Saturday, December 27, 2025
Google search engine

Homeದೇಶಕರ್ನಾಟಕ ಸರ್ಕಾರಕ್ಕೂ ಉತ್ತರ ಪ್ರದೇಶ ಸರ್ಕಾರದ ಗಾಳಿ ಬೀಸಿದೆ : ಕೇರಳ ಸಿಎಂ ಪಿಣರಾಯಿ ವಿಜಯನ್...

ಕರ್ನಾಟಕ ಸರ್ಕಾರಕ್ಕೂ ಉತ್ತರ ಪ್ರದೇಶ ಸರ್ಕಾರದ ಗಾಳಿ ಬೀಸಿದೆ : ಕೇರಳ ಸಿಎಂ ಪಿಣರಾಯಿ ವಿಜಯನ್ ಟೀಕೆ

ಬೆಂಗಳೂರು: ಕರ್ನಾಟಕ ಸರ್ಕಾರಕ್ಕೂ ಉತ್ತರ ಪ್ರದೇಶ ಸರ್ಕಾರದ ಗಾಳಿ ಬೀಸಿದೆ. ಅಲ್ಲಿನ ಬುಲ್ಡೋಜರ್ ನೀತಿಯನ್ನು ಇಲ್ಲೂ ತರುವ ಕೆಲಸ ನಡೆಯುತ್ತಿದೆ ಎಂದು ಕೇರಳದ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಕರ್ನಾಟಕದ ಕಾಂಗ್ರೆಸ್​​​ ಸರ್ಕಾರದ ವಿರುದ್ಧ ಕಿಡಿಕಾರಿದ್ದಾರೆ.

ಇನ್ನೂ ಈ ಕುರಿತು, ಬೆಂಗಳೂರಿನ ಯಲಹಂಕದ ಕೋಗಿಲು ಗ್ರಾಮದ ಫಕೀರ್ ಕಾಲೋನಿ ಮತ್ತು ವಸೀಮ್ ಲೇಔಟ್‌ನಲ್ಲಿರುವ ಮುಸ್ಲಿಂ ವಸತಿಗಳನ್ನು ನೆಲಸಮ ಮಾಡಿರುವುದು ತುಂಬಾ ದುಃಖಕರ ವಿಚಾರ, ಅಲ್ಲಿ ಮುಸ್ಲಿಂ ಕುಟುಂಬಗಳು ಹಲವು ವರ್ಷಗಳಿಂದ ವಾಸಿಸುತ್ತಿದ್ದವು. ಇದೀಗ ಏಕಾಏಕಿ ಈ ಚಳಿಗಾಲದಲ್ಲಿ ಮನೆಗಳನ್ನು ನೆಲಸಮ ಮಾಡಿದರೆ ಅವರು ಎಲ್ಲಿಗೆ ಹೋಗಬೇಕು. ಈ ಚಳಿಯಲ್ಲಿ ಮಕ್ಕಳು, ಮಹಿಳೆಯರನ್ನು ಬೀದಿಗೆ ಹಾಕಿದ್ದಾರೆ ಎಂದು ಕೇರಳ ಮುಖ್ಯಮಂತ್ರಿಗಳು ಸೋಷಿಯಲ್ ಮೀಡಿಯಾ ಮೂಲಕ ಆಕ್ರೋಶ ಹೊರಹಾಕಿದ್ದಾರೆ.

ಬೆಂಗಳೂರಿನ ಫಕೀರ್ ಕಾಲೋನಿ ಮತ್ತು ವಸೀಮ್ ಲೇಔಟ್‌ನಲ್ಲಿ ವರ್ಷಗಳಿಂದ ವಾಸಿಸುತ್ತಿದ್ದ ಮುಸ್ಲಿಂ ಕುಟುಂಬಗಳನ್ನು ಬೀದಿಗೆ ಹಾಕಿ, ಬುಲ್ಡೋಜರ್ ರಾಜ್ ಕ್ರಮವನ್ನು ಕರ್ನಾಟಕ ಕಾಂಗ್ರೆಸ್​​ ಸರ್ಕಾರ ಅನುಸರಿಸುತ್ತಿದೆ ಎಂದು ಮುಖ್ಯಮಂತ್ರಿ ಪಿಣರಾಯಿ ವಿಜಯನ್ ತಮ್ಮ ಎಕ್ಸ್​​​ ಪೋಸ್ಟ್ ನಲ್ಲಿ ಬರೆದುಕೊಂಡಿದ್ದಾರೆ.

ಅಷ್ಟಲ್ಲದೇ ದುಃಖಕರ ವಿಚಾರವೆಂದರೆ ಸಂಘ ಪರಿವಾರದ ಅಲ್ಪಸಂಖ್ಯಾತ ವಿರೋಧಿ ರಾಜಕೀಯವನ್ನು ಈಗ ಕರ್ನಾಟಕದ ಕಾಂಗ್ರೆಸ್ ಸರ್ಕಾರ ಕೂಡ ಮಾಡುತ್ತಿದ್ದು, ಭಯ ಮತ್ತು ಕ್ರೂರತೆಯ ಬಲದ ಮೂಲಕ ಆಡಳಿತ ನಡೆಸುವಾಗ, ಸಾಂವಿಧಾನಿಕ ಮೌಲ್ಯಗಳು ಮತ್ತು ಮಾನವ ಘನತೆಯು ಮೊದಲ ಬಲಿಪಶುಗಳಾಗುತ್ತವೆ. ಈ ಮೋಸದ ಪ್ರವೃತ್ತಿಯನ್ನು ವಿರೋಧಿಸಲು ಮತ್ತು ಸೋಲಿಸಲು ಎಲ್ಲಾ ಜಾತ್ಯತೀತ ಮತ್ತು ಪ್ರಜಾಪ್ರಭುತ್ವ ಶಕ್ತಿಗಳು ಒಟ್ಟಾಗಿ ಒಟ್ಟುಗೂಡಬೇಕು ಎಂದು ತಿಳಿಸಿದ್ದಾರೆ.

RELATED ARTICLES
- Advertisment -
Google search engine

Most Popular