Tuesday, May 20, 2025
Google search engine

Homeರಾಜ್ಯಮೋಟಾರು ವಾಹನ ನಿರೀಕ್ಷಕ ಹುದ್ದೆ ಶೀಘ್ರ ಭರ್ತಿ: ಸಚಿವ ರಾಮಲಿಂಗಾರೆಡ್ಡಿ

ಮೋಟಾರು ವಾಹನ ನಿರೀಕ್ಷಕ ಹುದ್ದೆ ಶೀಘ್ರ ಭರ್ತಿ: ಸಚಿವ ರಾಮಲಿಂಗಾರೆಡ್ಡಿ

ಬೆಂಗಳೂರು: ಸಾರಿಗೆ ಇಲಾಖೆಯಲ್ಲಿ ಖಾಲಿ ಇದ್ದ 286 ಮೋಟಾರು ವಾಹನ ನಿರೀಕ್ಷಕ ಹುದ್ದೆಗಳ ಪೈಕಿ ಈಗ 84 ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳಲಾಗಿದ್ದು, ಶೀಘ್ರದಲ್ಲಿ ಇನ್ನೂ 76 ಹುದ್ದೆ ಭರ್ತಿಗೆ ಚಾಲನೆ ನೀಡಲಾಗಿದೆ ಎಂದು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ತಿಳಿಸಿದರು.

ಸಾರಿಗೆ ಇಲಾಖೆಗೆ ಹೊಸದಾಗಿ ನೇಮಕಗೊಂಡಿರುವ 83 ಮೋಟಾರು ವಾಹನ ನಿರೀಕ್ಷಕರಿಗೆ ತರಬೇತಿಗೆ ಚಾಲನೆ ನೀಡಿ ನಂತರ ಮಾತನಾಡಿದ ಅವರು, 150 ಮೋಟಾರು ವಾಹನ ನಿರೀಕ್ಷಕ ಹುದ್ದೆ ಭರ್ತಿಗೆ 2016ರಲ್ಲಿಯೇ ರಾಜ್ಯ ಲೋಕಸೇವಾ ಆಯೋಗದಿಂದ ಪರೀಕ್ಷೆ ನಡೆಸಲಾಗಿತ್ತು.

ಪರೀಕ್ಷೆ ನಡೆಸಿದ ನಂತರ ಮೋಟಾರು ವಾಹನ ನಿರೀಕ್ಷಕ ಹುದ್ದೆಗೆ ಯಾವುದಾದರು ಕಾರ್ಯಾಗಾರ (ಗ್ಯಾರೇಜ್‌)ದಲ್ಲಿ ಒಂದು ವರ್ಷ ಕಾಲ ಸೇವಾನುಭವ ಹೊಂದಿರುವವರನ್ನು ಮಾತ್ರ ಹುದ್ದೆಗೆ ಭರ್ತಿ ಮಾಡಬೇಕು ಎಂದು ಹೈಕೋರ್ಟ್‌ ಮತ್ತು ಸುಪ್ರೀಂ ಕೋರ್ಟ್‌ ಸೂಚನೆ ನೀಡಿದ್ದವು. ಹೀಗಾಗಿ ನೇಮಕಾತಿ ಪ್ರಕ್ರಿಯೆ ವಿಳಂಬವಾಗಿ, ಇದೀಗ ಅರ್ಹ 83 ಮಂದಿಯನ್ನು ನೇಮಕ ಮಾಡಿಕೊಳ್ಳಲಾಗಿದೆ ಎಂದರು.

ಹೊಸ ನೇಮಕಾತಿಯಾದರೂ ಇನ್ನೂ 202 ಹುದ್ದೆಗಳು ಖಾಲಿ ಉಳಿಯಲಿದ್ದು, ಆ ಪೈಕಿ 76 ಹುದ್ದೆಗಳ ಭರ್ತಿಗೆ ಕ್ರಮ ಕೈಗೊಳ್ಳಲಾಗುತ್ತಿದೆ. ರಾಜ್ಯ ಲೋಕಸೇವಾ ಆಯೋಗದಿಂದ ಪರೀಕ್ಷೆ ನಡೆಸಿ, ನಿಯಮದಂತೆ ನೇಮಕಾತಿ ಪ್ರಕ್ರಿಯೆ ನಡೆಸಲಾಗುವುದು. ಅದರ ಜತೆಗೆ ಇನ್ನೂ 110 ಮೋಟಾರು ವಾಹನ ನಿರೀಕ್ಷಕರ ಹುದ್ದೆ ಭರ್ತಿಗೆ ಅನುಮತಿ ಕೋರಿ ಸರ್ಕಾರಕ್ಕೆ ಕಳುಹಿಸಲಾಗಿದೆ ಎಂದು ಹೇಳಿದರು. ಸಾರಿಗೆ ಆಯುಕ್ತ ಯೋಗೀಶ್‌, ಅಪರ ಸಾರಿಗೆ ಆಯುಕ್ತರಾದ ಮಲ್ಲಿಕಾರ್ಜುನ್‌, ಜ್ಞಾನೇಂದ್ರ ಕುಮಾರ್‌ ಇತರರಿದ್ದರು.

RELATED ARTICLES
- Advertisment -
Google search engine

Most Popular