
ಕೆಆರ್ ಎಸ್ ಜಲಾಶಯದಿಂದ ತಮಿಳುನಾಡಿಗೆ ಬಿಡಲಾಗುತ್ತಿದ್ದ ನೀರಿನ ಪ್ರಮಾಣವನ್ನು 10 ರಿಂದ 12 ಸಾವಿರ ಕ್ಯೂಸೆಕ್ ನಿಂದ 5 ಸಾವಿರ ಕ್ಯೂಸೆಕ್ ಗೆ ಇಳಿಕೆ ಮಾಡಲಾಗಿದೆ.
ಜಲಾಶಯದ ಗರಿಷ್ಟ ಮಟ್ಟ 124.80 ಅಡಿಯಾಗಿದ್ದು, ಸದ್ಯ ಜಲಾಶಯದ ನೀರಿನ ಮಟ್ಟ 102.74 ಅಡಿ ಇದೆ. ಒಳ ಹರಿವಿನ ಪ್ರಮಾಣ 3,276 ಕ್ಯೂಸೆಕ್ ಹಾಗೂ ಹೊರ ಹರಿವಿನ ಪ್ರಮಾಣ 5,743 ಕ್ಯೂಸೆಕ್ ಇದೆ.
ಇದುವರೆಗೂ ಕೆಆರ್ ಎಸ್ ಜಲಾಶಯದಿಂದ ತಮಿಳುನಾಡಿಗೆ ಸುಮಾರು 8 TMC ನೀರು ಹರಿದು ಹೋಗಿದೆ. ಈ ಹಿನ್ನಲೆ ಮಂಡ್ಯದಲ್ಲಿ ಕಾವೇರಿ ಕಿಚ್ಚು ಜೋರಾಗಿತ್ತು. ಅನ್ನದಾತರ ಹೋರಾಟಕ್ಕೆ ಮಣಿದು ಸರ್ಕಾರ ನೀರು ಹರಿಸುವಿಕೆ ಪ್ರಮಾಣ ಕಡಿಮೆ ಮಾಡಿದೆ.