ಹಾವೇರಿ: ಕಳೆದೊಂದು ತಿಂಗಳಿನಿಂದ ರೈತರ ನಿದ್ದೆಗೆಡಿಸಿದ್ದ ಚಿರತೆಯನ್ನು ಸೆರೆ ಹಿಡಿಯುವಲ್ಲಿ ಕೊನೆಗೂ ಅರಣ್ಯ ಇಲಾಖೆ ಯಶಸ್ವಿಯಾಗಿದೆ.
ಕಡೂರು ಗ್ರಾಮದ ಗುಡ್ಡದ ಸಮೀಪದ ರೈತರ ಜಮೀನಿನಲ್ಲಿ ಈ ಚಿರತೆಯನ್ನು ಸೆರೆ ಹಿಡಿಯಲಾಗಿದ್ದು, ಕಳೆದ ಒಂದು ತಿಂಗಳಿನಿಂದ ಈ ಪ್ರದೇಶದಲ್ಲಿ ಚಿರತೆ ನಿರಂತರವಾಗಿ ಓಡಾಡುತ್ತಿದೆ ಎನ್ನಲಾಗಿತ್ತು.
ಇದರಿಂದ ಆತಂಕಗೊಂಡಿದ್ದ ರೈತರು ಚಿರತೆ ಭಯದಿಂದ ಕೃಷಿ ಕೆಲಸಕ್ಕೆ ಹೋಗಲು ಹಿಂದೇಟು ಹಾಕುತ್ತಿದ್ದರು. ಕಳೆದ ವಾರದ ತೋಟದ ಮನೆಯೊಂದರ ಸಿಸಿಟಿವಿಯಲ್ಲಿ ಚಿರತೆ ಓಡಾಡುತ್ತಿರುವ ದೃಶ್ಯ ಸೆರೆಯಾಗಿತ್ತು. ಇದೀಗ ಅರಣ್ಯ ಇಲಾಖೆ ಚಿರತೆಯನ್ನು ಪತ್ತೆ ಮಾಡಿ, ಸೆರೆಹಿಡಿಯುವಲ್ಲಿ ಯಶಸ್ವಿಯಾಗಿದೆ.



