ನವದೆಹಲಿ: ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್ ಸೇರಿ 7 ಆರೋಪಿಗಳ ಜಾಮೀನು ರದ್ದುಗೊಳಿಸಿ, ಸುಪ್ರೀಂಕೋರ್ಟ್ ಅವರನ್ನು ತಕ್ಷಣ ಬಂಧಿಸಲು ಆದೇಶಿಸಿದೆ. ನ್ಯಾಯಮೂರ್ತಿ ಜೆ.ಬಿ. ಪರ್ದಿವಾಲಾ ಹಾಗೂ ಆರ್. ಮಹದೇವನ್ ನೇತೃತ್ವದ ಪೀಠ, ಹೈಕೋರ್ಟ್ ತೀರ್ಪಿನಲ್ಲಿ ಲೋಪವಿದೆ ಎಂದು ತೀರ್ಮಾನಿಸಿದೆ.
ಜೈಲಿನಲ್ಲಿ ದರ್ಶನ್‌ಗೆ ವಿಶೇಷ ಆತಿಥ್ಯ ನೀಡಿದ ಪ್ರಕರಣಕ್ಕೂ ಗರಂ ಆಗಿರುವ ನ್ಯಾಯಪೀಠ, “ಯಾರು ಎಷ್ಟೇ ದೊಡ್ಡವರಾಗಿದ್ದರೂ ಕಾನೂನಿಗಿಂತ ಮೇಲ್ಪಟ್ಟವರಲ್ಲ” ಎಂದು ತೀವ್ರ ಎಚ್ಚರಿಕೆ ನೀಡಿದೆ.
ಜೈಲಿನಲ್ಲಿ ವಿಶೇಷ ಆತಿಥ್ಯ ನೀಡಬಾರದು. ಇನ್ಮುಂದೆ ಯಾವುದೇ ಪೋಟೊ ಕಂಡು ಬಂದರೆ ಕ್ರಮ ಕೈಗೊಳ್ಳುತ್ತೇವೆ. ಆರೋಪಿ ಜೈಲಿನಲ್ಲಿ ಕುಳಿತು ಸಿಗರೇಟ್ ಸೇದಿದರೆ ಜೈಲು ಅಧಿಕಾರಿಗಳ ವಿರುದ್ದ ಕ್ರಮ ಕೈಗೊಳ್ಳಲಾಗುವುದು. ಇದೊಂದು landmark ತೀರ್ಪು ಎಂದು ಸುಪ್ರೀಂಕೋರ್ಟ್ ಗಮನಾರ್ಹ ಸೂಚನೆ ನೀಡಿದೆ.