Saturday, May 24, 2025
Google search engine

Homeಅಪರಾಧಮದ್ಯಪಾನಕ್ಕೆ ಹಣ ನೀಡದ ಪತ್ನಿ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿದ ಪತಿ

ಮದ್ಯಪಾನಕ್ಕೆ ಹಣ ನೀಡದ ಪತ್ನಿ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿದ ಪತಿ

ದಾವಣಗೆರೆ: ಮದ್ಯಪಾನಕ್ಕೆ ಹಣ ನೀಡದ ಪತ್ನಿ ಮೇಲೆ ಪತಿ ಮಾರಣಾಂತಿಕ ಹಲ್ಲೆ ನಡೆಸಿರುವ ಘಟನೆ ಜಿಲ್ಲೆಯ ಚನ್ನಗಿರಿ ತಾಲೂಕಿನ ಗುಡ್ಡದ ಕೊಮರನಹಳ್ಳಿ ಗ್ರಾಮದಲ್ಲಿ ನಡೆದಿದೆ.

ಆರೋಪಿ ಪತಿ ಕದರಪ್ಪ (60) ಪರಾರಿಯಾಗಿದ್ದಾನೆ. ಸಾಕಮ್ಮ (55) ಹಲ್ಲೆಗೊಳಗಾದವರು.

ಕದರಪ್ಪ ಮತ್ತು ಸಾಕಮ್ಮ ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲೂಕಿನ ಇದ್ದಲ ನಾಗೇನಹಳ್ಳಿ ಗ್ರಾಮದ ನಿವಾಸಿಗಳು. ಕುಡಿತದ ಚಟಕ್ಕೆ ದಾಸನಾಗಿದ್ದ ಕದರಪ್ಪ ಹಣ ನೀಡುವಂತೆ ಪತ್ನಿಗೆ ಪೀಡಿಸಿದ್ದಾನೆ. ಆಕೆ ಹಣ ನೀಡಲು ನಿರಾಕರಿಸಿದಳು ಎಂಬ ಕಾರಣಕ್ಕೆ ತಲೆ ಮೇಲೆ ಕಲ್ಲು ಎತ್ತಿಹಾಕಿ ಹಲ್ಲೆ ಮಾಡಿದ್ದಾನೆ.

ಗಾಯಗೊಂಡು ನರಳುತ್ತಿದ್ದ ಸಾಕಮ್ಮಳನ್ನು ಕುರಿಗಾಯಿಗಳು ಆಸ್ಪತ್ರೆಗೆ ದಾಖಲಿಸಿದ್ದಾರೆ. ದಾವಣಗೆರೆ ಎಸ್​.ಎಸ್.ಹೈಟೆಕ್ ಆಸ್ಪತ್ರೆಯ ತೀವ್ರ ನಿಗಾ ಘಟಕದಲ್ಲಿ ಇದೀಗ ಚಿಕಿತ್ಸೆ ನೀಡಲಾಗುತ್ತಿದೆ. ಪ್ರಕರಣ ದಾಖಲಿಸಿಕೊಂಡಿರುವ ಬಸವಪಟ್ಟಣ ಪೊಲೀಸರು ಆರೋಪಿ ಪತ್ತೆಗೆ ಕಾರ್ಯಾಚರಣೆ ನಡೆಸುತ್ತಿದ್ದಾರೆ.

RELATED ARTICLES
- Advertisment -
Google search engine

Most Popular